ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭಾ ಚುನಾವಣೆ: ಮೇ12ರಂದು ಸರ್ಕಾರಿ ರಜೆ ಘೋಷಣೆ

By Nayana
|
Google Oneindia Kannada News

ಬೆಂಗಳೂರು, ಮೇ 4: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 12 ರಂದು ಮತದಾನಕ್ಕೆ ಅನುವಾಗುವಂತೆ ಸರ್ಕಾರಿ ರಜೆ ಘೋಷಿಸಲಾಗಿದೆ.

ಸರ್ಕಾರಿ ಹಾಗೂ ಶಾಲಾ ಕಚೇರಿಗಳು ಅನುದಾನಿತ ವಿದ್ಯಾಸಂಸ್ಥೆಗು ಸೇರಿ ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ, ಇತರೆ ಬ್ಯಾಂಕ್‌ಗಳು, ಸರ್ಕಾರಿ ಹಾಗೂ ಕೇಂದ್ರ ಸರ್ಕಾರದ ಕಾರ್ಖಾನೆ, ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ, ಸಂಸ್ಥೆಗಳು ಸಿಬ್ಬಂದಿಗೆ ವೇತನ ಸಹಿತ ರಜೆ ನೀಡಬೇಕೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಇಲಾಖೆ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಮೇ-12 ಮತದಾನ, ಮೇ-15 ಫಲಿತಾಂಶ ಕರ್ನಾಟಕ ವಿಧಾನಸಭೆ ಚುನಾವಣೆ: ಮೇ-12 ಮತದಾನ, ಮೇ-15 ಫಲಿತಾಂಶ

ಈ ರಜೆ ತುರ್ತು ಸೇವೆಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಅಥವಾ ಸರ್ಕಾರಿ ಶಾಲೆಗಳಲ್ಲಿ ಮತಗಟ್ಟೆ ಸ್ಥಾಪಿಸಿದಲ್ಲಿ ಅಲ್ಲಿನ ನೌಕರರಿಗೆ ಮೇ 11,12 ಹಾಗೂ ಮತ ಎಣಿಕೆ ದಿನ ರಜೆ ನೀಡುವ ಅಧಿಕಾರವನ್ನು ಚುನಾವಣಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ.

General Holiday on May 12 in Karnataka

ಕರ್ನಾಟಕ ವಿಧಾನಸಭಾ ಚುನಾವಣೆ ಮೇ12 ರಂದು ರಾಜ್ಯಾದ್ಯಂತ ನಡೆಯಲಿದೆ. ಮೇ.15 ರಂದು ಮತ ಎಣಿಕೆ ನಡೆಯಲಿದ್ದು, ಚುನಾವಣಾ ಫಲಿತಾಂಶ ಹೊರಬೀಳಲಿದೆ.

English summary
The State government has announced general holiday across the state on May 12 as polling will be held for state assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X