ಗೌರಿ ಲಂಕೇಶ್ ಹತ್ಯೆ ಪ್ರಕರಣ, ರಾಹುಲ್ ವಿರುದ್ಧ ಚಿಕ್ಕಮಗಳೂರಿನಲ್ಲಿ ದೂರು

Subscribe to Oneindia Kannada

ಚಿಕ್ಕಮಗಳೂರು, ಸೆಪ್ಟೆಂಬರ್ 8: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಆರ್.ಎಸ್.ಎಸ್ ಮತ್ತು ಬಿಜೆಪಿ ಹೆಸರು ಎಳೆದು ತಂದಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ.

ಗೌರಿ ಹತ್ಯೆ : ಗಾಂಭೀರ್ಯ ಕಳೆದುಕೊಂಡ ರಾಹುಲ್ ವ್ಯಾಖ್ಯಾನ

ಗೌರಿ ಲಂಕೇಶ್ ಹತ್ಯೆ ಬೆನ್ನಿಗೆ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, " ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS ) ಸಿದ್ಧಾಂತವನ್ನು ವಿರೋಧಿಸುವವರನ್ನು ಕೊಲ್ಲಲಾಗುತ್ತಿದೆ. ಸತ್ಯ ಇಂದಲ್ಲಾ ನಾಳೆ ಹೊರಗೆ ಬಂದೇ ಬರುತ್ತದೆ. ಗೌರಿ ನಮ್ಮ ಹೃದಯದಲ್ಲಿದ್ದಾರೆ. ಗೌರಿ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿಯನ್ನು ನೀಡಲಿ," ಎಂದು ಹೇಳಿಕೆ ನೀಡಿದ್ದರು. ಈ ಮೂಲಕ ಗೌರಿ ಹತ್ಯೆಗೆ ನೇರವಾಗಿ ಸಂಘ ಪರಿವಾರದ ಮೇಲೆ ಗೂಬೆ ಕೂರಿಸಿದ್ದರು.

Gauri Lankesh Murder: Complaint filed against Rahul Gandhi in Chikkamagaluru

ಇದೀಗ ರಾಹುಲ್ ಗಾಂಧಿ ವಿರುದ್ಧ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Complaint filed against Rahul Gandhi by BJP workers in Chikkamagaluru, Karnataka after his statement on Gauri Lankesh murder.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ