ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು, ಕರಾವಳಿ, ಮಲೆನಾಡು ಭಾಗಗಳಲ್ಲಿ ಇನ್ನೆರೆಡು ದಿನ ಮಳೆ

|
Google Oneindia Kannada News

ಬೆಂಗಳೂರು, ಜೂನ್ 23: ಬೆಂಗಳೂರಲ್ಲಿ ಇನ್ನೆರೆಡು ದಿನ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮೋಡಕವಿದ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದೆ. ಜೂನ್ ಪೂರ್ತಿಯಾಗಿ ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ದಾಟಿಲ್ಲ, ಮೋಡಕವಿದ ವಾತಾವರಣವಿದ್ದು, ಆಗಾಗ ಸ್ವಲ್ಪ ಮಳೆಯಾಗಿದೆ ಇದರಿಂದಾಗಿ ತಂಪಾದ ವಾತಾವರಣ ನಿರ್ಮಾಣವಾಗಿದೆ.

ಕರಾವಳಿ, ಮಲೆನಾಡಿನಲ್ಲಿ ಐದು ದಿನ ಮಳೆ ಆರ್ಭಟ ಸಾಧ್ಯತೆ ಕರಾವಳಿ, ಮಲೆನಾಡಿನಲ್ಲಿ ಐದು ದಿನ ಮಳೆ ಆರ್ಭಟ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಲ್ಲಿ ಮಳೆಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಪ್ರತಿ ವರ್ಷವೂ ನೈಋತ್ಯ ಮುಂಗಾರು ಜೂನ್ 10ರ ವೇಳೆಗೆ ಬೆಂಗಳೂರು ಪ್ರವೇಶಿಸುತ್ತಿತ್ತು ಆದರೆ ಜೂನ್ 23 ಕಳೆಯುತ್ತಾ ಬಂದರೂ ಮಳೆಯ ಸುಳಿವಿಲ್ಲ.

Generally cloudy sky Light rain very likely in some areas

ಇನ್ನು ರಾಜ್ಯದ ಹಲವೆಡೆ ಒಣಹವೆ ಮುಂದುವರೆದಿದೆ. ಕರಾವಳಿ, ಮಲೆನಾಡಿನ ಕೆಲಸ ಭಾಗಗಳಲ್ಲಿ ಮಾತ್ರ ಸ್ವಲ್ಪ ಮಳೆಯಾಗಿದೆ. ದೆಹಲಿಯಲ್ಲಿ ಜೂನ್ 24-25ರಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದರಿಂದಾಗಿ ದೆಹಲಿಯಲ್ಲಿ ಉಷ್ಣಾಂಶ 2-3 ಡಿಗ್ರಿಯಷ್ಟು ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಡುಪಿ, ಅಂಕೋಲಾ, ಕೊಲ್ಲೂರಿನಲ್ಲಿ 20 ಸೆಂ.ಮೀ, ಕೋಕರ್ಣ 14 ಸೆಂ.ಮೀ, ಮಾಣಿಯಲ್ಲಿ 13 ಸೆಂಮೀಯಷ್ಟು ಮಳೆಯಾಗಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಕೂಡ ಇನ್ನೂ ಎರಡು ದಿನ ಮಳೆಯಾಗಲಿದೆ.

English summary
Surface winds likely to be strong & gusty at times. Maximum & Minimum temperatures very likely to be around 29 and 21 degree Celsius respectively. Generally cloudy sky Light rain very likely in some areas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X