ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಹೇಗಿತ್ತು, ಈಗ ಅಧೋಗತಿ: ಸಿದ್ದರಾಮಯ್ಯ ವಾಗ್ದಾಳಿ

|
Google Oneindia Kannada News

ಬೆಂಗಳೂರು, ಆಗಸ್ಟ್ 31: ಯುಪಿಎ ಸರ್ಕಾರದ ಅವಧಿಯಲ್ಲಿ ಡಾ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮ ಬೆಳವಣಿಗೆಯಾಗಿತ್ತು. ಆದರೆ ನರೇಂದ್ರ ಮೋದಿ ಸರ್ಕಾರದಲ್ಲಿ ತೀವ್ರ ಕುಸಿತ ಕಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

27 ಬ್ಯಾಂಕ್‌ಗಳನ್ನು ವಿಲೀನ ಮಾಡುವ ಮೂಲಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಬ್ಯಾಂಕ್‌ಗಳ ವಿಲೀನದಿಂದಲೇ ಬ್ಯಾಂಕಿಂಗ್ ವ್ಯವಸ್ಥೆ ಬಲಗೊಳ್ಳುತ್ತದೆ ಎಂದು ನನಗೆ ಅನ್ನಿಸುತ್ತಿಲ್ಲ. ರಿಸರ್ವ್ ಬ್ಯಾಂಕ್ ಸೇರಿದಂತೆ ಎಲ್ಲಾ ಬ್ಯಾಂಕ್‌ಗಳ ಮೇಲೆ ಕೇಂದ್ರದ ಹಸ್ತಕ್ಷೇಪ ಜಾಸ್ತಿಯಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮುಳುಗುತ್ತಿರುವ ಆರ್ಥಿಕ ಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ- ಸಿದ್ದರಾಮಯ್ಯಮುಳುಗುತ್ತಿರುವ ಆರ್ಥಿಕ ಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ- ಸಿದ್ದರಾಮಯ್ಯ

ದೇಶದಲ್ಲಿ ಆರ್ಥಿಕ ವ್ಯವಸ್ಥೆ ಅಧೋಗತಿಗೆ ತಲುಪಿದೆ. ಜಿಡಿಪಿ ಬೆಳವಣಿಗೆ ದರ 5% ಇದೆ ಎಂದು ಕೇಂದ್ರ ಸರ್ಕಾರ ಹೇಳಿದೆ ಜೊತೆಗೆ ಕಳೆದ 6 ವರ್ಷದಲ್ಲಿ ಇದೇ ಕನಿಷ್ಠ ಎಂದೂ ಅವರೇ ಹೇಳಿದ್ದಾರೆ. ನನಗೆ ಗೊತ್ತಿರುವ ಹಾಗೆ ಸದ್ಯದ ಜಿಡಿಪಿ 5% ಇಲ್ಲ, 3.7 ಇಲ್ಲವೇ 4% ಇದೆ. ಆದರೆ ಬಿಜೆಪಿಯವರು ಜನರಿಗೆ ಸುಳ್ಳು ಹೇಳಿ ನಂಬಿಸಲು ಹೊರಟಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

GDP Was 8-9 Per Cent During Manmohan Singh Government Siddaramaiah

ನನ್ನನ್ನು ಸೋಲಿಸಿದ್ದು ಜನ, ಯಾವ ನಾಯಕರೂ ಅಲ್ಲ: ಸಿದ್ದರಾಮಯ್ಯ ನನ್ನನ್ನು ಸೋಲಿಸಿದ್ದು ಜನ, ಯಾವ ನಾಯಕರೂ ಅಲ್ಲ: ಸಿದ್ದರಾಮಯ್ಯ

ಮನಮೋಹನ್ ಸಿಂಗ್ ಅವರ ಸರ್ಕಾರ ಇದ್ದಾಗ ಜಿಡಿಪಿ ದರ 8 - 9% ಇತ್ತು. ಈಗ ಪರಿಸ್ಥಿತಿ ಬದಲಾಗಿದೆ. ನರೇಂದ್ರ ಮೋದಿಯವರ ದೂರದೃಷ್ಟಿಯಿಲ್ಲದ ಆರ್ಥಿಕ ನೀತಿಗಳೇ ದೇಶದ ಅರ್ಥ ವ್ಯವಸ್ಥೆ ಹದಗೆಡಲು ನೇರ ಕಾರಣ ಎಂದು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

English summary
Congress leader Siddaramaiah said that, the GDP rate was 8-9 per cent during Dr Manmohan Singh government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X