ರಾಜ್ಯದಲ್ಲಿನ ಈ ದಿನಗೂಲಿ ನೌಕರರಿಗೆ ಹೈಕೋರ್ಟ್ ಗುಡ್ ನ್ಯೂಸ್
ಬೆಂಗಳೂರು, ಏಪ್ರಿಲ್, 19: ರಾಜ್ಯದಲ್ಲಿ ದಿನಗೂಲಿ ನೌಕರರಾಗಿ ತುಂಬಾ ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವವರು ಇದ್ದಾರೆ. ಇವರು ಯಾವಾಗ ನಮ್ಮ ಹುದ್ದೆಗಳು ಖಾಯಂ ಮಾಡುತ್ತಾರೆ ಎಂದು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಈ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಹಾಗಾದ್ರೆ ಆದೇಶದಲ್ಲಿ ಏನಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ದಿನಗೂಲಿ ಆಧಾರದಲ್ಲಿ ಸತತ 30 ವರ್ಷ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಹೈಕೋರ್ಟ್ ಆದೇಶಿಸಿದೆ. ಜೊತೆಗೆ ಮಂಜೂರಾದ ಹುದ್ದೆಯಲ್ಲಿ 10 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿಯು ಖಾಯಂಗೆ ಅರ್ಹ ಎಂದು ತೀರ್ಪು ನೀಡಿದೆ.

10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಖಾಯಂಗೆ ಅರ್ಹ ಎಂದು ಹೈಕೋರ್ಟ್ ಮಹತ್ವದ ತೀರ್ಪುನೀಡಿದೆ.ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ ಹುದ್ದಾರ್ ಅವರನ್ನೊಳಗೊಂಡ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿಸೆ.
ತಮ್ಮ ಸೇವೆ ಕಾಯಂಗೊಳಿಸಲು ನಿರಾಕರಿಸಿ ಆರಣ್ಯ ಇಲಾಖೆ ನೀಡಿದ್ದ ಹಿಂಬರಹ ಪುರಸ್ಕರಿಸಿದ ಆಡಳಿತಾತ್ಮಕ ನ್ಯಾಯಾಧೀಕರಣದ(ಕೆಎಟಿ) ಆದೇಶರದ್ದುಪಡಿಸುವಂತೆ ಕೋರಿ ಆನೇಕಲ್ ವಲಯದಲ್ಲಿ ಅರಣ್ಯ ವೀಕ್ಷಕ ಪಿ.ಜುಂಜಪ್ಪ (53) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ.
ಜುಂಜಪ್ಪ ದಿನಗೂಲಿ ಆಧಾರದ ಮೇಲೆ 30 ವರ್ಷ ನಿರಂತರವಾಗಿ ಆರಣ್ಯ ವೀಕ್ಷಕ ಹಾಗೂ ಚಾಲಕನಾಗಿ ಕೆಲಸ ಮಾಡಿದ್ದರು. ಆದರೆ, ಅವರ ಸೇವೆ ಖಾಯಂಗೊಳಿಸಲು ನಿರಾಕರಿಸಿ 2016ರ ಆಗಸ್ಟ್ 29ರಂದು ಅರಣ್ಯ ಇಲಾಖೆ ಹಿಂಬರಹ ನೀಡಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೆಎಟಿ ವಜಾಗೊಳಿಸಿ 2019ರ ಜುಲೈ 31ರಂದು ಆದೇಶಿಸಿತ್ತು. ಇದರಿಂದ ಜುಂಜಪ್ಪ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರು ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಹಾಗಾದ್ರೆ ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಅವರು, ಏಪ್ರಿಲ್ 15, 2025ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳು, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕಿನ ಅಧಿಕಾರಿಗಳ ಜೊತೆ ವೇತನ ಪ್ಯಾಕೇಜ್ ಖಾತೆಗೆ ಸಂಬಂಧಿಸಿದಂತೆ ಈ ಕೆಳಕಂಡ ವಿಷಯಗಳ ಕುರಿತು ಸಭೆ ನಡೆಸಿದರು.
ಆಗಾಗ ಸರ್ಕಾರಿ ನೌಕರ ಕುಂದುಕೊರತೆಗಳನ್ನು ಆಲಿಸಲು ಸಭೆಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇದೀಗ ಸಭೆ ನಡೆಲಾಗಿದ್ದು, ಸರ್ಕಾರಿ ನೌಕರರಿಗೆ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗಿದೆ.
* ಕಡಿಮೆ ಬಡ್ಡಿ ದರದಲ್ಲಿ ಗೃಹ ನಿರ್ಮಾಣ ಸಾಲ
* ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ
* ಕಡಿಮೆ ಬಡ್ಡಿ ದರದಲ್ಲಿ ವಾಹನ ಸಾಲ
* ಕಡಿಮೆ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ
* ಓವರ್ ಡ್ರಾಫ್ಟ್ ಸೌಲಭ್ಯ ಆರೋಗ್ಯ ವಿಮೆ
ಮೇಲ್ಕಂಡ ಸಾಲ ಸೌಲಭ್ಯಗಳನ್ನು ಕಡಿಮೆ ಬಡ್ಡಿ ದರದಲ್ಲಿ ನೀಡಲು ಮತ್ತು 1.00 ಕೋಟಿ ಅಪಘಾತ ವಿಮಾ ಯೋಜನೆ ಹಾಗೂ ವೈದ್ಯಕೀಯ ವಿಮೆ, ವಾರ್ಷಿಕ ಆರೋಗ್ಯ ತಪಾಸಣೆ ಹಾಗೂ ಇನ್ನಿತರೆ ಉಚಿತ ಸೇವಾ ಸೌಲಭ್ಯಗಳ ಬಗ್ಗೆ ಸುಧೀರ್ಘವಾಗಿ ಚರ್ಚಿಸಲಾಯಿತು.












Click it and Unblock the Notifications