ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BREAKING: ಈಗ 11 ಗಂಟೆಗೆ ಸಾರಿಗೆ ನೌಕರರ ಮುಷ್ಕರ ವಾಪಾಸ್!

|
Google Oneindia Kannada News

ಬೆಂಗಳೂರು, ಡಿ. 14: ಮುಂದಿನ ಒಂದು ಗಂಟೆಯಲ್ಲಿ (ಬೆಳಗ್ಗೆ 11 ಗಂಟೆಗೆ) ಸಾರಿಗೆ ನೌಕರರು ಮುಷ್ಕರ್ ವಾಪಾಸ್ ಪಡೆಯುವುದು ಖಚಿತವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ನೌಕರರ ಹೋರಾಟದ ನೇತೃತ್ವ ವಹಿಸಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ಮುಷ್ಕರ ಕೈಬಿಡುವುದು ಅನಿವಾರ್ಯ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಹೋರಾಟದಲ್ಲಿ ಭಾಗಿಯಾಗಿರುವ ನಮ್ಮ ಕೋರ್ ಟೀಂ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರವನ್ನು ಪ್ರಕಟಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಮುಷ್ಕರ ಮುಂದಿನ ಒಂದು ಗಂಟೆಯಲ್ಲಿ ತಾರ್ಕಿಕ ಅಂತ್ಯ ಕಾಣಲಿದೆ.

Recommended Video

Bangalore: ಕೋಡಿಹಳ್ಳಿ ನೇತೃತ್ವದಲ್ಲೇ ನಮ್ಮ ಹೋರಾಟ..! | Oneindia Kannada

ಮೊದಲೇ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಭಟನೆ ಮಾಡುತ್ತಿದ್ದವರೊಂದಿಗೆ ಮಾತನಾಡಿದ್ದರೆ ಈ ಸ್ಥಿತಿ ಎದುರಾಗುತ್ತಿರಲಿಲ್ಲ. ಈಗ 11 ಗಂಟೆಗೆ ಪ್ರತಿಭಟನೆಯ ನೃತೃತ್ವ ವಹಿಸಿರುವ ಕೋರ್ ಟೀಂ ಜೊತೆ ಮಾತನಾಡಿ ಅಂತಿಮ ನಿರ್ಧಾರ ಪ್ರಕಟ ಮಾಡುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮಧ್ಯಾಹ್ನ 12 ಗಂಟೆಯ ಬಳಿಕ ಸಾರಿಗೆ ಬಸ್‌ಗಳು ರಸ್ತೆಗೆ ಇಳಿಯಲಿವೆ.

ಕೋಡಿಹಳ್ಳಿ ಚಂದ್ರಶೇಖರ್ ಕುರಿತು ಯಡಿಯೂರಪ್ಪ ಮಹತ್ವದ ಹೇಳಿಕೆ!ಕೋಡಿಹಳ್ಳಿ ಚಂದ್ರಶೇಖರ್ ಕುರಿತು ಯಡಿಯೂರಪ್ಪ ಮಹತ್ವದ ಹೇಳಿಕೆ!

ಮೊದಲು ಮುಷ್ಕರ ವಾಪಾಸ್ ಪಡೆಯಲಿ: ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು, ಸಂಸ್ಥೆಯ ನೌಕರರು ಸರ್ಕಾರ ಒಂದೇ ಕುಟುಂಬ ಇದ್ದಂತೆ. ನಮ್ಮ ಕುಟುಂಬದ ಸಮಸ್ಯೆಯನ್ನು ನಾವೇ ಪರಿಹರಿಸಿಕೊಳ್ಳುತ್ತೇವೆ. ಕೋಡಿಹಳ್ಳಿ ಚಂದ್ರಶೇಖರ್ ಅವರಿಗು ನಮಗೂ ಯಾವುದೇ ಸಂಬಂಧವಿಲ್ಲ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

Getting Transport Department Workers Strike Back Is Inevitable Kodihalli Chandrashekar

ಕೋಡಿಹಳ್ಳಿ ಚಂದ್ರಶೇಖರ್ ಅವರು ಈ ಸಂದರ್ಭದಲ್ಲಿ ನನ್ನೊಂದಿಗೆ ಮಾತನಾಡಿಲ್ಲ ಎಂದಿರುವ ಸಾರಿಗೆ ಸಚಿವ ಸವದಿ ಅವರು, ಹಿಂದೆ ಬಹಳಷ್ಟು ಸಂದರ್ಭಗಳಲ್ಲಿ ಅವರೊಂದಿಗೆ ಮಾತನಾಡಿದ್ದೇನೆ. ಆದರೆ ಈಗ ಮಾತನಾಡಿಲ್ಲ ಎಂದಿದ್ದಾರೆ. ಮೊದಲು ಮುಷ್ಕರ ವಾಪಾಸ್ ಪಡೆಯಲಿ ಆಮೇಲೆ ಪ್ರತಿಕ್ರಿಯೆ ನೀಡುತ್ತೇವೆ. ಅವರು ನಿರ್ಧಾರ ಪ್ರಕಟಿಸಿದ ಬಳಿಕ 11 ಗಂಟೆಯ ನಂತರ ನಾನು ಈ ಬಗ್ಗೆ ಪ್ರತಿಕ್ರಿಯೆ ಕೊಡುತ್ತೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

English summary
Transport Department workers are sure to get the strike back in the next an hour. Farmer leader Kodihalli Chandrashekar, who led the strike by the Transport Workers' Union, said that getting the strike back was inevitable. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X