ಜುಲೈನಿಂದ ವಿದ್ಯುತ್ ದರ ಕೊಂಚ ಏರಿಕೆ

ವಿದ್ಯುತ್ ಸಕ್ಷಮ ಪ್ರಾಧಿಕಾರ (ಎಟಿಇ) ನಿರ್ದೇಶನದಂತೆ ಇಂಧನ ದರ ಹೊಂದಾಣಿಕೆ ಶುಲ್ಕದಡಿ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಎಲ್ಲಾ ವರ್ಗದ ಗ್ರಾಹಕರಿಗೆ ಪ್ರತಿ ಯೂನಿಟ್ಗೆ ಕನಿಷ್ಠ 1ರಿಂದ ಗರಿಷ್ಠ 2 ಪೈಸೆಯಷ್ಟು ದರ ಹೊಂದಾಣಿಕೆ ಮಾಡಿಕೊಳ್ಳಲು ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ಅನುಮತಿ ನೀಡಿದೆ. [ವಿದ್ಯುತ್ ದರ ಏರಿಕೆ ಮಧ್ಯೆ ಲೋಡ್ ಶೆಡ್ಡಿಂಗ್ ಕೊಡುಗೆ]
ಇಂಧನ ದರ ಹೊಂದಾಣಿಕೆ ಮಾಡಲು ಪ್ರತಿ ಯೂನಿಟ್ ಗೆ 2 ರಿಂದ 3 ಪೈಸೆ ಹೆಚ್ಚಳ ಮಾಡಬೇಕು ಎಂದು ಎಸ್ಕಾಂಗಳು ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಇದರಲ್ಲಿ 1ರಿಂದ 2 ಪೈಸೆ ಹೆಚ್ಚಿಸಲು ಅನುಮತಿ ನೀಡಲಾಗಿದೆ ಎಂದು ಕೆಇಆರ್ ಸಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರ್ಷದಲ್ಲಿ ಒಂದು ಬಾರಿ ದರ ಏರಿಕೆ ಮಾಡಿ ಗ್ರಾಹಕರ ಮೇಲೆ ವಾರ್ಷಿಕ ಹೊರೆ ಹಾಕುವ ಬದಲು, ಪ್ರತಿ ಮೂರು ತಿಂಗಳಿಗೊಮ್ಮೆ ಎಸ್ಕಾಂಗಳು ಇಂಧನ ಹೊಂದಾಣಿಕೆಯಲ್ಲಾದ ವೆಚ್ಚ ಆಧರಿಸಿ, ದರ ಪರಿಷ್ಕರಣೆ ಮಾಡಲು ನಿಯಂತ್ರಣ ಆಯೋಗ ಅನುಮತಿ ನೀಡಿದೆ. [ವಿದ್ಯುತ್ತಿಗಾಗಿ 5100 ಕೋಟಿ ರೂ ಕಾಮಗಾರಿ]
ಈ ನಿಯಮದ ಅನ್ವಯ ಮೂರು ತಿಂಗಳವರೆಗೆ (ಜುಲೈನಿಂದ ಸೆಪ್ಟೆಂಬರ್) ಈ ಹೊಂದಾಣಿಕೆ ದರ ಸಂಗ್ರಹಿಸಲು ಎಲ್ಲಾ ಎಸ್ಕಾಂಗಳಿಗೆ ಅನುಮತಿ ನೀಡಲಾಗಿದೆ. ಆದ್ದರಿಂದ ಜುಲೈ ಮೀಟರ್ ರೀಡಿಂಗ್ ನಿಂದ ಪರಿಷ್ಕೃತ ದರ ಅನ್ವಯವಾಗಲಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications