ಅಕ್ರಮವಾಗಿ ಮರ ಕಡಿದರೆ ದಂಡ, ಶಿಕ್ಷೆ ಹತ್ತು ಪಟ್ಟು ಹೆಚ್ಚಳ
ಬೆಂಗಳೂರು, ಮಾರ್ಚ್ 27: ಕರ್ನಾಟಕದಲ್ಲಿ ಅರಣ್ಯದ ಪ್ರಮಾಣ ಕಡಿಮೆಯಾಗುತ್ತಿದೆ. ಒತ್ತುವರಿ ಸೇರಿದಂತೆ ಇತರ ಹಲವು ಕಾರಣಕ್ಕೆ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಮರಗಳನ್ನು ಉಳಿಸಲು, ಅರಣ್ಯವನ್ನು ಕಾಪಾಡಲು ಕರ್ನಾಟಕ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಕ್ರಮವಾಗಿ ಮರಗಳನ್ನು ಕಡಿಯುವುದನ್ನು ತಪ್ಪಿಸಲು ಈಗ ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಇದಕ್ಕಾಗಿ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಈ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಪರ ಮುಖ್ಯ ಕಾರ್ಯದರ್ಶಿಯವರು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಇವರಿಗೆ ಟಿಪ್ಪಣಿಯೊಂದನ್ನು ಕಳಿಸಿದ್ದಾರೆ. ಈ ಟಿಪ್ಪಣಿಯಲ್ಲಿ ಕಾನೂನು ತಿದ್ದುಪಡಿಯ ಕುರಿತು ವಿಷಯವನ್ನು ಪ್ರಸ್ತಾಪಿಸಲಾಗಿದೆ.

ಸಚಿವರ ಟಿಪ್ಪಣಿ: ಸಚಿವ ಈಶ್ವರ ಖಂಡ್ರೆ ತಮ್ಮ ಟಿಪ್ಪಣಿಯನ್ನು ಇತ್ತೀಚೆಗೆ ಸುಪ್ರೀಂಕೋರ್ಟ್ ಅರ್ಜಿಯೊಂದರ ವಿಚಾರಣೆ ವೇಳೆ ನೀಡಿದ ಅಭಿಪ್ರಾಯದೊಂದಿಗೆ ಆರಂಭಿಸಿದ್ದಾರೆ.
ಸಚಿವರ ಟಿಪ್ಪಣಿ 'Cutting down large number of trees is like killing human beings, or worse than that" ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಹೇಳಿದ್ದಾರೆ.
ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ತಿಳಿಸಿದ್ದಾರೆ.
ಸಂಸ್ಕೃತದಲ್ಲಿ ಧರ್ಮೋ ರಕ್ಷತಿ ರಕ್ಷಿತಃ ಎಂಬ ಮಾತಿದೆ. ಈಗ ಇದನ್ನು ವೃಕೋ ರಕ್ಷತಿ ರಕ್ಷಿತಃ ಎಂದು ಬದಲಾಯಿಸಿಕೊಳ್ಳಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಹತ್ತಾರು, ನೂರಾರು ವರ್ಷದಿಂದ ಬೆಳದ ಮರಗಳನ್ನು ಸಂರಕ್ಷಿಸದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ ಎಂದು ಸಚಿವರು ಎಚ್ಚರಿಸಿದ್ದಾರೆ.
ಈ ನಿಟ್ಟಿನಲ್ಲಿ ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಈ ಮೂಲಕ ಸೂಚಿಸಿದೆ ಎಂದು ಟಿಪ್ಪಣಿಯಲ್ಲಿ ಹೇಳಿದ್ದಾರೆ.
ಸಚಿವ ಈಶ್ವರ ಖಂಡ್ರೆ ತಮ್ಮ ಟಿಪ್ಪಣಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಸಹ ಹಾಕಿದ್ದಾರೆ. 'ಅಕ್ರಮ ಮರ ಕಡಿತ ತಡೆಗೆ ಕಠಿಣ ಕ್ರಮ-ದಂಡ ಮತ್ತು ಶಿಕ್ಷೆ ಹೆಚ್ಚಳಕ್ಕೆ ಕ್ರಮ. ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆಯ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆ ಅಗತ್ಯ. ಪರಿಸರ ಉಳಿಸಿ, ಭವಿಷ್ಯ ರಕ್ಷಿಸೋಣ' ಎಂದು ತಿಳಿಸಿದ್ದಾರೆ.
'ಅರಣ್ಯ ಸಂರಕ್ಷಣೆಯ ಉದ್ದೇಶದಿಂದ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಮತ್ತು ಅಕ್ರಮ ಮರಗಳ ಕಡಿತ ತಡೆಗಟ್ಟಲು ದಂಡ ಹಾಗೂ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸುಪ್ರೀಂಕೋರ್ಟ್ ಅಭಿಪ್ರಾಯದಂತೆ, ದೊಡ್ಡ ಪ್ರಮಾಣದಲ್ಲಿ ಮರಗಳನ್ನು ಕಡಿಯುವುದು ಗಂಭೀರ ಅಪರಾಧ ಎಂದು ಪರಿಗಣಿಸಿ, ಪ್ರತಿ ಮರಕ್ಕೆ 1 ಲಕ್ಷ ದಂಡ ವಿಧಿಸುವ ನಿಯಮವನ್ನು ಇನ್ನಷ್ಟು ಕಠಿಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ' ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಈಗಾಗಲೇ ಅರಣ್ಯ ಇಲಾಖೆ ಮರಗಳನ್ನು ಉಳಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ. ಅರಣ್ಯ ಉಳಿಸಿ ಬೆಳೆಸಬೇಕು ಗಿಡ ಮರ ಕಡಿಯಬಾರದು ಇಂದಿನ ದಿನಗಳಲ್ಲಿ ಅರಣ್ಯ ನಾಶದಿಂದ ಮಳೆ ಕಡಿಮೆಯಾಗುತ್ತಿದೆ. ಪಕ್ಷಿ ಪ್ರಾಣಿಗಳಿಗೆ ನೀರು, ಹಣ್ಣು ಸಿಗುತ್ತಿಲ್ಲ, ಹಳ್ಳಕೊಳ್ಳಗಳಲ್ಲಿ ನೀರಿಲ್ಲ ನದಿಗಳಿಗೆ ಬರುವ ನೀರಿನ ಮೂಲಗಳಾದ ಉಪನದಿಗಳಲ್ಲಿ ನೀರು ಇಲ್ಲದೆ ಕಾಡು ಪ್ರಾಣಿಗಳೂ ಕಾಡು ಬಿಟ್ಟು ನೀರಿನ ದಾಹ ನೀಗಿಸಿಕೊಳ್ಳಲು ಹೊರಬರುತ್ತಿವೆ.
ಸರ್ಕಾರ ಇಂತಹ ಪರಿಸ್ಥಿತಿಯನ್ನು ಮನಗಂಡು ಗಿಡಮರಗಳನ್ನು ಉಳಿಸುವುದಕ್ಕಾಗಿ ಕಾಡಿನ ಅಂಚಿನಲ್ಲಿರುವ ಗಿರಿಧಾಮಗಳಲ್ಲಿ ವಾಸಿಸುವ ಬುಡಕಟ್ಟು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಟುಂಬಗಳ ಸಹಕಾರವನ್ನು ಸಹ ಕೇಳಿದೆ. ಅರಣ್ಯ ಇಲಾಖೆ ಅಧಿಕಾರಿಗಳು/ ಸಿಬ್ಬಂದಿ ಗಸ್ತು ಹೆಚ್ಚಿಸುವ ಮೂಲಕ ಅಕ್ರಮವಾಗಿ ಮರ ಕಡಿಯುವ ಪ್ರಕರಣಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುತ್ತಿದ್ದಾರೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications