ಸರ್ಕಾರಿ ಆಸ್ಪತ್ರೆಗಳಲ್ಲಿ 1 ರೂ.ಗೆ ಇಡ್ಲಿ ಸಿಗುತ್ತೆ

ಬೆಂಗಳೂರು, ಜೂ. 12 : ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ರೂ.ಗೆ ಇಡ್ಲಿ ನೀಡುವ ಯೋಜನೆ ಆರಂಭಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಕ್ಯಾಂಟೀನ್ ತೆರಯಲಾಗುತ್ತದೆ. ಈ ಕುರಿತು ಆರೋಗ್ಯ ಸಚಿವ ಯು.ಟಿ.ಖಾದರ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಾಥಮಿಕ ಹಂತದ ಮಾತುಕತೆ ನಡೆಸಿದ್ದಾರೆ.

ತಮಿಳುನಾಡಿನಲ್ಲಿ ಪ್ರಸಿದ್ಧಿಪಡೆದಿರುವ ಅಮ್ಮಾ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಕಡಿಮೆ ಬೆಲೆಗೆ ಇಡ್ಲಿ ನೀಡಿವ ಕ್ಯಾಂಟೀನ್ ಆರಂಭಿಸಲಾಗುತ್ತದೆ. ಸರ್ಕಾರಿ ಆಸ್ಪತ್ರೆಗೆ ಬರುವ ಜನಸಾಮಾನ್ಯರು ಮೊದಲೇ ಆರ್ಥಿಕವಾಗಿ ಕಂಗೆಟ್ಟಿರುತ್ತಾರೆ. ಆದ್ದರಿಂದ ಅವರಿಗೆ ಕಡಿಮೆ ಬೆಲೆಯಲ್ಲಿ ಆಹಾರ ನೀಡಲು ಈ ಒಂದು ರೂ.ಗೆ ಇಡ್ಲಿ ನೀಡುವ ಯೋಜನೆ ರೂಪಿಸಲಾಗುತ್ತಿದೆ.

Edli

ಇಂತಹ ಕ್ಯಾಂಟೀನ್ ತೆರೆಯುವ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್‌ ಇಲಾಖೆಯ ಹಿರಿಯ ಅಧಿಕಾರಿಗಳ ಜತೆಗೆ ಪ್ರಾಥಮಿಕ ಹಂತದ ಮಾತುಕತೆ ನಡೆಸಿದ್ದಾರೆ. ಮೊದಲು ರಾಜ್ಯದ ಆಯ್ದ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಕ್ಯಾಂಟೀನ್ ಆರಂಭಿಸಿ, ನಂತರ ಸಾಧಕ-ಬಾಧಕಗಳ ಪರಿಶೀಲನೆ ನಡೆಸಿ ಎಲ್ಲಾ ಆಸ್ಪತ್ರೆಗಳಿಗೂ ವಿಸ್ತರಣೆ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. [ರೈಲಿನಲ್ಲಿ ಸಿಗಲಿದೆ ಎಂಟಿಆರ್ ಇಡ್ಲಿ, ಸಾಂಬಾರ್]

ಪ್ರತ್ಯೇಕ ಕ್ಯಾಂಟೀನ್ : ಒಂದು ರೂ.ಗೆ ಇಡ್ಲಿ ನೀಡುವ ಯೋಜನೆಗಾಗಿಯೇ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಪ್ರತ್ಯೇಕ ಕ್ಯಾಂಟೀನ್ ನಿರ್ಮಿಸಲಾಗುತ್ತದೆ. ಸರ್ಕಾರಿ ಅನುದಾನದಲ್ಲಿ ಕ್ಯಾಂಟೀನ್ ನಿರ್ಮಿಸಿ, ಬಳಿಕ ಸಂಬಂಧಪಟ್ಟ ಸಂಸ್ಥೆಗೆ ವಿರತಣೆ ಮಾಡಲು ನಿರ್ಧರಿಸಲಾಗಿದೆ.

ಇಡ್ಲಿ ತಯಾರಕರಿಗೆ ಬೇಕಾದ ಅಕ್ಕಿ ಸೇರಿದಂತೆ ಪೂರಕ ವಸ್ತುಗಳನ್ನು ಸರ್ಕಾರ ಆಹಾರ ಇಲಾಖೆಯ ಮೂಲಕ ಒದಗಿಲು ಚಿಂತನೆ ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ ಈ ಬಗ್ಗೆ ಆಹಾರ ಇಲಾಖೆ ಜೊತೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದೆ. ಇಂತಹ ಕ್ಯಾಂಟೀನ್ ಗಳಿಗೆ ಸಾರ್ವಜನಿಕರು ಆಗಮಿಸಿದರೆ, ಈ ಯೋಜನೆ ಜನಪ್ರಿಯವಾಗಲಿದೆ.

ಸಚಿವರು ಹೇಳುವುದೇನು : ಸರ್ಕಾರಿ ಆಸ್ಪತ್ರೆಗಳಲ್ಲಿ ಕಡಿಮೆ ದರದಲ್ಲಿ ಆಹಾರಗಳನ್ನು ಪೂರೈಕೆ ಮಾಡಬೇಕು ಎನ್ನುವ ಉದ್ದೇಶದಿಂದ ಇಂತಹ ಚಿಂತನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಕುರಿತು ಅಂತಿಮ ತೀರ್ಮಾನ ಕೈಗೊಂಡು ಒಂದು ರೂ.ಗೆ ಇಡ್ಲಿ ಪೂರೈಕೆ ಮಾಡುವ ಯೋಜನೆ ಘೋಷಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+