ಮಹಿಳೆಯರಿಗೆ ದೀಪಾವಳಿ ಗುಡ್‌ ನ್ಯೂಸ್ : ಗೃಹಲಕ್ಷ್ಮಿ ಸಹಕಾರ ಸಂಘದ ಕುರಿತು ಬಿಗ್‌ ಅಪ್‌ಡೇಟ್‌

ಬೆಂಗಳೂರು, ಅಕ್ಟೋಬರ್‌ 21: ರಾಜ್ಯದ ಮಹಿಳೆಯವರಿಗೆ ಗೃಹ ಲಕ್ಷ್ಮಿ ಯೋಜನೆಯಡಿ 2000 ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾಹಿತಿ ನೀಡಿದ್ದು, ಇದೀಗ ರಾಜ್ಯದ ಯಜಮಾನರಿಗೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಐದು ಗ್ಯಾರಂಟಿ ಯೋಜನೆಗಲ್ಲಿ ಪ್ರಮುಖ ಗ್ಯಾರಂಟಿ ಯೋಜನೆಯದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದರು. ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು. ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು.

Get updates about Grihalakshmi Cooperative Society

ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು ಎಂಬ ಚಿಂತನೆಯನ್ನು ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೋಟ್ಯಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಹೇಳಿದರು.

ಇನ್ನೂ ಇದೀಗ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅಸ್ತು ಎಂದಿದ್ದು, ರಾಜ್ಯದ ಮಹಿಳೆಯವರಿಗೆ ಮತ್ತೊಂದು ಶುಭ ಸುದ್ದಿ ಸಿಕ್ಕಂತಾಗಿದೆ. ಇನ್ನೂ ಷೇರು ಸಂಗ್ರಹಣೆಗೆ ಮಹಾಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪನೆಗೆ ಸಹಕಾರ ಇಲಾಖೆ ಇದೀಗ ಅನುಮತಿ ನೀಡಿದೆ. ಸಹಕಾರ ಸಂಘ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಮೂಲಕ ರಾಜ್ಯದ ಮಹಿಳೆಯರಿಗೆ ಈ ಒಂದು ಸಹಕಾರ ಸಂಘ ಸ್ಥಾಪನೆ ಮಾಡುವುದರಿಂದ ಮತ್ತಷ್ಟು ಹೆಚ್ಚಿನ ಅನುಕೂಲತೆಗಳು ಆಗಲಿವೆ ಎಂದು ಹೇಳಲಾಗುತ್ತಿದೆ.

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ. ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಹಕಾರ ಸಂಘಗಳ ಅಪರ ನಿಬಂಧಕರು ಹಸಿರು ನಿಶಾನೆ ತೋರಿಸಿ ಕರ್ನಾಟಕದ ವ್ಯಾಪ್ತಿ ನಿಗದಿಪಡಿಸಿದ್ದಾರೆ. ನೋಂದಣಿ ಪೂರ್ವದಲ್ಲಿ ಸಹಕಾರ ಸಂಘದ ಕಾರ್ಯವ್ಯಾಪ್ತಿಯಲ್ಲಿನ ಕನಿಷ್ಠ ಒಂದು ಸಾವಿರ ಸದಸ್ಯರಿಂದ ಷೇರು ಹಣ 20 ಲಕ್ಷ ರೂ. ಸಂಗ್ರಹಿಸಲು ಮುಖ್ಯ ಪ್ರವರ್ತಕರಾದ ಬಿ.ವಿ. ನಾಗರತ್ನ ಅವರಿಗೆ 90 ದಿನಗಳ ಗಡುವು ವಿಧಿಸಿ, ಷರತ್ತು ಬದ್ಧ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಯಾವುದೇ ಭಾಗದಲ್ಲಿ ಸ್ಥಾಪಿಸಲಾಗಿರುವ ಇದೇ ಉದ್ದೇಶದ ಸಹಕಾರ ಸಂಘಗಳ ಸದಸ್ಯರನ್ನು ಷೇರು ಸಂಗ್ರಹಕ್ಕೆ ಆಯ್ಕೆ ಮಾಡಿಕೊಳ್ಳಬಾರದು. ಉದ್ದೇಶಿತ ಸದಸ್ಯರಿಂದ ಈ ಸಂಬಂಧ ಘೋಷಣಾ ಪತ್ರವನ್ನು ಪಡೆದುಕೊಳ್ಳಬೇಕು. ಅಪೆಕ್ಸ್‌ ಬ್ಯಾಂಕ್‌ನ ಕೇಂದ್ರ ಕಚೇರಿಯಲ್ಲಿ ಉದ್ದೇಶಿತ ಸಂಘದ ಹೆಸರಿನಲ್ಲಿ ಅಮಾನತ್‌ ಖಾತೆ ತೆರೆಯಬೇಕು. ಸದಸ್ಯರಿಂದ ಸಂಗ್ರಹಿಸಿದ ಹಣವನ್ನು ಮರುದಿನವೇ ಈ ಖಾತೆಗೆ ಜಮೆ ಮಾಡಬೇಕು ಎಂದು ಷರತ್ತು ವಿಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+