ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳ

ಬೆಂಗಳೂರು, ಮಾರ್ಚ್ 28 : ಬಿರು ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಎದುರಿಸುತ್ತಿದ್ದೇವೆ. ಇದರ ನಡುವೆಯೇ ದರವೂ ಹೆಚ್ಚಳವಾಗುವ ಸಾಧ್ಯತೆ ಇದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ದರ ಪರಿಷ್ಕರಣೆ ಮಾಡಿದ್ದು, ಏಪ್ರಿಲ್ 1ರಿಂದ ನೂತನ ದರ ಜಾರಿಗೆ ಬರಲಿದೆ.

ವಿದ್ಯುತ್ ಸರಬರಾಜು ಕಂಪನಿಗಳು ದರ ಹೆಚ್ಚಳದ ಕುರಿತು ಸಲ್ಲಿಸಿದ ಬೇಡಿಕೆಗಳನ್ನು ಆಯೋಗ ಪರಿಗಣಿಸಿದ್ದು, ದರವನ್ನು ಪರಿಷ್ಕರಣೆ ಮಾಡಲಾಗಿದೆ. ಮಾ.30 ಅಥವ 31ರಂದು ದರ ಏರಿಕೆ ಕುರಿತು ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.[ವಿದ್ಯುತ್ ದರ ಹೆಚ್ಚಳಕ್ಕೆ ಸಿದ್ಧವಾಗಿ]

power

ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್‌ಗೆ 1.2 ರೂ. ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿವೆ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ 35 ರಿಂದ 50 ಪೈಸೆ ವರೆಗೆ ದರ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.[ಕರ್ನಾಟಕದಲ್ಲಿ ವಿದ್ಯುತ್ ಕೊರತೆ : ಶಾಶ್ವತ ಪರಿಹಾರಗಳು]

2015ರಲ್ಲಿ ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್‌ಗೆ ಕನಿಷ್ಠ 80 ಪೈಸೆ ದರ ಹೆಚ್ಚಳ ಮಾಡಬೇಕೆಂದು ಆಯೋಗಕ್ಕೆ ಮನವಿ ಮಾಡಿದ್ದವು. 2015ರ ಮಾರ್ಚ್‌ನಲ್ಲಿ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪ್ರತಿ ಯೂನಿಟ್‌ಗೆ 13 ರಿಂದ 20 ಪೈಸೆ ತನಕ ದರ ಹೆಚ್ಚಳ ಮಾಡಿತ್ತು. [ಕರೆಂಟ್ ಕೊಡಿ ಎಂದು ಕರೆ ಮಾಡಿದ್ದಕ್ಕೆ ಕಂಬಿ ಹಿಂದೆ ಹೋದ್ರು]

ನಂತರ ಹಲವು ಬಾರಿ ವಿದ್ಯುತ್ ಸರಬರಾಜು ಕಂಪನಿಗಳಾಗದ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಮತ್ತು ಚೆಸ್ಕಾಂ ಪುನಃ ಆಯೋಗಕ್ಕೆ ದರ ಹೆಚ್ಚಳಕ್ಕೆ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿದ್ದವು. ಈ ಬೇಡಿಕೆಗೆ ಆಯೋಗ ಸ್ಪಂದಿಸಿದ್ದು, ದರ ಹೆಚ್ಚಳ ಮಾಡಲು ಮುಂದಾಗಿವೆ. [ಈಗ ವಿದ್ಯುತ್ ದರ ಎಷ್ಟಿದೆ?]

'ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳು ದರ ಹೆಚ್ಚಳದ ಕುರಿತು ಸಲ್ಲಿಸಿದ ಬೇಡಿಕೆಗಳನ್ನು ಪರಿಗಣಿಸಿ ವಿದ್ಯುತ್ ದರ ಪರಿಷ್ಕರಣೆಯ ಅಂತಿಮ ಆದೇಶವನ್ನು ಶೀಘ್ರದಲ್ಲೇ ಹೊರಡಿಸಲಾಗುತ್ತದೆ' ಎಂದು ಆಯೋಗದ ಅಧ್ಯಕ್ಷ ಎಂ.ಕೆ. ಶಂಕರಲಿಂಗೇಗೌಡ ಕೆಲವು ದಿನಗಳ ಹಿಂದೆ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+