BPL Card: ಮುಂದಿನ ವಾರದಿಂದ ಬಿಪಿಎಲ್‌ ಕಾರ್ಡ್‌ದಾರರಿಗೆ ಲಕ್ಷ್ಮಿ ಗಳಿಗೆ

BPL Card: ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಬಿಪಿಎಲ್‌ ಕಾರ್ಡ್‌ದಾರರಿಗೆ 5 ಕೆ.ಜಿ ಉಚಿತ ಅಕ್ಕಿ, ಇನ್ನುಳಿದ 5 ಕೆ.ಜಿಗೆ ಹಣ ಜಮಾ ಮಾಡಲಾಗುತ್ತಿತ್ತು. ಆದರೆ, ಕೆಲವು ತಿಂಗಳು ಯಾವುದೇ ರೀತಿಯ ಹಣ ಬಂದಿಲ್ಲ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ಆಹಾರ ಸಚಿವ ಶುಭ ಸುದ್ದಿಯೊಂದನ್ನು ನೀಡಿದ್ದಾರೆ.

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮಾ ಆಗುತ್ತಿತ್ತು. ಇತ್ತೀಚಿಗೆ ಕೆಲವು ತಿಂಗಳಗಳವರೆಗೆ ಹಣ ಜಮಾ ಆಗಿರಲಿಲ್ಲ. ಸರ್ವರ್ ಸಮಸ್ಯೆಯಿಂದ ಈ ಹಣ ಜಮಾ ಆಗಿಲ್ಲ. ಆದ್ದರಿಂದ ಮುಂದಿನ ವಾರ ಎಲ್ಲಾ ಹಣ ಒಟ್ಟಿಗೆ ಜಮಾ ಆಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ ನೀಡಿಸರು.

Good News for BPL card holders from Minister K H Muniyappa

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ತಿಂಗಳು 10ರಂದು ಹಣ ಬಿಡುಗಡೆ ಆಗುತ್ತಿತ್ತು. ಆದರೆ, ಸರ್ವರ್ ಸಮಸ್ಯೆಯಿಂದ ಹಣ ಬಿಡುಗಡೆ ವಿಳಂಬ ಆಗಿದೆ. ಬಾಕಿ ಹಣ ಮುಂದಿನ ವಾರ ಬಿಡುಗಡೆ ಆಗಲಿದೆ. ಅದೇ ರೀತಿ ಬಿಪಿಎಲ್​ ಅರ್ಹತೆ ಪರಿಶೀಲಿಸಿ ಅನರ್ಹರನ್ನು ಎಪಿಎಲ್‌​ಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್‌ ಕಾರ್ಡ್‌ದಾರ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುತ್ತಿತ್ತು. ಪ್ರತಿ ಕೆಜಿ ಅಕ್ಕಿಗೆ ತಲಾ 34 ರೂಪಾಯಿನಂತೆ ಒಟ್ಟು 5 ಕೆಜಿ ಅಕ್ಕಿಗೆ 170 ರೂಪಾಯಿ ನೀಡಲಾಗುತ್ತಿತ್ತು. ಅದರಂತೆಯೇ ಫಲಾನುಭವಿಗಳ ಖಾತೆಗೆ ಹಣ ಸಹ ಜಮಾ ಆಗುತ್ತಿತ್ತು. ಆದ್ದರಿಂದ ಫಲಾನುಭವಿಗಳು ಬ್ಯಾಂಕ್‌ಗಳಿಗೆ ಬೇಟಿ ನೀಡಿ ಬೇಸತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಶಾಕ್‌ನಲ್ಲಿದ್ದವರಿಗೆ ಸರ್ಕಾರದಿಂದ ಶುಭ ಸುದ್ದಿ: ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ನೀಡಿ ಬಿಪಿಎಲ್‌ ಕಾರ್ಡ್‌ ಪಡೆದ ಅನರ್ಹರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಆದರೆ, ಇದೀಗ ಈ ನಿರ್ಧಾರವನ್ನು ಬದಲಿಸಿ ಅಂತಹವರಿಗೆ ಗುಡ್‌ ನ್ಯೂಸ್‌ವೊಂದನ್ನು ನೀಡಿದೆ. ಹಾಗಾದರೆ ಆ ಶುಭ ಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ನೀಡಿ ಪಡದ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಮುದಾಗಿತ್ತು. ಆದರೆ ಇದೀಗ ಸರ್ಕಾರ ಈ ನಿರ್ಧಾರವನ್ನು ಬದಲಿಸಿ ಒಂದು ಅವಕಾಶ ನೀಡಿದೆ.

ರಾಜ್ಯದಲ್ಲಿ ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಅವರ ಕಾರ್ಡ್ ರದ್ದುಗೊಳ್ಳುವ ಆತಂಕ ಕೂಡ ಎದುರಾಗಿತ್ತು. ಆದರೇ ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಪಿಎಲ್ ಕಾರ್ಡ್ ರದ್ದಾದರೂ, ಅವರನ್ನು ಎಪಿಎಲ್ ಕಾರ್ಡ್‌ಗೆ ವರ್ಗಾವಣೆ ಮಾಡುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆ ಆಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆ ಆಗಲಿದೆ ಎಂದುಬ ಭರವಸೆ ನೀಡಿದರು.

ಅದರಲ್ಲೂ ದಕ್ಷಿಣ ಭಾರತದಲ್ಲಿ ನಮ್ಮ ಕರ್ನಾಟಕದಲ್ಲೇ ಶೇಕಡ 80ರಷ್ಟು ಬಡತನ ಇದೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಎಪಿಎಲ್ ಕಾರ್ಡ್‌ಗೆ ವರ್ಗಾವಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+