ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಹಿಂಗಾ ಮಾಡೋದು, ವೈರಲ್ ವಿಡಿಯೋದಲ್ಲೇನಿದೆ
ಕನ್ನಡದ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್‌ನ ಪ್ರಮುಖ ಆರೋಪಿಗಳನ್ನು ನಡೆಸಿಕೊಂಡಿರುವ ರೀತಿಗೆ ಇದೀಗ ಭಾರೀ ವಿರೋಧ ವ್ಯಕ್ತವಾಗಿದೆ. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಕೃತ್ಯಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಭಾರೀ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗಿತ್ತು. ಆದರೆ, ಇದೀಗ...
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಹಾಗೂ ಮನೋಹರ್ ಯಡವೆಗೆ ಎನ್ನುವವರು ಈಚೆಗೆ ಜಾಮೀನಿನ ಮೇಲೆ ಹೊರ ಬಂದಿದ್ದು, ಈ ಆರೋಪಿಗಳನ್ನು ನಡೆಸಿಕೊಂಡಿರುವ ವಿಷಯ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಸಾಮಾನ್ಯವಾಗಿ ಅಪರಾಧಿಗಳು ಹಾಗೂ ಆರೋಪಿಗಳು ಜೈಲಿನಿಂದ ಬಿಡುಗಡೆಯಾದಾಗ ಅಥವಾ ಜಾಮೀನಿನ ಹೊರಗೆ ಬಂದರೆ, ಅವರನ್ನು ಸನ್ಮಾನಿಸುವುದು ಹೊರ ರಾಜ್ಯಗಳಲ್ಲಿ ನಡೆಯುತ್ತಿತ್ತು. ಈ ರೀತಿಯ ಬೆಳವಣಿಗೆಗಳು ಕರ್ನಾಟಕದಲ್ಲಿ ಅಪರೂಪವಾಗಿತ್ತು. ಆದರೆ, ಕರ್ನಾಟಕದಲ್ಲಿ ಈಗ ನಡೆದಿರುವ ಘಟನೆಗೆ ವಿರೋಧ ವ್ಯಕ್ತವಾಗಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಹಾಗೂ ಮನೋಹರ್ ಯಡವೆಗೆ ಎನ್ನುವವರಿಗೆ ಈಚೆಗೆ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಮೇಲೆ ಬಂದ ಈ ಆರೋಪಿಗಳನ್ನು ರಾಜ್ಯದ ಹಿಂದೂಪರ ಸಂಘಟನೆಗಳು ಹಾರ ಹಾಕಿ ಸನ್ಮಾನ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ, ಹಿಂದೂಪರ ಸಂಘಟನೆಗಳು ಸನ್ಮಾನದ ವಿಷಯವನ್ನು ಸಮರ್ಥಿಸಿಕೊಂಡಿದ್ದು, ಕಾಂಗ್ರೆಸ್ ಸರ್ಕಾರವನ್ನು ದೂಷಿಸಿವೆ.
ಹಿಂದೂಪರ ಸಂಘಟನೆಗಳಿಂದ ಸನ್ಮಾನ: ಜೈಲಿನಿಂದ ಜಾಮೀನಿನ ಮೇಲೆ ಹೊರಗೆ ಬಂದಿರುವ ಪರಶುರಾಮ್ ಹಾಗೂ ಮನೋಹರ್ ಅವರನ್ನು ಹಿಂದೂಪರ ಸಂಘಟನೆಗಳಿಂದ ಸ್ವಾಗತಿಸಿ, ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಸನಾತನ ಧರ್ಮಕ್ಕೆ ಜೈ.. ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಇನ್ನು ಆರೋಪಿಗಳು ಕಾಳಿಕಾದೇವಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಂತರ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಹೂವಿನ ಹಾರಹಾಕಿ ಪೂಜೆ ಮಾಡಿದ್ದಾರೆ.
ಹಿಂದೂ ಕಾರ್ಯಕರ್ತರೇ ಗುರಿ: ಈ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಆರೋಪಿಗಳಿಗೆ ಸನ್ಮಾನ್ ಮಾಡಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗೌರಿ ಲಂಕೇಶ್ ಹತ್ಯೆ ಕೇಶ್‌ನಲ್ಲಿ ಅಮಾಯಕರನ್ನು ಬಂಧಿಸಲಾಗಿತ್ತು. ಅಲ್ಲದೇ ಅವರಿಗೆ ಅನ್ಯಾಯವಾಗಿ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹೇಳಿದ್ದಾರೆ. ಆರೋಪಿಗಳಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಂಬಂಧವಿಲ್ಲ ಎಂದು ಹಿಂದೂಪರ ಸಂಘಟನೆಯ ಸದಸ್ಯರು ವಾದ ಮಾಡಿದ್ದಾರೆ. ಆದರೆ, ಆರೋಪಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಗೌರಿ ಲಂಕೇಶ್ ಹತ್ಯೆ: ಕರ್ನಾಟಕದ ಪ್ರಮುಖ ಹಾಗೂ ಪತ್ರಕರ್ತೆ ಹಾಗೂ ಲಂಕೇಶ್ ಅವರ ಅವರ ಪುತ್ರಿ ಗೌರಿ ಲಂಕೇಶ್ ಅವರನ್ನು 2017ರಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಅವರು ಲಂಕೇಶ್ ಪತ್ರಿಕೆಯ ಸಂಪಾದಕಿ ಸಹ ಆಗಿದ್ದರು. ಬೆಂಗಳೂರಿನ ರಾಜರಾಜೇಶ್ವರಿ ನಗರದ ಗೌರಿ ಲಂಕೇಶ್ ಮನೆಯ ಮುಂದೆಯೇ ಅವರ ಮೇಲೆ ಗುಂಡಿನ ದಾಳಿಯಾಗಿತ್ತು. ಬೈಕ್‌ನಲ್ಲಿ ಬಂದಿದ್ದ ಇಬ್ಬರು ಏಕಾಏಕಿ ಗೌರಿ ಲಂಕೇಶ್ ಮೇಲೆ ಗುಂಡು ಹಾರಿಸಿದ್ದರು. ಈ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.












Click it and Unblock the Notifications