ಕರ್ನಾಟಕದ ರಾಗಿ ಮುದ್ದೆ, ಬಸ್ಸಾರು ನೆನಪಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು!
ಬೆಂಗಳೂರು, ಆ. 24: ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಆಹಾರವನ್ನು ನೆನಪಿಸಿದ್ದಾರೆ.
ಐದು ದಿನಗಳ ರಾಜ್ಯ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಂಗಳವಾರ ಮಹತ್ವದ ಕೊರೊನಾ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ ಹಾಗೂ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರಾಜಭವನದಲ್ಲಿ ಚಾಲನೆ ನೀಡಿದರು.
ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ವ್ಯಾಕ್ಸಿನ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿಗಳು, "ಸಾರ್ವಜನಿಕರು ಮೈ ಮರೆಯಬಾರದು. ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸುವುದು, ಕೈ ತೊಳೆಯುಯುವುದನ್ನು ಕಡ್ಡಾಯವಾಗಿ ಪಾಲಿಸಬೇಕು" ಎಂದರು.

ರಾಗಿ ಮುದ್ದೆ, ಬಸ್ಸಾರು ಆರೋಗ್ಯಕರ ಆಹಾರ!
ಇದೇ ಸಂದರ್ಭದಲ್ಲಿ ಮಾತನಾಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ದು ಕರ್ನಾಟಕದ ಆಹಾರವನ್ನು ನೆನಪಿಸಿದರು. "ಕೋವಿಡ್ ಮಹಾಮಾರಿಗೆ ಇಡೀ ವಿಶ್ವವೇ ತತ್ತರಿಸಿದೆ. ಕೋವಿಡ್ ಹಾವಳಿ ನಿರಂತರವಾಗಿದ್ದು, ಜನರು ಎಚ್ಚೆತ್ತುಕೊಂಡಿರಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಹಾಗೂ ಆರೋಗ್ಯ ಇಲಾಖೆಗಳು ಜಾರಿ ಮಾಡಿರುವಂತಹ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯವೇ ಮಹಾಭಾಗ್ಯವೆಂದು ಅರಿತುಕೊಂಡು, ಮಾಸ್ಕ್ ಧರಿಸುವುದು, ಭೌತಿಕ ಅಂತರ ಕಾಪಾಡಿಕೊಳ್ಳುವುದು, ದೈಹಿಕ ವ್ಯಾಯಾಮ ಮಾಡುವುದರ ಜೊತೆಗೆ ಜಂಕ್ ಪುಡ್ ಸೇವಿಸುವುದನ್ನು ಕಡಿಮೆ ಮಾಡಬೇಕು."
"ಕರ್ನಾಟಕದ ಸಾಂಪ್ರಾದಾಯಿಕ ಆಹಾರವನ್ನು ಸೇವಿಸುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದ ಅವರು ಕರ್ನಾಟಕ ರಾಗಿ ಮುದ್ದೆ, ಬಸ್ಸಾರು ರುಚಿಕರ ಮತ್ತು ಆರೋಗ್ಯಕರ ಆಹಾರವಾಗಿದೆ" ಎಂದು ವಿವರಿಸಿದರು.
|
ಕೊರೊನಾ ವಿರುದ್ಧ ಉಚಿತ ಲಸಿಕೆ ಅಭಿಯಾನ!
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, "ಉಚಿತ ಲಸಿಕೆಯನ್ನು ಭಾರತ ಸರ್ಕಾರ ನಡೆಸುತ್ತಿದೆ. ಇದನ್ನು ಜನವರಿ 16, 2021 ರಿಂದ ಆರಂಭಿಸಲಾಯಿತು, ಮೊದಲ ಹಂತದಲ್ಲಿ, ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯನ್ನು ನೀಡಲಾಯಿತು, ನಂತರ ಫೆಬ್ರವರಿ 8, 2021 ರಿಂದ, ಮುಂಚೂಣಿಯ ಕೆಲಸಗಾರರಿಗೆ ಲಸಿಕೆಯನ್ನು ನೀಡಲಾಯಿತು. ಎರಡನೇ ಹಂತದಲ್ಲಿ, ಮಾರ್ಚ್ 1, 2021 ರಿಂದ, 60 ವರ್ಷಕ್ಕಿಂತ ಮೇಲ್ಪಟ್ಟ ಜನರು ಮತ್ತು ಏಪ್ರಿಲ್ 1, 2021 ರಿಂದ, 45-59 ವಯಸ್ಸಿನ ಜನರನ್ನು ಪ್ರಾರಂಭಿಸಲಾಯಿತು" ಎಂದು ವಿವರಿಸಿದರು.

ಸೆಪ್ಟಂಬರ್ ತಿಂಗಳಿನಿಂದ ಹೆಚ್ಚು ಲಸಿಕೆ!
ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಡವರು, ಕೆಳ ಹಂತದ ವರ್ಗದವರಿಗೆ ಲಸಿಕೆ ನೀಡುವುದು ನಮ್ಮ ಗುರಿ. ದಾನಿಗಳು ಹಾಗೂ ಖಾಸಗಿ ಸಂಸ್ಥೆಗಳು ಸಿಎಸ್‌ಆರ್ ನಿಧಿ ಮೂಲಕ ಲಸಿಕೆ ನೀಡಲು ಮುಂದಾಗಬೇಕು. ಸರ್ಕಾರ ಹಾಗೂ ಸಮಾಜ ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಬೇಕಿದೆ ಎಂದರು. ಸೆಪ್ಟೆಂಬರ್ ತಿಂಗಳಿನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈಗ ಪ್ರತಿದಿನ 3.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.

ಹೆಚ್ಚಿನ ಲಸಿಕೆ ಸರಬರಾಜಿಗೆ ಮನವಿ!
ನಾಳೆ ದೆಹಲಿಗೆ ತೆರಳುತ್ತಿದ್ದೇನೆ. ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಿದ್ದೇನೆ. ಆರೋಗ್ಯ ಸಚಿವರನ್ನು ಭೇಟಿ ಮಾಡಿದಾಗ, ಈಗಿನ ಲಸಿಕೆ ಸರಬರಾಜಿಗಿಂತ ಹೆಚ್ಚಿನ ಲಸಿಕೆ ಕೊಡುವಂತೆ ಮನವಿ ಮಾಡಲಿದ್ದೇವೆ. ಕೇಂದ್ರ ಸರ್ಕಾರದಿಂದ 1.5 ಕೋಟಿ ಲಸಿಕೆ ಪೂರೈಕೆಯಾಗುವ ನಿರೀಕ್ಷೆ ಇದೆ. ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications