BPL Card: ರಾಜ್ಯದಲ್ಲಿನ ಅರ್ಹ ಬಿಪಿಎಲ್‌ ಕಾರ್ಡುದಾರರಿಗೆ ಸರ್ಕಾರ ಭರ್ಜರಿ ಗುಡ್‌ ನ್ಯೂಸ್‌

BPL Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಡಿ ಕೂಡ ಒಮದಾಗಿದೆ. ಇದರಲ್ಲೀ ಎಪಿಎಲ್‌, ಬಿಪಿಎಲ್ ಹೀಗೆ ಹಲವು ವಿಧಗಳಿದ್ದು, ಈ ಪೈಕಿ ಬಿಪಿಎಲ್‌ ಕಾರ್ಡುದಾರರಿಗೆ ಸರ್ಕಾರದ ವಿಶೇಷ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಹಾಗೆಯೇ ಇದೀಗ ಈ ಬಗ್ಗೆ ಮತ್ತೊಂದು ಗುಡ್‌ ನ್ಯೂಸ್‌ವೊಂದನ್ನು ಸರ್ಕಾರ ನೀಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಈಗಾಗಲೇ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಇದೀಗ ಅನರ್ಹರ ಬಳಿಯಿರುವ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆ ಹಚ್ಚಿ ಅವುಗಳನ್ನು ರದ್ದು ಪಡಿಸುತ್ತಲೇ ಇದೆ. ಅಲ್ಲದೆ, ಅಂತಹವರನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸವನ್ನು ಕೂಡ ಮಾಡುತ್ತಿದೆ. ಕಳೆದ ಕೆಲವು ತಿಂಗಳುಗಳ ಹಿಂದೆಯಷ್ಟೇ ಸರ್ಕಾರ ಬಡವರ ಬಳಿಯಿರುವ ಬಿಪಿಎಲ್‌ ಕಾರ್ಡ್‌ಗಳನ್ನು ಕೂಡ ರದ್ದು ಮಾಡಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು.

Good News for Eligible BPL Card holders from state Government

ಬಳಿಕ ಎಚ್ಚೆತ್ತ ಸರ್ಕಾರ ಅರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮತ್ತೆ ಹಿಂತಿರುಗಿಸಲಾಗುತ್ತದೆ. ಇದುವರೆಗೂ ಅವರಿಗೆ ತಪ್ಪಿದ ಪಡಿತರವನ್ನು ಕೂಡ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿತ್ತು. ಇದೀಗ ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್‌ವೊಂದನ್ನೂ ನೀಡಿದೆ. ಇದೀಗ ಹೊಸದಾಗಿ ತಂದಿರುವ ನಿಯಮಗಳಿಂದ ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಅಂತಲೂ ತಿಳಿಸಿದೆ.

ರಾಜ್ಯ ಸರ್ಕಾರವು ಪಡಿತರ ವ್ಯವಸ್ಥೆಯನ್ನು ಪ್ರಾಮಾಣಿಕವಾಗಿ ಹಾಗೂ ಸಮರ್ಪಕವಾಗಿ ನಡೆಸಲು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅನರ್ಹರು ಪಡಿತರ ಪಡೆಯುವುದನ್ನು ತಡೆದು, ನಿಜವಾದ ಫಲಾನುಭವಿಗಳಿಗೆ ಪೂರ್ಣ ಸೌಲಭ್ಯ ಕಲ್ಪಿಸಲು ಕ್ರಮ ತೆಗೆದುಕೊಂಡಿದೆ. ಸರ್ಕಾರದ ಪ್ರಕಾರ, ಬೆಳಗಾವಿ ಕಂದಾಯ ವಿಭಾಗದಲ್ಲಿ 13,00,000 ಫಲಾನುಭವಿಗಳು ಇ-ಕೆವೈಸಿ ಮಾಡದೇ ಪಡಿತರ ಪಡೆಯುತ್ತಿದ್ದಾರೆ. ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಇಂತಹ ಫಲಾನುಭವಿಗಳ ವಿವರಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಗುರುತಿಸಿ ತಕ್ಷಣವೇ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದೀಗ ಎಲ್ಲಾ ಪಡಿತರ ಅಂಗಡಿಗಳಲ್ಲಿ ಥರ್ಮಲ್ ಪ್ರಿಂಟರ್ ಅಳವಡಿಕೆ ಕಡ್ಡಾಯ ಆಗಿದೆ. ಇದರಿಂದ ವಹಿವಾಟು ಸುಲಭವಾಗಿ ಆದಂತಾಗಲಿದೆ. ಅಷ್ಟೇ ಅಲ್ಲದೆ, ಪಡಿತರವನ್ನು ಸಾಗಣೆ ಮಾಡುವ ಲಾರಿಗಳಿಗೆ ಜಿಪಿಎಸ್‌ ಕಡ್ಡಾಯ ಮಾಡಲಾಗಿದ್ದು, ಇದರಿಂದ ಅಕ್ರಮ ಸಾಗಾಟ ತಡೆಯಲು ಸಾಧ್ಯವಾದಂತಾಗಲಿದೆ. ಬೆಳಗಾವಿ ವಿಭಾಗದಲ್ಲಿ 2759.02 ಕೋಟಿ ರೂಪಾಯಿ ಮೊತ್ತವನ್ನು ನೇರ ಹಣ ವರ್ಗಾವಣೆ ಮೂಲಕ ಫಲಾನುಭವಿಗಳಿಗೆ ನೀಡಲಾಗಿದೆ. ಈ ಕ್ರಮದಿಂದ ಪಡಿತರ ವಿತರಣೆಯಲ್ಲಿ ಮಧ್ಯವರ್ತಿಗಳಿಗೆ ಬ್ರೇಕ್‌ ಹಾಕಲಾಗುತ್ತದೆ. ಈ ಮೂಲಕ ಫಲಾನುಭವಿಗಳು ನೇರವಾಗಿ ಹಣ ಪಡೆಯಲು ಸಹಕಾರಿಯಾಗಲಿದೆ.

ಅಗತ್ಯ ಸೇವೆಗಳ ಮೇಲೂ ಸರ್ಕಾರ ಕಣ್ಣಿಟ್ಟಿದೆ. ಪೆಟ್ರೋಲ್ ಪಂಪ್ ಹಾಗೂ ಗ್ಯಾಸ್ ಏಜೆನ್ಸಿಗಳ ಕಾರ್ಯಗಳನ್ನು ಪರಿಶೀಲನೆ ನಡಸಲಾಗುತ್ತಿದೆ. ಇದರಿಂದ 225 ಪೆಟ್ರೋಲ್ ಪಂಪ್‌ಗಳ ಮೇಲೆ ಮೊಕದ್ದಮೆ ಹಾಕಿ 5.55 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗೆ ಬಡ ಕುಟುಂಬಗಳಿಗೆ ತೊಂದರೆಯಾಗದಂತೆ ಹಾಗೂ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಿ ಅವರಿಗೆ ಸರಿಯಾಗಿ ಪಡಿತರ ನೀಡಲು ಈ ಹೊಸ ನಿಯಮ ತುಂಬಾ ಸಹಕಾರಿಯಾಗಲಿದೆ.

ಈ ಮೂಲಕ ರಾಜ್ಯದ ಸರ್ಕಾರವು ಅರ್ಹರಿಗೆ ಸರಿಯಾದ ರೀತಿಯಲ್ಲಿ ಪಡಿತರ ಸಿಗುವಂತೆ ಮಾಡಲು ಮುಂದಾಗಿದೆ. ಅನರ್ಹರ ಬಳಿಯಿರುವ ಪಡಿತರ ಚೀಟಿ ರದ್ದಾದರೂ ಅರ್ಹರ ಬಳಿಯಿರುವ ಬಿಪಿಎಲ್‌ ಪಡಿತರ ಚೀಟಿ ಯಾವುದೇ ಕಾರಣಕ್ಕೂ ರದ್ದಾ ಮಾಡಲ್ಲ. ಅಲ್ಲದೆ, ಬಡವರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಭರವಸೆ ಕೊಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+