Good News: ಸರ್ಕಾರದಿಂದ 2,000 ಮನೆಗಳ ನಿರ್ಮಾಣ, ಯಾರಿಗೆ ಸಿಗಲಿದೆ ?
ರಾಜ್ಯ ಕಾಂಗ್ರೆಸ್ ಸರ್ಕಾರವು ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ರಾಜ್ಯದಲ್ಲಿ ಬರೋಬ್ಬರಿ 2,000 ಸಾವಿರ ಮನೆಗಳನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣ ಮಾಡಲಾಗುತ್ತಿದ್ದು. ಶೀಘ್ರದಲ್ಲೇ ಜನರಿಗೆ ಹಂಚಿಕೆ ಮಾಡಲಾಗುವುದು ಎಂದು ಹೇಳಲಾಗಿದೆ. ಈಗಾಗಲೇ 1300 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಫಲಾನುಭವಿಗಳಿಗೆ 1 ಸಾವಿರ ಮನೆಗಳನ್ನು ಹಂಚಿಕೆ ಮಾಡುವುದಾಗಿ ಹೇಳಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕ ಸರ್ಕಾರವು ಬಡವರು ಹಾಗೂ ಕೊಳಗೇರಿಗಳಲ್ಲಿ ವಾಸ ಮಾಡುವವರಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಶೀಘ್ರ 2000 ಸಾವಿರ ಮನೆಗಳು ಜನರಿಗೆ ಸಿಗಲಿವೆ ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೂರ್ವ ಹಾಗೂ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಕೊಳಚೆ ಪ್ರದೇಶಗಳಿಗೆ ಭೇಟಿ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾಮಗಾರಿ ಪರಿಶೀಲನೆ ಮಾಡಿ ಅವರು ಮಾತನಾಡಿದ್ದಾರೆ.

ಬೆಂಗಳೂರಿನ ಮೆರ್ವಿಕ್ ಕನಸ್ಟ್ರಕ್ಷನ್ ಕಂಪನಿಯು 73 ಕೋಟಿ ರೂಪಾಯಿ ವೆಚ್ಚದಲ್ಲಿ 1300 ಮನೆಗಳನ್ನು ನಿರ್ಮಾಣ ಮಾಡುತ್ತಿದೆ. ಈಗಾಗಲೇ 672 ಮನೆಗಳು ಹಂಚಿಕೆಗೆ ಸಿದ್ಧವಾಗಿವೆ. ಇನ್ನೂ ಒಂದು ತಿಂಗಳು ಕಾಲಾವಕಾಶ ಇರುವುದರಿಂದ ಸುಮಾರು 1 ಸಾವಿರ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ. ಬಜೆಟ್ ಅಧಿವೇಶನ ಪೂರ್ಣಗೊಂಡ ನಂತರ ಮುಖ್ಯಮಂತ್ರಿಗಳಿಂದ ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಲಾಗುತ್ತದೆ. 1300 ಮನೆಗಳ ಜೊತೆಗೆ 320 ಮನೆಗಳನ್ನು ಪೌರ ಕಾರ್ಮಿಕರಿಗಾಗಿ ನಿರ್ಮಿಸಲಾಗುತ್ತಿದೆ. ಅಲ್ಲದೇ 260 ಮತ್ತು 780 ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂದು ಮನೆಗೆ ರೂ.7.58 ಲಕ್ಷ ವೆಚ್ಚವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 38 ಸ್ಲಂಗಳಿವೆ. 7358 ಕುಟುಂಬಗಳಿದ್ದು, 1264 ಕುಟುಂಬಗಳಿಗೆ ಮನೆಗಳನ್ನು ನೀಡಲಾಗುವುದು. 2014 ರಿಂದ ಸುಮಾರು 16 ಸಾವಿರ ಅರ್ಜಿಗಳು ಬಂದಿವೆ. ಹಂತ ಹಂತವಾಗಿ ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದಿದ್ದಾರೆ.
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸೆಪ್ಟೆಂಬರ್ ತಿಂಗಳಲ್ಲಿ ಭೇಟಿ ನೀಡಿದಾಗ ಡಿಸೆಂಬರ್ ತಿಂಗಳಲ್ಲಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಮನೆಗಳ ನಿರ್ಮಾಣ ಕಾರ್ಯ ನಿಧಾನಗತಿಯಲ್ಲಿ ಸಾಗಿತ್ತು. ಅಲ್ಲದೇ ಅಂತಿಮ ಹಂತದ ಕೆಲಸಗಳು ವಿಳಂಬವಾಗಿರುವುದರಿಂದ ಮನೆಗಳ ಹಂಚಿಕೆ ಮಾಡಲಾಗಲಿಲ್ಲ. ಮುಂದಿನ ತಿಂಗಳು ಅಥವಾ ಏಪ್ರಿಲ್‌ನಲ್ಲಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಈಗಾಗಲೇ ಮನೆಗಳಿಗೆ ಬಣ್ಣ ಹಚ್ಚುವಿಕೆ, ಟೈಲ್ಸ್, ಬಾಗಿಲು ಅಳವಡಿಕೆ ಕೆಲಸಗಳು ಪೂರ್ಣಗೊಂಡಿವೆ. ವಿದ್ಯುತ್ ಸಂಪರ್ಕದ ಕೆಲಸ ಬಾಕಿಯಿದೆ. ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. 15 -20 ದಿನದಲ್ಲಿ ಬಾಕಿಯಿರುವ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿವೆ. ಕೆಲವು ಲೋಪದೋಷಗಳನ್ನು ಹೊರತುಪಡಿಸಿದರೆ ಮನೆಗಳ ಗುಣಮಟ್ಟ ಚೆನ್ನಾಗಿದೆ. ಈಗ ಲೋಪದೋಷಗಳನ್ನು ಸರಿಪಡಿಸಲಾಗಿದೆ ಎಂದರು.
ಬಲಿಷ್ಠ ಮನೆಗಳ ನಿರ್ಮಾಣಕ್ಕೆ ಸೂಚನೆ: ಧಾರವಾಡದ ಶಿರಡಿನಗರದಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಬಲಿಷ್ಠವಾಗಿ ನಿರ್ಮಿಸಬೇಕು. ಮನೆಗಳ ಪಕ್ಕದಲ್ಲಿ ರೈಲ್ವೆ ಹಳಿ ಹಾದು ಹೋಗಿರುವುರಿಂದ ಮನೆಗಳಿಗೆ ಹಾನಿ ಆಗುವ ಸಂಭವನೀಯತೆ ಹೆಚ್ಚಾಗಿರುತ್ತದೆ. ಹೀಗಾಗಿ ತಾಂತ್ರಿಕ ದೋಷಗಳನ್ನು ಸರಿಪಡಿಸಿಕೊಂಡು, ಬಲಿಷ್ಠ ಮನೆಗಳನ್ನು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಮನೆಗಳ ನಿರ್ಮಾಣದ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ: ಗಿರಣಿಚಾಳದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಿದ್ದ ಜಾಗದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಲಾಗುವುದು. ಮುಂದಿನ ದಿನಗಳಲ್ಲಿ ಸರ್ಕಾರದ ಮಟ್ಟದಲ್ಲಿ ಮನೆಗಳ ನಿರ್ಮಾಣದ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್‌ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications