ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ : ಹಲವು ಹೆದ್ದಾರಿಗಳಲ್ಲಿ ಟೋಲ್ ಕಟ್ಟಲು ಸಿದ್ಧರಾಗಿ

|
Google Oneindia Kannada News

ಬೆಂಗಳೂರು, ಜೂನ್ 12 : ಕರ್ನಾಟಕದಲ್ಲಿ 1,117 ಕಿ.ಮೀ. ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಎಲ್ಲಾ ರಸ್ತೆಗಳನ್ನು ಬಳಸುವ ವಾಹನ ಸವಾರರು ಟೋಲ್ ಶುಲ್ಕವನ್ನು ಪಾವತಿ ಮಾಡಬೇಕಿದೆ.

ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. '2011ರಲ್ಲಿ ಪ್ರಕಟಗೊಂಡ ಆದೇಶದ ಪ್ರಕಾರ ರಾಜ್ಯ ಹೆದ್ದಾರಿಗಳಲ್ಲಿ ಬಳಕೆದಾರರ ಶುಲ್ಕ ವಿಧಿಸುವುದನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ' ಎಂದು ಹೇಳಿದರು.

ಮೈಸೂರು-ಬೆಂಗಳೂರು 10 ಪಥದ ರಸ್ತೆ 2021ಕ್ಕೆ ಪೂರ್ಣ : ರೇವಣ್ಣಮೈಸೂರು-ಬೆಂಗಳೂರು 10 ಪಥದ ರಸ್ತೆ 2021ಕ್ಕೆ ಪೂರ್ಣ : ರೇವಣ್ಣ

ರಾಜ್ಯ ಹೆದ್ದಾರಿ ಪ್ರಾಧಿಕಾರ, ಕೆ-ಶಿಪ್ ಮತ್ತು ರಸ್ತೆ ಅಭಿವೃದ್ಧಿ ನಿಗಮದಿಂದ 25,800 ಕೋಟಿ ವೆಚ್ಚದಲ್ಲಿ 1,117 ಕಿ.ಮೀ. ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತದೆ. ರಾಜ್ಯದ ಮುಂದಿನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ.

17 ರಾಜ್ಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಸರ್ಕಾರದ ಒಪ್ಪಿಗೆ17 ರಾಜ್ಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಸರ್ಕಾರದ ಒಪ್ಪಿಗೆ

Get ready to pay toll in more roads at Karnataka

'ರಾಜ್ಯದಲ್ಲಿ 37 ಸಾವಿರ ಕೋಟಿ ರೂ. ವೆಚ್ಚದಲ್ಲಿ 3600 ಕಿ.ಮೀ. ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಆರಂಭವಾಗಿದೆ' ಎಂದು ಎಚ್.ಡಿ.ರೇವಣ್ಣ ತಿಳಿಸಿದರು.

ಪರಿಸರ ಪ್ರೇಮಿಗಳಿಗೆ ಜಯ : ಬಂಡೀಪುರದಲ್ಲಿ ಎಲಿವೇಟೆಡ್ ರಸ್ತೆ ಇಲ್ಲಪರಿಸರ ಪ್ರೇಮಿಗಳಿಗೆ ಜಯ : ಬಂಡೀಪುರದಲ್ಲಿ ಎಲಿವೇಟೆಡ್ ರಸ್ತೆ ಇಲ್ಲ

ಸುರಂಗ ಮಾರ್ಗ : ಶಿರಾಡಿ ಘಾಟ್ ರಸ್ತೆ ಬಗ್ಗೆ ಮಾತನಾಡಿದ ರೇವಣ್ಣ ಅವರು, 'ಪ್ರತಿ ಬಾರಿ ಮಳೆಗಾಲದಲ್ಲಿ ಸಮಸ್ಯೆ ಸೃಷ್ಟಿಸುವ ಶಿರಾಡಿ ಘಾಟ್‌ನಲ್ಲಿ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಸುಮಾರು 26 ಕಿ.ಮೀ.ಉದ್ದದ ಸುರಂಗ ಮಾರ್ಗ ನಿರ್ಮಿಸಲು ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ಇದಕ್ಕಾಗಿ 1,200 ಕೋಟಿ ರೂ. ವೆಚ್ಚವಾಗಲಿದೆ' ಎಂದರು.

English summary
Karnataka PWD minister H.D.Revanna said that 1,117 km road will develop state. All road users should pay toll.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X