ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾ. ಪಂಚಾಯಿತಿ ಸದಸ್ಯ ಸ್ಥಾನ ಹರಾಜು ಹಾಕಿದರೆ ಎಫ್‌ಐಆರ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 10: ಕರ್ನಾಟಕದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಘೋಷಣೆಯಾಗಿದೆ. ಡಿಸೆಂಬರ್ 22 ಮತ್ತು 27ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟವಾಗಲಿದೆ.

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಚುನಾವಣೆ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮಾದರಿ ನೀತಿ ಸಂಹಿತೆಯು ರಾಜ್ಯದಲ್ಲಿ ಜಾರಿಗೆ ಬಂದಿದೆ. ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯ ಸ್ಥಾನಗಳನ್ನು ಹರಾಜು ಹಾಕುವ ಪ್ರಕರಣ ಬೆಳಕಿಗೆ ಬಂದಿದೆ.

ಗ್ರಾಮ ಪಂಚಾಯಿತಿ ಚುನಾವಣೆ; ಪ್ರಚಾರಕ್ಕೆ ಮಾರ್ಗಸೂಚಿ ಗ್ರಾಮ ಪಂಚಾಯಿತಿ ಚುನಾವಣೆ; ಪ್ರಚಾರಕ್ಕೆ ಮಾರ್ಗಸೂಚಿ

ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನವನ್ನು ಖರೀದಿ ಮಾಡುವ ಹಾಗೂ ದೇವಾಲಯಗಳಿಗೆ ಹಣ ನೀಡುವ ಮೂಲಕ ಸದಸ್ಯ ಸ್ಥಾನಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ ಚುನಾವಣೆ ನಡೆಸದೇ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುತ್ತಿರುವ ವಿಚಾರ ಆಯೋಗದ ತನಕ ತಲುಪಿದೆ.

ಗ್ರಾಮ ಪಂಚಾಯಿತಿ ಚುನಾವಣೆಗೆ ಯಾರು ಸ್ಪರ್ಧಿಸಬಹುದು? ಗ್ರಾಮ ಪಂಚಾಯಿತಿ ಚುನಾವಣೆಗೆ ಯಾರು ಸ್ಪರ್ಧಿಸಬಹುದು?

 Get Ready For Legal Action If Auction The Gram Panchayat Member Post

ಗ್ರಾಮ ಪಂಚಾಯಿತಿಗಳಲ್ಲಿ ಅಥವಾ ಗ್ರಾಮ ಪಂಚಾಯಿತಿ ಕ್ಷೇತ್ರಗಳಲ್ಲಿ ಸದಸ್ಯ ಸ್ಥಾನಗಳನ್ನು ಹರಾಜು ಮೂಲಕ ಅಥವಾ ದೇವಾಲಯಗಳಿಗೆ ಹಣ ನೀಡುವ ಮತ್ತು ಇತರೆ ವ್ಯವಹಾರಗಳ ಮೂಲಕ ಚುನಾವಣೆ ಪ್ರಕ್ರಿಯೆ ನಡೆಸದೇ ಸದಸ್ಯರನ್ನು ಆಯ್ಕೆ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಮಹಾತ್ಮ ಗಾಂಧಿ ಕಂಡ ಗ್ರಾಮ ಸ್ವರಾಜ್ಯದ ಕನಸು ಹರಾಜುಮಹಾತ್ಮ ಗಾಂಧಿ ಕಂಡ ಗ್ರಾಮ ಸ್ವರಾಜ್ಯದ ಕನಸು ಹರಾಜು

ಹಜಾರು ಮುಂತಾದ ವ್ಯವಹಾರದಲ್ಲಿ ತೊಡಗಿದರೆ ಅಂತಹವರ ವಿರುದ್ದ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ. ಇಂತಹ ಪ್ರಕ್ರಿಯೆ ನಡೆಯುತ್ತಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಬಹುದು.

ಜಿಲ್ಲಾಧಿಕಾರಿ ಕಚೇರಿ ಅಥವಾ ಸಂಬಂಧಿಸಿದ ತಾಲೂಕಿನ ತಹಶೀಲ್ದಾರರಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ತಿಳಿಸಲಾಗಿದೆ.

English summary
Legal action will taken against people who took part in the auction of gram panchayat member post. Gram Panchayat election will he held in Karnataka on December 22 and 27, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X