Good News: ರಾಜ್ಯ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್
Good News: ರೈತರನ್ನು ದೇಶದ ಬೆನ್ನೆಲುಬು ಅಂತಲೇ ಕರೆಯುತ್ತಾರೆ. ಅವರು ಇಲ್ಲದಿದ್ದರೆ ತಿನ್ನುವುದಕ್ಕೆ ತುತ್ತು ಅನ್ನವೂ ಸಿಗುದಿಲ್ಲ. ಆದ್ದರಿಂದ ಸರ್ಕಾರದಿಂದ ಅವರಿಗೆ ಹೆಚ್ಚೆಚ್ಚು ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕಾಗುತ್ತದೆ. ಇದೀಗ ರಾಜ್ಯದ ರೈತರಿಗೆ ಹೆಚ್ಚು ಉಪಯುಕ್ತವಾಗುವಂತೆ ಸರ್ಕಾರದಿಂದ ಶುಭ ಸುದ್ದಿಯೊಂದನ್ನು ನೀಡಲಾಗಿದೆ. ಮಾಹಿತಿ ಇಲ್ಲಿದೆ ಗಮನಿಸಿ.
ರಾಜ್ಯದ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆಯೇ ನಿರಂತರ 7 ಗಂಟೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಸಿ.ಬಿ.ಸುರೇಶ್ ಬಾಬು ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ತಾಂತ್ರಿಕ ಸಾದ್ಯತೆ ಇರುವ ಉಪ ಕೇಂದ್ರಗಳಿಂದ ನಿರಂತರ 7 ಗಂಟೆ ತ್ರೀ ಫೇಸ್ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತಾಂತ್ರಿಕ ಸಾಧ್ಯತೆ ಇಲ್ಲದ ಉಪ ಕೇಂದ್ರಗಳಲ್ಲಿ ಪಾಳಿಯಲ್ಲಿ ಹಗಲು ವೇಳೆ 4 ಗಂಟೆ, ರಾತ್ರಿ ವೇಳೆ 3 ಗಂಟೆ ಸೇರಿ ಒಟ್ಟು 7 ಗಂಟೆ 3 ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅಂತರ್ಜಲ ಕುಸಿತದ ಕಾರಣ ಉಲ್ಲೇಖಿಸಿ ತ್ರೀ ಫೇಸ್ ವಿದ್ಯುತ್ ಸರಬರಾಜು ಸಮಯ ಬದಲಾವಣೆಯ ಕೋರಿಕೆ ಬಂದಿಲ್ಲ ಎಂದು ಸಚಿವ ಜಾರ್ಜ್ ಅವರು ತಿಳಿಸಿದ್ದಾರೆ.
ರೈತರ ಖಾತೆಗೆ ಹಣ ಜಮಾ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಒಂದಾಗಿದ್ದು, ಈ ಯೋಜನೆಯಡಿ ರೈತರ ಖಾತೆಗೆ ಫೆಬ್ರವರಿ 24ರಂದು 19ನೇ ಕಂತಿನ ಹಣ ಜಮಾ ಆಗಲಿದೆ. ಹಾಗಾದ್ರೆ ಎಷ್ಟು ಹಣ ಹಾಕಲಾಗುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 24ರಂದು ಬಿಹಾರದ ಭಾಗಲ್ಪುರಕ್ಕೆ ಭೇಟಿ ನೀಡಲಿದ್ದರು. ಈ ವೇಳೆ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ 19ನೇ ಕಂತನ್ನು ಬಿಡುಗಡೆ ಮಾಡಲಿದ್ದರು. ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯಡಿ ಅರ್ಹ ರೈತರು ವರ್ಷಕ್ಕೆ 6,000 ರೂಪಾಯಿಗಳ ಆರ್ಥಿಕ ಸಹಾಯವನ್ನು ತಲಾ 2,000 ರೂಪಾಯಿಗಳ ಮೂರು ಸಮಾನ ಕಂತುಗಳಲ್ಲಿ ಪಡೆಯುತ್ತಾರೆ. ಈ ಯೊಜನೆ ಯಾರಿಗೆಲ್ಲಾ ಅನ್ವಯವಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈ ಯೋಜನೆ ಪಡೆಯಲು ಯಾರೆಲ್ಲಾ ಅರ್ಹರು?
* ಭಾರತೀಯ ನಾಗರಿಕರಾಗಿರಬೇಕು
* ಸಣ್ಣ ಅಥವಾ ಅತಿ ಸಣ್ಣ ರೈತರಾಗಿರಬೇಕು
* ಸಾಗುವಳಿ ಭೂಮಿಯ ಮಾಲೀಕರಾಗಿರಬೇಕು
* ತಿಂಗಳಿಗೆ ಕನಿಷ್ಠ 10,000 ರೂಪಾಯಿಗಳ ಪಿಂಚಣಿ ಪಡೆಯುವ ನಿವೃತ್ತರಾಗಿರಬಾರದು
* ಆದಾಯ ತೆರಿಗೆಗೆ ಅರ್ಜಿ ಸಲ್ಲಿಸಿರಬಾರದು
* ಸಾಂಸ್ಥಿಕ ಭೂಮಾಲೀಕರಾಗಿರಬಾರದು
ದೇಶದ 9.8ಕೋಟಿ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ 19ನೇ ಕಂತನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. ಇದರಡಿಯಲ್ಲಿ 22,000 ಕೋಟಿ ರೂಪಾಯಿಗಳನ್ನು ವರ್ಗಾಯಿಸಲಾಗುತ್ತದೆ. ಇದನ್ನು ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಾಗುವುದು. ಪಿಎಂ-ಕಿಸಾನ್ ಯೋಜನೆಯಡಿ ಪ್ರತಿಯೊಬ್ಬ ಫಲಾನುಭವಿ ರೈತನಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂಪಾಯಿಗಳ ಮೂರು ಸಮಾನ ಕಂತುಗಳಲ್ಲಿ ವಾರ್ಷಿಕ 6,000 ರೂಪಾಯಿಗಳನ್ನು ನೀಡಲಾಗುತ್ತದೆ.
ಈ ಬಗ್ಗೆ ಇತ್ತೀಚೆಗಷ್ಟೇ ಮಾಹಿತಿ ನೀಡಿದ್ದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಫೆಬ್ರವರಿ 24ರಂದು ಬಿಹಾರದ ಭಾಗಲ್ಪುರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಪಿಎಂ-ಕಿಸಾನ್ ಯೋಜನೆಯ 19ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದ್ದರು. ಈ ಮೊತ್ತವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತದೆ. 18ನೇ ಕಂತಿನಲ್ಲಿ ಫಲಾನುಭವಿಗಳ ಸಂಖ್ಯೆ 9.6 ಕೋಟಿಗೆ ಹೆಚ್ಚಾಗಿದೆ ಎಂದು ತಿಳಿಸಿದ್ದರು.












Click it and Unblock the Notifications