ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರ್ಕಾರ ಈಗಲೂ ಕುರುಡು, ಕಿವುಡು; ಸಿದ್ದರಾಮಯ್ಯ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 01: "ದೇಶದ ಜಿಡಿಪಿ ಶೇಕಡಾ 23.9ರಷ್ಟು ಕುಸಿತ ಕಂಡಿರುವುದು ಆಘಾತಕಾರಿ ಬೆಳವಣಿಗೆ ನಿಜ. ಈ ಕುಸಿತದ ಪೂರ್ಣ ಹೊಣೆಯನ್ನು ಕೊರೊನಾ ರೋಗದ ಮೇಲೆ ಹೇರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಇನ್ನೂ ಹೆಚ್ಚಿನ ಆಘಾತಕಾರಿ ಬೆಳವಣಿಗೆ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Recommended Video

Elon Musk ಈಗ Facebook ಸಂಸ್ಥಾಪಕ Mark Zuckerbergಗಿಂತ ಶ್ರೀಮಂತ | Oneindia Kannada

ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ದೇಶದ ಆರ್ಥಿಕತೆ ರೋಗಗ್ರಸ್ತವಾಗಿದೆ" ಎಂದು ಅವರು ದೂರಿದ್ದಾರೆ.

 ಭಾರತದ ಜಿಡಿಪಿ ಕುಸಿತ: 'ಆರ್ಥಿಕ ದುರಂತ' ಎಂದ ಪಿ. ಚಿದಂಬರಂ ಭಾರತದ ಜಿಡಿಪಿ ಕುಸಿತ: 'ಆರ್ಥಿಕ ದುರಂತ' ಎಂದ ಪಿ. ಚಿದಂಬರಂ

"ಆರ್‌ಬಿಐ ಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರ ತನಕ ಖ್ಯಾತ ಆರ್ಥಿಕ ತಜ್ಞರೆಲ್ಲರೂ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ಪಟ್ಟು ಎಚ್ಚರಿಸಿದ್ದಾರೆ. ಆಗಲೂ ಈಗಲೂ ಸರ್ಕಾರ ಕುರುಡು-ಕಿವುಡು" ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಹೇಳಿದ್ದಾರೆ.

 ಜೂನ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ. 23.9 ರಷ್ಟು ಕುಸಿತ: 24 ವರ್ಷಗಳಲ್ಲಿ ಅತ್ಯಂತ ಕಳಪೆ ಜೂನ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ. 23.9 ರಷ್ಟು ಕುಸಿತ: 24 ವರ್ಷಗಳಲ್ಲಿ ಅತ್ಯಂತ ಕಳಪೆ

"2015ರಲ್ಲಿ ಜಿಡಿಪಿ ಅಂದಾಜು ಮಾಡುವ ಮೂಲವರ್ಷವನ್ನು 2004-05ರಿಂದ 2011-12ಕ್ಕೆ ಬದಲಾಯಿಸಲಾಯಿತು. ಅದರ ನಂತರ ಬಣ್ಣ ಬಯಲಾಗಬಾರದೆಂದು ಅಧಿಕೃತ ಅಂಕಿ ಅಂಶಗಳನ್ನೇ ತಡೆಹಿಡಿಯಲಾಯಿತು. ಈಗ ಎಲ್ಲವನ್ನು ಕೊರೊನಾ ಲೆಕ್ಕಕ್ಕೆ ಬರೆದು ನರೇಂದ್ರ ಮೋದಿ ಅವರು ಕೈತೊಳೆದುಕೊಳ್ಳಲು ಹೊರಟಿದ್ದಾರೆ" ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಭಾರತದ ಜಿಡಿಪಿ ಇತಿಹಾಸದಲ್ಲೇ ಅತ್ಯಂತ ಕಡಿಮೆ ದಾಖಲಾಗಲಿದೆ: ನಾರಾಯಣ ಮೂರ್ತಿಭಾರತದ ಜಿಡಿಪಿ ಇತಿಹಾಸದಲ್ಲೇ ಅತ್ಯಂತ ಕಡಿಮೆ ದಾಖಲಾಗಲಿದೆ: ನಾರಾಯಣ ಮೂರ್ತಿ

ಕೋವಿಡ್‌ ಅನ್ನು ಗಂಭೀರವಾಗಿ ಪರಿಗಣಿಸಿಲ್ಲ

ಕೋವಿಡ್‌ ಅನ್ನು ಗಂಭೀರವಾಗಿ ಪರಿಗಣಿಸಿಲ್ಲ

"ಕೊರೊನಾ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದ್ದ ಪ್ರಧಾನಿ ಅವರು ಜನರಿಗೆ ಜಾಗಟೆ ಬಾರಿಸಲು, ದೀಪ ಹಚ್ಚಲು ಹೇಳಿರುವುದು ಕೊರೊನಾ ಮಾರಿಯನ್ನು ಸರ್ಕಾರ ಎಷ್ಟು ಗಂಭೀರವಾಗಿದೆ ಎನ್ನುವುದಕ್ಕೆ ಸಾಕ್ಷಿ" ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪ್ರಧಾನಿಗಳೇ ಹೊಣೆ

ಪ್ರಧಾನಿಗಳೇ ಹೊಣೆ

"ಈಗ ರೋಧಿಸಿ ಏನು ಫಲ? ಲಾಕ್ ಡೌನ್ ಅಗತ್ಯವಿತ್ತು ನಿಜ, ನಮ್ಮ ಪಕ್ಷ ಕೂಡಾ ಬೆಂಬಲಿಸಿತ್ತು. ಆದರೆ ಅವೈಜ್ಞಾನಿಕವಾಗಿ, ದಿನಕ್ಕೊಂದು ರೀತಿಯ ಅನಿಶ್ಚಿತ ನಿರ್ಧಾರಗಳ ಮೂಲಕ ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮವಾಗಿ ಲಾಭವಾಗಲಿಲ್ಲ, ನಷ್ಟವಾಗಿದ್ದೇ ಹೆಚ್ಚು. ಇದರ ಪೂರ್ಣ ಹೊಣೆಯನ್ನು ಪ್ರಧಾನಿಗಳು ವಹಿಸಿಕೊಳ್ಳಬೇಕಾಗುತ್ತದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೋದಿ ತಪ್ಪೊಪ್ಪಿಕೊಳ್ಳಬೇಕು

ಮೋದಿ ತಪ್ಪೊಪ್ಪಿಕೊಳ್ಳಬೇಕು

"ದೇಶ ಎದುರಿಸುತ್ತಿರುವ ಈಗಿನ ಆರ್ಥಿಕ ದುಸ್ಥಿತಿಗೆ ನೋಟು ರದ್ದತಿ, ದೋಷಪೂರಿತ ಜಿಎಸ್ ಟಿಯ ಅವೈಜ್ಞಾನಿಕ ಜಾರಿ ಮತ್ತು ಕೆಲಸವೇ ಗೊತ್ತಿಲ್ಲದ ಅಡ್ಡಕಸುಬಿ ಸಚಿವರು ಕೂಡಾ ಕಾರಣ ಎಂದು ನರೇಂದ್ರ ಮೋದಿ ಅವರು ದೇಶದ ಮುಂದೆ ಮೊದಲು ತಪ್ಪೊಪ್ಪಿಕೊಳ್ಳಬೇಕು" ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಮೋದಿ ವಿಫಲ ನಾಯಕ

ಮೋದಿ ವಿಫಲ ನಾಯಕ

"ಸಂಕಟ-ಸಂಕಷ್ಟಗಳನ್ನು ಎದುರಿಸಿ ಗೆದ್ದುಬರುವವನೇ ನಿಜವಾದ ನಾಯಕ. ಪಂಡಿತ ಜವಾಹರಲಾಲ‌ ನೆಹರೂ ಅವರಿಂದ ಮನಮೋಹನ್ ಸಿಂಗ್ ವರೆಗೆ ಎಲ್ಲ ಪ್ರಧಾನಿಗಳು ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಿ ಗೆದ್ದವರು. ನರೇಂದ್ರ ಮೋದಿ ಅವರಂತಹ ಕೈಲಾಗದ ವಿಫಲ ನಾಯಕರು ಮಾತ್ರ ನೆಪಗಳ ಮೊರೆ ಹೋಗುತ್ತಾರೆ" ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

English summary
Leader of opposition and former Karnataka Chief Minister Siddaramaiah attacked union government and PM Narendra Modi over the 23.9% decline in GDP in the June quarter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X