BPL Card: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್ ನ್ಯೂಸ್
BPL Card: ಪ್ರಮುಖ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದೆ. ಅದರಲ್ಲೂ ಬಿಪಿಎಲ್ ಕಾರ್ಡ್‌ದಾರರು ಸರ್ಕಾರದ ಹೆಚ್ಚಿನ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇನ್ನೂ ಕಾರ್ಡ್‌ಗೆ ಸಂಬಧಿಸಿದಂತೆ ಆಗಾಗಗ ಬದಲಾಣೆಗಳು ಆಗುತ್ತಲೇ ಇರುತ್ತವೆ. ಇದೀಗ ಈ ಬಗ್ಗೆ ಆಹಾರ ಸಚಿವರು ಮಹತ್ವದ ಮಾಹಿತಿಯೊಂದನ್ನು ಹೊರಹಾಕಿದ್ದಾರೆ. ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ.
ಈಗಾಗಲೇ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ಸರ್ಕಾರ ರದ್ದು ಮಾಡುವ ನಿರ್ಧಾರಕ್ಕೆ ಕೈಹಾಕಿದ್ದು, ಈ ಮೂಲಕ ಅನರ್ಹರನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸವನ್ನು ಮಾಡುತ್ತಿದೆ. ಇದರ ನಡುವೆಯೇ ಇದೀಗ ಆಹಾರ ಇಲಾಖೆಯಿಂದ ಬಿಪಿಎಲ್ ಕರ್ಡುದಾರರಿಗೆ ಸಂತಸದ ಸುದ್ದಿಯೊಂದನ್ನು ನೀಡಲಾಗಿದೆ.

ಬಿಪಿಎಲ್ ಕಾರ್ಡ್‌ದಾರರು ಪಡಿತರ ಪಡೆಯುವುದಕ್ಕೆ ಕುಟುಂಬದ ಎಲ್ಲರ ವೇತನ ಪ್ರಮಾಣ ಪತ್ರ ನೀಡುವುದು ಕಡ್ಡಾಯ ಎಂದು ಹೇಳಲಾಗುತ್ತಿತ್ತು. ಆದರೇ ಎಲ್ಲರ ವೇತನ ಪ್ರಮಾಣಪತ್ರ ಕಡ್ಡಾಯವಲ್ಲ ಎಂಬುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್ ನೀಡಿದ್ದಾರೆ.
ಈ ಬಗ್ಗೆ ಕೋಲಾರದಲ್ಲಿ ಮಾತನಾಡಿದ ಅವರು, ಅರ್ಹರಲ್ಲದವರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಇಲಾಖೆಯಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರಿ ನೌಕರರು ಈ ಕಾರ್ಡ್ ಪಡೆದಿದ್ದರೇ ಅಂತವರ ಕಾರ್ಡ್ ರದ್ದುಗೊಳಿಸಲಾಗುವುದಾಗಿ ತಿಳಿಸಿದರು. ಇನ್ನು ಅಕ್ರಮ ಪಡಿತರ ಚೀಟಿ ಪರಿಶೀಲನೆಯಿಂದಾಗಿ ಪಡಿತರ ವಿತರಣೆ ಸೇರಿದಂತೆ ವಿವಿಧ ಕೆಲಸಗಳಲ್ಲಿ ಸ್ವಲ್ಪ ವಿಳಂಬವಾಗಿತ್ತು. ಈಗ ಒಂದು ಹಂತಕ್ಕೆ ಬಂದಿದೆ. ಇನ್ಮುಂದೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬುದಾಗಿ ತಿಳಿಸಿದರು.
ಬಿಪಿಎಲ್ ಕಾರ್ಡ್ ಹೊಂದಿರುವವರು ಸರ್ಕಾರಿ ನೌಕರರು ಆಗಿರಬಾರದು. ವಾರ್ಷಿಕ ಆದಾಯ ಮಿತಿ 1.20 ಲಕ್ಷ ಮೀರಬಾರದು. ಇಂತವರ ಯಾವುದೇ ರೇಷನ್ ಕಾರ್ಡ್ ರದ್ದುಗೊಳಿಸುವುದಿಲ್ಲ ಅಂತಲೂ ತಿಳಿಸಿದರು. ಈ ಮೂಲಕ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ತುಸು ನೆಮ್ಮದಿ ಸಕ್ಕಂತಾಗಿದೆ. ಅಲ್ಲದೆ, ಅವರು ಸರಿಯಾಗಿ ರೇಷನ್ ಪಡೆಯಲು ಸಹಾಯಕವಾದಂತಾಗಿದೆ.
ಪಡಿತರ ಚೀಟಿ ತಿದ್ದುಪಡಿ ವಿಧಾನಗಳು
* ಅಧಿಕೃತ ವೆಬ್‌ಸೈಟ್ https://ahara.kar.nic.in/home ಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ ಅಥವಾ ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
* ಬಳಿಕ ಅಲ್ಲಿ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ.
* ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮಿಟ್ ಮಾಡಿ.
* ಅರ್ಜಿ ಸಲ್ಲಿಕೆಯ ವೇಳೆ ನೀವು ನೀಡಿರುವಂತಹ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ಮಾತ್ರ ನಿಮಗೆ ಅಪ್ಡೇಟ್ ಆಗಿರುವ ಹೊಸ ರೇಷನ್ ಕಾರ್ಡ್ ನೀಡಲಾಗುತ್ತದೆ.












Click it and Unblock the Notifications