ನೌಕರರಿಗೆ ವೇತನ ಸಹಿತ ಹೆರಿಗೆ ರಜೆ: ಮಹಿಳಾ ಆಯೋಗ ಹೇಳಿದ್ದೇನು?

ಬೆಂಗಳೂರು, ಅಕ್ಟೋಬರ್‌ 07: ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ವೇತನ ಸಹಿತ ಹೆರಿಗೆ ರಜೆ ನೀಡಿ, ಕರ್ತವ್ಯದಲ್ಲಿ ಮುಂದುವರೆಸುವಂತೆ ಕೋರಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ವೇತನ ಸಹಿತ ಹೆರಿಗೆ ರಜೆ ನೀಡಬೇಕು.

ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರು ಹಾಗೂ ಶುಕ್ರೂಷಕರಿಗೆ ಹೆರಿಗೆ ಭತ್ಯೆಯನ್ನೂ ನೀಡುತ್ತಿಲ್ಲ. ಹೆರಿಗೆ ರಜೆ ಮುಗಿಸಿಕೊಂಡು ಕರ್ತವ್ಯ ನಿರ್ವಹಿಸಲು ಬರುವ ಸಿಬ್ಬಂದಿಯನ್ನು ಕೆಲಸಕ್ಕೂ ನೇಮಿಸಿಕೊಳ್ಳುತ್ತಿಲ್ಲ ಎಂದು ಸುವರ್ಣ ಕರ್ನಾಟಕ ಶುಶೂಷಾಧಿಕಾರಿಗಳ ಸಂಘವು ಆಯೋಗಕ್ಕೆ ಮನವಿ ಸಲ್ಲಿಸಿದೆ. ಮಹಿಳಾ ನೌಕರರಿಗೆ ವೇತನಸಹಿತ ಹೆರಿಗೆ ರಜೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗೆ ನಿರ್ದೇಶಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Give paid maternity leave to outsourced employees Women s Commission

ಈ ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಮಹಿಳಾ ನೌಕರರುಗಳಿಗೆ ಹಾಗೂ ಶುಶೂಷಾಧಿಕಾರಿಗಳಿಗೆ ಹೆರಿಗೆ ಭತ್ಯೆ ನೀಡುತ್ತಿರುವುದಿಲ್ಲ ಹಾಗೂ ಪುನಃ ಸದರಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲಸಕ್ಕೆ ನೇಮಿಸಿಕೊಳ್ಳುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಸುವರ್ಣ ಕರ್ನಾಟಕ ಶುಶೂಷಾಧಿಕಾರಿಗಳ ಸಂಘದವರು ಮನವಿಯನ್ನು ಸಲ್ಲಿಸಿರುತ್ತಾರೆ. ಹಾಗಾಗಿ ಕಾರ್ಮಿಕ ಇಲಾಖೆಯ ಆದೇಶದಂತೆ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಮಹಿಳಾ ನೌಕರರಿಗೆ ವೇತನ ಸಹಿತ ಹೆರಿಗೆ ರಜೆ ನೀಡಿ, ಹೆರಿಗೆಯ ರಜೆಯನ್ನು ಕರ್ತವ್ಯದ ದಿನಗಳೆಂದು ಪರಿಗಣಿಸಿ, ಅವರನ್ನು ಕರ್ತವ್ಯದಲ್ಲಿ ಮುಂದುವರಿಸುವಂತೆ ಅವಕಾಶ ನೀಡುವಂತೆ ಈ ಮೂಲಕ ತಮ್ಮನ್ನು ಕೋರುತ್ತೇನೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಪತ್ರ ಬರೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+