1 ಕೋಟಿ ಆಸ್ತಿಗಳಿಗೆ ಕರ್ನಾಟಕ ಸರ್ಕಾರದಿಂದ ಗುಡ್‌ನ್ಯೂಸ್: ಇ - ಸ್ವತ್ತು ಅಪ್ಡೇಟ್ಸ್
ಕರ್ನಾಟಕ ಸರ್ಕಾರವು ಬಿ ಖಾತಾದಿಂದ ಎ ಖಾತಾ ಪರಿವರ್ತನೆಯ ನಂತರ ಇದೀಗ ಗ್ರಾಮೀಣ ಭಾಗದ ಆಸ್ತಿದಾರರಿಗೆ ಇ ಸ್ವತ್ತು ವಿಚಾರದಲ್ಲಿ ಮಹತ್ವದ ಗುಡ್‌ನ್ಯೂಸ್ ಕೊಟ್ಟಿದೆ. ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು 1 ಕೋಟಿ ಆಸ್ತಿಗಳನ್ನು ಇ-ಸ್ವತ್ತು ವ್ಯಾಪ್ತಿಗೆ ತರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ಯೋಜನೆಯನ್ನು ರೂಪಿಸಿಕೊಂಡಿದೆ. ಈ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಬಿ - ಖಾತಾದಿಂದ ಎ - ಖಾತಾ ಗುಡ್‌ನ್ಯೂಸ್ ಕೊಟ್ಟ ನಂತರ ರಾಜ್ಯ ಸರ್ಕಾರವು ಇದೀಗ ಇ ಸ್ವತ್ತಿನ ವಿಚಾರದಲ್ಲೂ ಭರ್ಜರಿ ಗುಡ್‌ನ್ಯೂಸ್ ನೀಡಿದೆ.
ಗ್ರಾಮೀಣ ಭಾಗದಲ್ಲಿ ಇ - ಸ್ವತ್ತು ಜಾರಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಭೆ ನಡೆಸಿದ್ದು, ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಇತ್ತೀಚೆಗಷ್ಟೇ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪತ್ರ ಹೊರಡಿಸಲಾಗಿದ್ದು, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು. ಗ್ರಾಮೀಣ ಭಾಗದ ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್ ಕೊಡಲಾಗಿದೆ.

ಇ -ಸ್ವತ್ತು ಲಕ್ಷಾಂತರ ಜನರಿಗೆ ಅನುಕೂಲ: ಇನ್ನು ಕರ್ನಾಟಕ ಸರ್ಕಾರವು ಬಿ - ಖಾತಾದಿಂದ ಎ - ಖಾತಾಗೆ ಸಂಬಂಧಿಸಿದಂತೆ ಈಗಾಗಲೇ ಗುಡ್‌ನ್ಯೂಸ್ ಕೊಟ್ಟಿದೆ. ಇದೀಗ ಬಿ ಖಾತಾದ ನಂತರ ಕರ್ನಾಟಕದ ಗ್ರಾಮೀಣ ಭಾಗದಲ್ಲಿರುವ ಆಸ್ತಿಗಳಿಗೆ ಇ ಸ್ವತ್ತು ಮೂಲಕ ಬಂಪರ್ ಕೊಟ್ಟಿದೆ. ಈ ಮೂಲಕ ರಾಜ್ಯದ ಗ್ರಾಮೀಣ ಭಾಗದಲ್ಲೂ ರಿಯಲ್ ಎಸ್ಟೇಟ್ ಚುರುಕುಪಡೆದುಕೊಳ್ಳುವ ಸಾಧ್ಯತೆ ಇದೆ.
ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಕುರಿತು ಹೊಸದಾಗಿ ಬಿಡುಗಡೆ ಮಾಡಿರುವ ನಿಯಮಾವಳಿಗಳ ಕುರಿತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿವಳಿಕೆ ನೀಡಲು ಜಿಲ್ಲಾ ಮಟ್ಟದಲ್ಲಿ ವಿಶೇಷ ತರಬೇತಿ ವ್ಯವಸ್ಥೆ ಮಾಡಲು ಸೂಚನೆ ಕೊಟ್ಟಿರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳಿಸಲಾಗಿದೆ.
ರಾಜ್ಯದಲ್ಲಿ ಲಕ್ಷಾಂತರ ಜನರು ಇ - ಸ್ವತ್ತು ಯೋಜನೆಯ ಪ್ರಯೋಜನ ಪಡೆದುಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಸಾರ್ವಜನಿಕರಿಗೆ ಸುಗಮ ಹಾಗೂ ಪಾರದರ್ಶಕವಾಗಿ ಇ-ಸ್ವತ್ತು ಪ್ರಯೋಜನ ದೊರೆಯುವಂತೆ ಸಿಬ್ಬಂದಿಗೆ ತರಬೇತಿ ನೀಡಬೇಕು ಎಂದೂ ಹೇಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವನ್ನು ಪಡೆದು ಇ-ಸ್ವತ್ತು ಆಂದೋಲನವನ್ನು ಯಶಸ್ವಿಗೊಳಿಸಬೇಕೆಂದು ನಿರ್ದೇಶನ ಕೊಟ್ಟಿದ್ದಾರೆ.
ಗ್ರಾಮ ಪಂಚಾಯತಿಗಳ ಸಂಪನ್ಮೂಲವನ್ನು ವೃದ್ಧಿಸುವ ಮೂಲಕ ಸ್ಥಳೀಯ ಸರ್ಕಾರಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಪ್) ಅಡಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಲಭ್ಯವಿರುವ ಆಸ್ತಿಗಳನ್ನು ಪತ್ತೆ ಮಾಡಿ, ಅಂತಹ ಸ್ಥಳದಲ್ಲಿ ಪಂಚಾಯತಿಗಳಿಗೆ ಶಾಶ್ವತ ಆದಾಯ ತಂದು ಕೊಡುವ ಕಟ್ಟಡಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು. ಪ್ರವಾಸಿ ತಾಣಗಳು ಹಾಗೂ ಯಾತ್ರಾಸ್ಥಳಗಳ ಸಮೀಪ ಲಭ್ಯವಿರುವ ಗ್ರಾಮ ಪಂಚಾಯತಿ ಆಸ್ತಿಗಳಲ್ಲಿ ಸಂಪನ್ಮೂಲ ಹೆಚ್ಚಿಸುವ ಯೋಜನೆಗಳನ್ನು ರೂಪಿಸಿದ್ದಲ್ಲಿ ಸರ್ಕಾರ ಅನುದಾನ ನೀಡಲಿದೆ ಎಂದು ತಿಳಿಸಲಾಗಿದೆ.












Click it and Unblock the Notifications