Gen Z ಮೊದಲು ನಿಮ್ಮ ಕುಟುಂಬದ ಮೇಲೆ ಪ್ರತಿಭಟನೆ ಮಾಡ್ಬೇಕು: ಹೆಡ್‌ ಡಿ ಕುಮಾರಸ್ವಾಮಿಗೆ ತಿರುಗೇಟು

ದೇಶದಲ್ಲಿ ಯುವಜನರು ಹಾಗೂ ವಿಶೇಷವಾಗಿ Gen Z ನಡೆಸುತ್ತಿರುವ ಪ್ರತಿಭಟನೆಗಳು, ಅವರ ರಾಜಕೀಯ ಅಭಿಪ್ರಾಯಗಳು ಮತ್ತು ಕುಟುಂಬದೊಳಗಿನ ಭಿನ್ನಾಭಿಪ್ರಾಯಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ "ಜೆನ್‌ ಜಿಗಳು ಮೊದಲು ನಿಮ್ಮ ಕುಟುಂಬದ ಮೇಲೆ ಪ್ರತಿಭಟನೆ ಮಾಡಬೇಕು ಎಂಬ ಪೋಸ್ಟ್‌ ಇದೀಗ ವೈರಲ್‌ ಆಗಿದೆ.

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಯಲ್ಲಿ ನಡೆದಿರುವ ಅವ್ಯಾಹತ ಅಕ್ರಮಗಳ ಬಗ್ಗೆ ಕಾಕ್ರೋಚ್ ಜನತಾ ಪಾರ್ಟಿ ಏಕೆ ಮೌನವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದ್ದಾರೆ. ಈ ಕುರಿತು ಕುಮಾರಸ್ವಾಮಿ ಹೇಳಿಕೆಯನ್ನ ಟ್ವೀಟ್‌ ನಲ್ಲಿ ಹಂಚಿಕೊಂಡಿದ್ದು, Gen Z ಮೊದಲು ನಿಮ್ಮ ಕುಟುಂಬದ ಮೇಲೆ ಪ್ರತಿಭಟನೆ ಮಾಡ್ಬೇಕು ಎಂದು ತಿರುಗೇಟು ಕೊಟ್ಟಿದ್ದಾರೆ.

Gen Z Protest Should First Protest Against Their Own Families Retort to Union Minister HD Kumaraswamy

Gen Z: ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಯಿತು ಎಂದು ನವದೆಹಲಿಯಲ್ಲಿ ಇನ್ನಿಲ್ಲದ ಗಲಾಟೆ ಎಬ್ಬಿಸಿದ ಕಾಕ್ರೋಚ್ ಜನತಾ ಪಾರ್ಟಿ ಮತ್ತು ಜೆನ್ ಜಿ ಗಳು ಈಗೆಲ್ಲಿ ಹೋಗಿದ್ದಾರೆ? ಅವರಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಮಿತಿಮೀರಿದ ಭ್ರಷ್ಟಾಚಾರ ಮತ್ತು ಕೆಪಿಎಸ್ಸಿಯಲ್ಲಿ ನಡೆದಿರುವ ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್ ಗಳ ನೇಮಕಾತಿ ಅಕ್ರಮ ಹಾಗೂ ಪಶು ವೈದ್ಯರ ನೇಮಕಾತಿ ಅಕ್ರಮ ಸೇರಿದಂತೆ ಕಾಸಿಗಾಗಿ ಉದ್ಯೋಗಗಳನ್ನು ಮಾಡಿಕೊಳ್ಳುತ್ತಿರುವ ಭ್ರಷ್ಟಾಚಾರವನ್ನು ಪ್ರಶ್ನಿಸುತ್ತಿಲ್ಲ ಏಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಕರ್ನಾಟಕದಲ್ಲಿ ಕಡುಭ್ರಷ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ದೊಡ್ಡಮಟ್ಟದ ಕೆಟ್ಟ ಹೆಸರು ಬರುತ್ತಿದೆ ವಾಗ್ದಾಳಿ ನಡೆಸಿದ ಸಚಿವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮಾಡಿ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ. ಆದರೆ ಅವರದೇ ಸರ್ಕಾರ ಎಸುಗುತ್ತಿರುವ ಅಕ್ರಮಗಳ ಬಗ್ಗೆ ಅವರು ಜಾಣಮೌನ ವಹಿಸಿದ್ದಾರೆ ಎಂದು ಕಿಡಿಕಾರಿದರು.

Gen Z: ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಕೈಚಲಿದೆ

ಬರ ನಿರ್ವಹಣೆಯಲ್ಲಿ ಈ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ. ಒಂದು ಕಡೆ ಖಜಾನೆಯನ್ನು ಖಾಲಿ ಮಾಡಿಕೊಂಡು ಇನ್ನೊಂದು ಕಡೆ ಜನರಿಗೆ ಮಂಕು ಬೂದಿ ಹಚ್ಚಲು ಯೋಜನೆಗಳ ಮೇಲೆ ಯೋಜನೆಗಳನ್ನು ಘೋಷಣೆ ಮಾಡುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಹಾಗಿದ್ದರೂ ಕೆಪಿಎಸ್ಸಿಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಕಡಿವಾಣ ಹಾಕಲು ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಕೈಚಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಎಸ್ಸಿ ಅಕ್ರಮಗಳ ತನಿಖೆ ನಡೆಸಲು ರಾಜ ಹೈಕೋರ್ಟ್ ಎಸ್ಐಟಿ ರಚಿಸಿ ಅಧಿಕಾರಿಗಳನ್ನು ನೇಮಕ ಮಾಡಿದೆ. ಆದರೆ ಆ ಅಧಿಕಾರಿಗಳು ಬೇಡವೆಂದು ಈ ಸರ್ಕಾರ ನಾಟಕ ಆಡುತ್ತಿದೆ. ಒಬ್ಬ ಅಧಿಕಾರಿಯನ್ನು ವರ್ಗಾವಣೆಯನ್ನು ಮಾಡಿದೆ. ಹೆಬ್ಬಟ್ಟು ಒತ್ತುವ ಅಧಿಕಾರಿಗಳು ಇವರಿಗೆ ಬೇಕಾಗಿದೆ. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳು ಇವರಿಗೆ ಆಗಿ ಬರುವುದಿಲ್ಲ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+