ಕರ್ನಾಟಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ
ಬೆಂಗಳೂರು, ಮೇ 30: ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಂಗಳವಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ (Dearness Allowance) ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ನೌಕರರ ಬೇಡಿಕೆಯೊಂದನ್ನು ಈಡೇರಿಸುವಲ್ಲಿ ಯಶಸ್ವಿಯಾಗಿದೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 4ಷ್ಟು ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಇದು ನೌಕರರ ಮೊಗದಲ್ಲಿ ಸಂತಸಕ್ಕೆ ಕಾರಣವಾಗಿದೆ. ಈ ಪರಿಷ್ಕೃತ ತುಟ್ಟಿ ಭತ್ಯೆ 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2023ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಏರಿಕೆ ಮಾಡಲಾಗಿದೆ. ನೌಕರರ ಮೂಲ ವೇತನದ ಶೇ. 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸೂಚಿಸಲಾಗಿದೆ. ಈ ಮೂಲಕ ಕಳೆದ ಐದು ತಿಂಗಳ ತುಟ್ಟಿಭತ್ಯೆಯಲ್ಲಿ ಶೇಕಡಾ 4ರಷ್ಟು ಹೆಚ್ಚಳವನ್ನು ಪಡೆಯಲಿದ್ದಾರೆ.
ಸರ್ಕಾರದ ಆದೇಶದಲ್ಲಿ ಏನಿದೆ?
ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸುವಂತಿಲ್ಲ. ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ಜೀವನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ 2023 ರ ಜನವರಿ 1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಶೇಕಡ 35ಕ್ಕೆ ಹೆಚ್ಚಿಸಿ ಮಂಜೂರು ಮಾಡಿದಕ್ಕೆ ಸರ್ಕಾರ ಹರ್ಷ ವ್ಯಕ್ತಪಡಿಸಿದೆ.
ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತಿಗಳಲ್ಲಿ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಶಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.
ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು ಎಂದು ಸರ್ಕಾರ ತಿಳಿಸಿದೆ.
ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು, 2028ರ ಮೇ ತಿಂಗಳ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ. ತುಟ್ಟಿಭತ್ಯೆ ಸಂಭಾವನೆ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸುವುದಿಲ್ಲ ಎಂದು ಹೇಳಿದೆ.
-
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications