Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ
Good Friday: ನೈಋತ್ಯ ರೈಲ್ವೆ ಇಲಾಖೆಯು ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ಗುಡ್ ಫ್ರೈಡೇ ಮತ್ತು ಈಸ್ಟರ್ ಸಮಯದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದಾಗಿ ಇದೀಗ ಭಾರತೀಯ ರೈಲ್ವೆ ಇಲಾಖೆಯು ಬೆಂಗಳೂರು ಮತ್ತು ಮಡಗಾಂವ್ (ಕಾರವಾರ) ನಡುವೆ ವಿಶೇಷ ರೈಲು ಸೇವೆಯನ್ನು ನೀಡುವುದಕ್ಕೆ ಮುಂದಾಗಿದೆ.
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಮತ್ತು ನೈಋತ್ಯ ರೈಲ್ವೆ ಇಲಾಖೆಯು ಏಪ್ರಿಲ್ 2 ರಂದು ರಾತ್ರಿ 11.55 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಸಂಜೆ 5.30 ಕ್ಕೆ ಮಡಗಾಂವ್ ತಲುಪಲಿದೆ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೈಲು ಸಂಖ್ಯೆ 06272 ಮಡಗಾಂವ್ ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ಎಕ್ಸ್‌ಪ್ರೆಸ್ ಏಪ್ರಿಲ್ 5 ರಂದು ಬೆಳಿಗ್ಗೆ 11 ಗಂಟೆಗೆ ಮಡಗಾಂವ್ ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಿಗ್ಗೆ 5.20 ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಇನ್ನು ರೈಲು ಪ್ರಮುಖವಾಗಿ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರಸ್ತೆ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರಸ್ತೆ, ಕುಮಟಾ, ಗೋಕರ್ಣ ಹಾಗೂ ಕಾರವಾರ ರೈಲು ನಿಲ್ದಾಣಗಳಲ್ಲಿ ನಿಲುಗಡೆಯನ್ನು ನೀಡಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಮಡಗಾಂವ್ - ಬೆಂಗಳೂರು ಕಂಟೋನ್ಮೆಂಟ್ ವಿಶೇಷ ರೈಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಲ್ಲಿ ಹೆಚ್ಚುವರಿ ನಿಲುಗಡೆಯನ್ನು ಒಳಗೊಂಡಿರಲಿದೆ.
ಪ್ರತಿ ರೈಲು ಎರಡು 2-ಟೈರ್ ಮತ್ತು 3-ಟೈರ್ ಎಸಿ, ಒಂಬತ್ತು ಸ್ಲೀಪರ್, ನಾಲ್ಕು ಸಾಮಾನ್ಯ ಎರಡನೇ ದರ್ಜೆ ಮತ್ತು ಎರಡು ಲಗೇಜ್-ಕಮ್-ಬ್ರೇಕ್ ವ್ಯಾನ್ ಕೋಚ್‌ಗಳನ್ನು ಹೊಂದಿರುತ್ತದೆ. ಏಪ್ರಿಲ್ 1 ರಂದು ಬುಕಿಂಗ್ ಪ್ರಾರಂಭಿಸಲಾಗುವುದು ಎಂದು ನೈಋತ್ಯ ರೈಲ್ವೆ ಇಲಾಖೆಯು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ಸಾಲು ಸಾಲು ರಜೆ
ಇನ್ನು ಏಪ್ರಿಲ್ ತಿಂಗಳಿನಲ್ಲಿ ಸಾಲು ಸಾಲು ರಜೆಗಳು ಇವೆ. ಏಪ್ರಿಲ್ ಮೊದಲ ವಾರದಲ್ಲೇ ಮೂರು ದಿನಗಳ ಸರಣೆ ರಜೆ ಬಂದಿರುವುದರಿಂದ ವಿವಿಧ ರೈಲುಗಳ ಸಂಚಾರವನ್ನು ಹೆಚ್ಚಿಸಲಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಮೂರು ದಿನ ರಜೆ ಇದೆ. ಏಪ್ರಿಲ್ 3ರ ಶುಕ್ರವಾರ ಗುಡ್‌ಫ್ರೈಡೇ ಸರ್ಕಾರಿ ರಜೆ ಇದೆ.
ಏಪ್ರಿಲ್ 4 ಹಾಗೂ 5ರಂದು ಶನಿವಾರ ಹಾಗೂ ಭಾನುವಾರ ವಾರಾಂತ್ಯದ ರಜೆ ಇರಲಿದೆ. ಹೀಗಾಗಿ, ಈ ಅವಧಿಯಲ್ಲಿ ವಿವಿಧ ಊರುಗಳಿಗೆ ರೈಲಿನಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ, ಈ ಅವಧಿಯಲ್ಲಿ ಸಾರ್ವಜನಿಕರಿಗೆ ಸುಲಭ ರೈಲು ಸೇವೆ ಸಿಗುವಂತೆ ಮಾಡುವುದು ಹಾಗೂ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹೆಚ್ಚುವರಿ ರೈಲು ಸೇವೆಯನ್ನು ಪರಿಚಯಿಸಲಾಗುತ್ತಿದೆ.












Click it and Unblock the Notifications