Breaking: ದಲಿತ ಸಮುದಾಯಕ್ಕೆ ಸಿಎಂ ಸ್ಥಾನ: ವರಿಷ್ಠರ ಮುಂದೆ ಜಿ.ಪರಮೇಶ್ವರ ಆಗ್ರಹಿಸಿದ್ದೇನು! ಕೆಸಿವಿ ಭರವಸೆ
ಬೆಂಗಳೂರು, ಫೆಬ್ರವರಿ 19: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚಚೆ ನಡುವೆ ಹೈಕಮಾಂಡ್ ಕರೆ ಮೇರೆಗೆ ದೆಹಲಿಗೆ ತೆರಳಿದ್ದ ರಾಜ್ಯ ಗೃಹ ಸಚಿವ ಜಿ.ಪಮರೇಶ್ವರ ಅವರು ಮಹತ್ವದ ವಿಷಯಗಳನ್ನು ಚರ್ಚಿಸಿದ್ದಾರೆ. ಪಕ್ಷದಲ್ಲಿ ಈಗ ಬೇರೆಯವರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂದು ಹಲವು ವಿಷಯಗಳನ್ನು ವರಿಷ್ಠರ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸಕಾರಾತ್ಮಕ ಸ್ಪಂದನೆ ವ್ಯಕ್ತಪಡಿಸಿದ್ದರೆ.
ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿ ತೆರಳಿ ಗೃಹ ಸಚಿವರು, ನೇರವಾಗಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದಾರೆ. ನಾನು 2010ರಿಂದ 2018ರವರೆಗೆ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಪಕ್ಷ ಸಂಘಟನೆಗಾಗಿ ಅಧಿಕಾರವನ್ನು ತ್ಯಜಿಸಿದ್ದೇನೆ. ಸಚಿವ ಸ್ಥಾನ ಬಿಟ್ಟು ಕೊಟ್ಟಿದ್ದೇನೆ.

ಪಕ್ಷದ ನಿಯಮವಾದ ಒಬ್ಬರಿಗೆ ಒಂದೇ ಹುದ್ದೆ ಎಂಬುದಕ್ಕೆ ನಾನು ಬದ್ಧವಾಗಿದ್ದುಕೊಂಡು ಗೌರವ ಕೊಟ್ಟಿದ್ದೇನೆ. ಈಗ ಪಕ್ಷದಲ್ಲಿ ಬೇರೆಯವರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ. ಎಸ್‌ಸಿ ಸಮುದಾಯದ ನಾಯಕರನ್ನು ಪಕ್ಷದಲ್ಲಿ ಕಡೆಗಣಿಸುತ್ತಿದ್ದಾರೆ ಎಂಬ ಬಗ್ಗೆ ಸಮುದಾಯದ ತಳಮಟ್ಟದಲ್ಲಿ ಚರ್ಚೆಯಾಗುತ್ತಿದೆ ಎಂದು ಅವರು ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ವಿವರಿಸಿದ್ದಾರೆ. ಜೊತೆಗೆ ದಲಿತ ಸಮುದಾಯ ನಾಯಕರಿಗೆ ಮನ್ನಣೆ ನೀಡುವಂತೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಿ
ಕಾಂಗ್ರೆಸ್ ಪಕ್ಷವನ್ನೇ ಹಲವು ವರ್ಷಗಳಿಂದ ಬೆಂಬಲಿಸುತ್ತ ಬಂದಿರುವ ದಹಲಿತ ಸಮುದಾಯದ ಜನರಿಗೆ ನಾವೆಲ್ಲ ಏನೆಂದು ಉತ್ತರಿಸಬೇಕು. ಅಧಿಕಾರ ಹಂಚಿಕೆ ಧ್ವನಿ ಎದ್ದ ಬಳಿಕ ನಮ್ಮ ಸಮುದಾಯದವರು ಪಕ್ಷ ಸಂಘಟನೆಗೆ ನೊಗ ಹೊರುವುದಕ್ಕೆ ಮಾತ್ರ ಸೀಮಿತವೇ ಎಂದು ಜನತೆ ಪ್ರಶ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಈವರೆಗೂ ದಲಿತರು ಮುಖ್ಯಮಂತ್ರಿ ಹುದ್ದೆಗೆ ಏರಿಲ್ಲ. ಪ್ರಸ್ತುತ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡುವುದಾದರೆ ಪರಿಶಿಷ್ಟ ಜಾತಿಯ ನಾಯಕರನ್ನು ಪರಿಗಣಿಸುವಂತೆ ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದಾರೆ.

ಪಕ್ಷದಲ್ಲಿ ಇರುವ ದಲಿತ ಸಮುದಾಯದ ಅರ್ಹತೆ ಇರುವ ಯಾರಿಗಾದರು ಅವಕಾಶ ಕಲ್ಪಿಸಿ. ಶೋಷಿತ ಸಮುದಾಯಗಳ ಪರ ಕಾಂಗ್ರೆಸ್ ಪಕ್ಷ ಇದೆ ಎಂಬ ಸಂದೇಶವನ್ನು ರವಾನಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ದಲಿತ ಶಾಸಕ ಡಿನ್ನರ್ ಮೀಟಿಂಗ್
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಂಡದ ಶಾಸಕರ ಗೌತಣಕೂಟ ಆಯೋಜನೆ ಮಾಡಿ ರದ್ದಾಗಿತ್ತು. ಅದಾದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಗೃಹ ಸಚಿವ ಪರಮೇಶ್ವರ ಅವರಿಗೆ ಮಂಗಳವಾರ ದೆಹಲಿಗೆ ಕರೆ ನೀಡಿತ್ತು. ಈ ಡಿನ್ನರ್ ಮೀಟಿಂಗ್ ವಿಚಾರವನ್ನು ಗೃಹ ಸಚಿವರು ಪ್ರಸ್ತಾಪಿಸಿದ್ದಾರೆ. ಶೋಷಿತ ಸಮಾವೇಶ, ಪವರ್ ಶೇರಿಂಗ್ ವಿಚಾರ ಹಾಗೂ ಸರ್ಕಾರ ಮತ್ತು ಪಕ್ಷದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ಅವರು ನಾಯಕರ ಗಮನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಪಕ್ಷಕ್ಕಾಗಿ ತಳ ಸಮುದಾಯಗಳ ಬೆಂಬಲ, ಶ್ರಮ ಅಪಾರ
ಬಹುಕಾಲದಿಂದಲೇ ತಳ ಸಮುದಾಯಗಳು ಕಾಂಗ್ರೆಸ್ ಪಕ್ಷದ ಜೊತೆಗೆ ಗಟ್ಟಿಯಾಗಿ ನಿಂತಿವೆ. ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಈವರೆಗೂ ಉನ್ನತ ಹುದ್ದೆಯನ್ನು ಅಲಂಕರಿಸಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಯಾವುದೇ ಆಪೇಕ್ಷೆಗಳಿಲ್ಲದೆ ಹಲವರು ದುಡಿದಿದ್ದಾರೆ. ಮುಖ್ಯಮಂತ್ರಿ ಹುದ್ದೆ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಸಮುದಾಯದ ಅರ್ಹ ನಾಯಕರಿಗೆ ಮನ್ನಣೆ ನೀಡುವಂತೆ ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ದಲಿತ ಸಮಾವೇಶಕ್ಕೆ ದಿನಾಂಕ ಫಿಕ್ಸ್‌ಗೆ ಮನವಿ
ಇನ್ನೂ ಶೋಷಿತರ ಸಮಾವೇಶಕ್ಕೆ ದಿನಾಂಕ ನಿಗದಿಪಡಿಸುವಂತೆಯೂ ವರಿಷ್ಠರ ಬಳಿ ಗೃಹ ಸಚಿವ ಜಿ.ಪರಮೇಶ್ವರ ಮನವಿ ಮಾಡಿಕೊಂಡಿದ್ದಾರೆ. ಇತ್ತ ಗೃಹ ಸಚಿವರೊಬ್ಬರನ್ನೇ ದೆಹಲಿಗೆ ಕರೆದಿದ್ದಕ್ಕೆ ರಾಜ್ಯ ನಾಯಕರಲ್ಲಿ ಢವ ಢವ ಶುರುವಾಗಿದೆ. ಈಗಲೇ ಬಣ ರಾಜಕೀಯದಿಂದ ಬೇಸತ್ತ ರಾಜ್ಯ ಸರ್ಕಾರ, ದಲಿತ ಸಮಾವೇಶ ನಡೆದರೆ, ದಲಿತರಿಗೆ ಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟರೆ, ಹಾಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಸ್ಥಾನದ ಆಕಾಂಕ್ಷಿ ಹಾಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಬ್ಬರಿಗೂ ಸಂಕಷ್ಟ ಎದುರಾಗಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ದಲಿತ ಸಮಾವೇಶ ಮುಂದೂಡಿಕೆ ಆಗುತ್ತಿದೆ ಎಂದು ಹಲವರು ಶಂಕಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications