ಗೌರಿ ಹತ್ಯೆ, ತೆಲಂಗಾಣ ಗುಪ್ತಚರ ಇಲಾಖೆ ಸಹಕಾರ ಪಡೆದ ಪೊಲೀಸ್

ಬೆಂಗಳೂರು, ಸೆಪ್ಟೆಂಬರ್ 10 : ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ತೆಲಂಗಾಣ ಗುಪ್ತಚರ ಇಲಾಖೆ ಸಹಾಯ ಪಡೆಯಲು ಮುಂದಾಗಿದ್ದಾರೆ. ಸೆ.5ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.

ಗೌರಿ ಲಂಕೇಶ್ ಹತ್ಯೆಯಲ್ಲಿ ನಕ್ಸಲ್ ನಾಯಕರ ಕೈವಾಡವಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದ್ದರಿಂದ, ತೆಲಂಗಾಣದ ಗುಪ್ತಚರ ಇಲಾಖೆಯ ಸಹಕಾರ ಪಡೆಯಲು ಮುಂದಾಗಿದ್ದಾರೆ. ಆದರೆ, ಗುಪ್ತಚರ ಇಲಾಖೆ ಗೌರಿ ಲಂಕೇಶ್ ಹತ್ಯೆಯಲ್ಲಿ ನಕ್ಸಲ್ ಕೈವಾಡದ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

Gauri Lankesh murder: Cops reach out to IB for naxal link

ನಕ್ಸಲರು ನಗರ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುವುದಿಲ್ಲ. ನಕ್ಸಲರು ಹತ್ಯೆ ಮಾಡಲು ಯಾವುದೇ ಸುಪಾರಿ ಹಂತಕರನ್ನು ಬಳಸಿಕೊಳ್ಳುವುದಿಲ್ಲ. ಅವರೇ ಸ್ವತಃ ಕಾರ್ಯಾಚರಣೆ ನಡೆಸುತ್ತಾರೆ ಎಂದು ಗುಪ್ತಚರ ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ನಕ್ಸಲರು ಸಕ್ರಿಯರಾಗಿಲ್ಲ. ನಕ್ಸಲರು ಈ ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಮಾಹಿತಿಗಳು ಇಲ್ಲ ಎಂದು ತೆಲಂಗಾಣ ಗುಪ್ತಚರ ಇಲಾಖೆ ಅಧಿಕಾರಿಗಳು ಬೆಂಗಳೂರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

ಕರ್ನಾಟಕ ಸರ್ಕಾರ ಗೌರಿ ಲಂಕೇಶ್ ಹತ್ಯೆಯ ತನಿಖೆಗೆ ಎಸ್‌ಐಟಿ ರಚನೆ ಮಾಡಿದೆ. ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದ ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+