ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಕ್ಷಣ 3 ಸಾವಿರ ಕೋಟಿ ನೆರವು ಕೊಡಿ: ಕೇಂದ್ರಕ್ಕೆ ಯಡಿಯೂರಪ್ಪ ಮನವಿ

|
Google Oneindia Kannada News

ಬೆಳಗಾವಿ, ಆಗಸ್ಟ್ 11: ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳಗಾವಿ ಸೇರಿಂದತೆ ರಾಜ್ಯದಲ್ಲಿ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಹತ್ತು ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ. ಆದ್ದರಿಂದ ತಕ್ಷಣವೇ 3 ಸಾವಿರ ಕೋಟಿ ರೂಪಾಯಿ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಯಲ್ಲಿ ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

Give 3000 crore help Immediately: Yeddyurappa Request Central Government

ಹತ್ತು ಸಾವಿರ ಕೋಟಿ ಹಾನಿಯು ಪ್ರಾಥಮಿಕ ಅಂದಾಜು ಮಾತ್ರವಾಗಿದೆ. ಪ್ರವಾಹ ಸ್ಥಿತಿಯನ್ನು ನೋಡಿದರೆ ಅಂದಾಜು 30 ರಿಂದ 40 ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ ಎಂಬುದು ನನ್ನ ಅಭಿಪ್ರಾಯ. ಸಮಗ್ರ ಸಮೀಕ್ಷೆ ಬಳಿಕ ಇದು ಗೊತ್ತಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.

ಪ್ರವಾಹದಿಂದ 10,000 ಕೋಟಿ ಹಾನಿ, ಅಮಿತ್ ಶಾ ಗೆ ರಾಜ್ಯ ವರದಿ ಪ್ರವಾಹದಿಂದ 10,000 ಕೋಟಿ ಹಾನಿ, ಅಮಿತ್ ಶಾ ಗೆ ರಾಜ್ಯ ವರದಿ

ಜನ-ಜಾನುವಾರುಗಳ ರಕ್ಷಣೆ ಹಾಗೂ ಪುನರ್ವಸತಿ ಕಲ್ಪಿಸುವುದು ಮತ್ತು ಜನರಿಗೆ ಪರಿಹಾರ ತಲುಪಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಇದರಲ್ಲಿ ಯಾವುದೇ ರಾಜೀಯಿಲ್ಲ ಎಂದರು.

ಸಂಪುಟ ವಿಸ್ತರಣೆ ಯಾವಾಗ? ಸ್ಪಷ್ಟನೆ ನೀಡಿದ ಯಡಿಯೂರಪ್ಪ ಸಂಪುಟ ವಿಸ್ತರಣೆ ಯಾವಾಗ? ಸ್ಪಷ್ಟನೆ ನೀಡಿದ ಯಡಿಯೂರಪ್ಪ

ಬೆಳೆಹಾನಿಯಿಂದ ತತ್ತರಿಸಿರುವ ರೈತರು, ಮನೆಗಳನ್ನು ಕಳೆದುಕೊಂಡಿರುವ ಜನರು ಆತಂಕ ಪಡಬೇಕಿಲ್ಲ ಸರ್ಕಾರ ಅವರ ಜತೆಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ರಾಷ್ಟ್ರೀಯ ವಿಪತ್ತು ಘೋಷಣೆ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಲಿದೆ. ಪರಿಹಾರ ಒದಗಿಸುವುದು ರಾಜ್ಯ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದರು.

English summary
CM Yeddyurappa requested central government to give 3000 crore rupees help immediately to help flood affected.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X