
ಆನ್‌ಲೈನ್ ಮೂಲಕ ಎಪಿಎಲ್ ಕಾರ್ಡ್ ಪಡೆಯಿರಿ
ಬೆಂಗಳೂರು, ಜೂನ್ 15 : ಎಪಿಎಲ್ ಕಾರ್ಡ್ ಪಡೆಯುವುದನ್ನು ಸರಳಗೊಳಿಲು ಸರ್ಕಾರ ಮುಂದಾಗಿದೆ. ಆನ್‌ಲೈನ್ ಮೂಲಕ ವಿವರಗಳನ್ನು ಭರ್ತಿ ಮಾಡಿ ಪಡಿತರ ಚೀಟಿ ಪಡೆಯುವ ವ್ಯವಸ್ಥೆ ಶೀಘ್ರವೇ ಜಾರಿಗೆ ಬರಲಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ದಿನೇಶ್ ಗುಂಡೂರಾವ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡುವ ಮೂಲಕ ಜನರು ತಮ್ಮ ಎಪಿಎಲ್ ಕಾರ್ಡ್‌ಗಳನ್ನು ಪಡೆಯಬಹುದಾಗಿದೆ' ಎಂದರು. [ಆಧಾರ್ ಕಾರ್ಡ್ ಮಾಡಿಸುವುದು ಹೇಗೆ?]
'ಆನ್‌ಲೈನ್ ಮೂಲಕ ಎಪಿಎಲ್ ಕಾರ್ಡ್ ಪಡೆಯಲು ಆಧಾರ್ ಕಾರ್ಡ್ ಸಾಕು. ಅದರ ಆಧಾರದ ಮೇಲೆಯೇ ಕಾರ್ಡ್ ಪಡೆಯಬಹುದು. ಬೇರೆ ಯಾವುದೇ ದಾಖಲೆಗಳ ಅಗತ್ಯವಿಲ್ಲ. ಈ ಕುರಿತ ತಂತ್ರಾಂಶವನ್ನು ಇಲಾಖೆ ಸಿದ್ಧಪಡಿಸುತ್ತಿದ್ದು, ಒಂದು ತಿಂಗಳಿನಲ್ಲಿ ಇದು ಪೂರ್ಣಗೊಳ್ಳುವ ಸಾಧ್ಯತೆ ಇದೆ' ಎಂದು ಸಚಿವರು ಹೇಳಿದರು. [ಎಪಿಎಲ್ ಕಾರ್ಡ್ ಇದ್ದವರಿಗೆ ಅನ್ನಭಾಗ್ಯ]
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎಪಿಎಲ್ ಕಾರ್ಡ್ ಹೊಂದಿರುವವರಿಗೆ 5 ಕೆಜಿ ಅಕ್ಕಿ ಮತ್ತು ಗೋಧಿಯನ್ನು ರಿಯಾಯಿತಿ ದರದಲ್ಲಿ ಹಂಚಿಕೆ ಮಾಡುತ್ತಿದೆ. ತೊಗರಿ ಮತ್ತು ಉದ್ದನ್ನು 120 ರೂ.ಗಳಿಗೆ ಪೂರೈಕೆ ಮಾಡುವ ಪ್ರಸ್ತಾವನೆ ಇದೆ.