'ಬಸನಗೌಡ ಪಾಟೀಲ ಯತ್ನಾಳ್ ಅವರ ಹೊಸ ಪಕ್ಷಕ್ಕೆ ಶುಭವಾಗಲಿ'

ಬೆಳಗಾವಿ, ಮಾರ್ಚ್‌ 31: ಯುಗಾದಿ ಹಬ್ಬಕ್ಕೆ ಹೊತ್ತಲ್ಲಿ ಬಿಜೆಪಿ ಹೈಕಮಾಂಡ್‌ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನ ಉಚ್ಛಾಟನೆ ಮಾಡುವ ಮೂಲಕ ಕಹಿಯನ್ನು ನೀಡಿದೆ. ಆದರೆ, ಯುಗಾದಿ ಹಬ್ಬದಲ್ಲಿಯೇ ಕಾರ್ಯಕರ್ತರಿಗೆ ಸಿಹಿ ಸುದ್ದಿಯನ್ನು ಯತ್ನಾಳ್‌ ನೀಡಲು ಮುಂದಾಗಿದ್ದಾರೆ. ತಮ್ಮ ಕಾರ್ಯಕರ್ತರಿಗೆ ಹಿಂದುತ್ವದ ಹಿನ್ನೆಲೆಯುಳ್ಳ ಹೊಸ ಪಕ್ಷ ಸ್ಥಾಪನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕಾರ್ಯಕರ್ತರೊಂದಿಗೆ ರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ತಿಳಿಸಿದ್ದಾರೆ.

ಗಣೇಶಪುರ ಪೈಪ್‌‌ಲೈನ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಬೆಳಗಾವಿ ಜಿಲ್ಲೆಯ ನಿರ್ಮಿತಿ ಕೇಂದ್ರ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ ಪತ್ರಕರ್ತರೊಂದಿಗೆ ಯತ್ನಾಳ್‌ ಹೊಸ ಪಕ್ಷ ಸ್ಥಾಪನೆ ಕುರಿತು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾತನಾಡಿ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ್ ಅವರು ಹೇಳಿದಂತೆ, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಯಾವುದೇ ಒಳ ಒಪ್ಪಂದವಿಲ್ಲ. ಅವರು (ಯತ್ನಾಳ್) ನಾಲಿಗೆಗೂ ಮೆದುಳಿಗೂ ಸಂಬಂಧವಿಲ್ಲದಂತೆ ಮಾತನಾಡುತ್ತಾರೆ. ಅವರು ಕಟ್ಟಲು‌ ಹೊರಟಿರುವ ಹೊಸ ಪಕ್ಷಕ್ಕೆ ಶುಭವಾಗಲಿ ಎಂದು ಹಾರೈಸಿದರು.

Good Luck To Basanagouda Patil Yatnal New Party Says Lakshmi Hebbalkar

ಹಾಲಿನ ದರ 4 ರೂಪಾಯಿ ಹೆಚ್ಚಳ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಹಾಲಿನ ದರ ಏರಿಕೆ ಮಾಡಿರುವುದರಿಂದ ರೈತರಿಗೆ ಅನುಕೂಲವಾಗಲಿದೆ. ಏರಿಕೆಯಾಗಿರುವ ನಾಲ್ಕು ರೂಪಾಯಿ ನೇರವಾಗಿ ರೈತರಿಗೆ ಸೇರಲಿದೆ. ಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲ ಆಗಲಿದ್ದು, ಕೆಎಂಎಫ್ ಈ ಹಣ ಇಟ್ಟುಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Good Luck To Basanagouda Patil Yatnal New Party Says Lakshmi Hebbalkar

ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಹಗರಣ ನಡೆದಿದೆ ಎನ್ನು ಆರೋಪದ ಕುರಿತು ಪ್ರತಿಕ್ರಿಯಿಸಿದ ಸಚಿವರು, ರಾಜ್ಯ ಬಿಜೆಪಿ ನಾಯಕರಿಗೆ ಬೇರೆ ಕೆಲಸವಿಲ್ಲ. ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದೇ ಕೆಲಸವಾಗಿದೆ. ಟೆಂಡರ್ ನಲ್ಲಿ ಯಾವುದೇ ಹಗರಣ ನಡೆದಿಲ್ಲ. ಉತ್ತರ ಪ್ರದೇಶ, ಮಧ್ಯ ಪ್ರದೇಶದಲ್ಲಿ ಟೆಂಡರ್ ಪಡೆದಿರುವ ಕಂಪನಿಗೆ ಇಲ್ಲೂ ಟೆಂಡರ್ ಸಿಕ್ಕಿದೆ. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲೇ ಉತ್ತರ ನೀಡಿದ್ದಾರೆ ಎಂದರು. ನಾನು ಜಿಲ್ಲಾ ಉಸ್ತುವಾರಿ ಸಚಿವೆಯಾದ ಬಳಿಕ ಉಡುಪಿಯಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವರು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+