ರಾಜ್ಯದ ರೈತರಿಗೆ ಸಿಹಿಸುದ್ದಿ-ಏನದು? ಇಲ್ಲಿದೆ ಮಾಹಿತಿ
ಬೆಂಗಳೂರು, ಜೂನ್, 14: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದು, ಇದರಿಂದ ರೈತರು ಸಂತಸಗೊಂಡಿದ್ದಾರೆ. ಅಲ್ಲದೆ, ಮತ್ತೊಂದೆಡೆ ರೈತರಿಗೆ ಮತ್ತೊಂದು ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಹಾಗಾದರೆ ಶುಭಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.
ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ಹೊಸ ಕೃಷಿ ಯೋಜನೆಗಳನ್ನು ಜೂನ್ 20ರೊಳಗೆ ಜಾರಿ ಮಾಡಲು ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಕೃಷಿ ಇಲಾಖೆ ಹೊಸ ಯೋಜನೆಗಳ ಜಾರಿಗೆ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ಮಾಡಿದ್ದಾರೆ.

ಈಗಾಗಲೇ ರಾಜ್ಯ ಬಜೆಟ್‌ನಲ್ಲಿ ಘೋಷಣೆ ಆದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರಿ ಆದೇಶ ಹೊರಡಿಸಿದ್ದು, ಬಾಕಿಯಿರುವ ಘೋಷಣೆಗಳಿಗೆ ವಾರದೊಳಗೆ ಆದೇಶ ಹೊರಡಿಸಿ ಕಾರ್ಯಕ್ರಮ ಜಾರಿಗೊಳಿಸುವಂತೆ ಮಾಹಿತಿ ನೀಡಿದ್ದಾರೆ.
ಇನ್ನು ಕೃಷಿ ಕ್ಷೇತ್ರವನ್ನು ಸುಸ್ಥಿರ ಮತ್ತು ಲಾಭದಾಯಕವಾಗಿ ಮಾಡಲು ರೈತ ಸಮೃದ್ಧಿ ಯೋಜನೆ ರೂಪಿಸಿದ್ದು, ಸಮರ್ಪಕವಾಗಿ ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಕರ್ನಾಟಕ ರೈತ ಸಮೃದ್ಧಿ ಯೋಜನೆ, ಕೃಷಿ ಅಭಿವೃದ್ಧಿ ಪ್ರಾಧಿಕಾರ, ಕೃಷಿ ಭಾಗ್ಯ ಯೋಜನೆ, ಸಮುದಾಯದ ಬೀಜ ಬ್ಯಾಂಕ್ ಸ್ಥಾಪನೆ, ನಮ್ಮ ಮಿಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ರೈತರ ಮುಖದಲ್ಲಿ ಮಂದಹಾಸ:ಇದೀಗ ರಾಜ್ಯಾದ್ಯಂತ ಮುಂಗಾರು ಪಡೆದಿದ್ದು, ಈ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲೇ ಇದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಹಾಗೆಯೇ ಶಿವಮೊಗ್ಗ ಜಿಲ್ಲೆಯ ಗಾಜನೂರಿನಲ್ಲಿರುವ ತುಂಬಾ ಜಲಾಶಯ ಭರ್ತಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ನೀರಿನ ಸಂಗ್ರಹದ ಅಂಕಿಅಂಶಗಳನ್ನು ಇಲ್ಲಿ ತಿಳಿಯಿರಿ.
ಮುಂಗಾರು ಮಳೆ ದಿನದಿಂದ ದಿನಕ್ಕೆ ಚುರುಕು ಪಡೆಯುತ್ತಿರುವ ಹಿನ್ನೆಲೆ ರಾಜ್ಯದ ಬಹುತೇಕ ಕಡೆ ಬತ್ತಹೋಗುವ ಹಂತವನ್ನು ತಲುಪಿದ್ದ ಜಲಮೂಲಗಳಿಗೆ ಜೀವ ಬಂದಂತಾಗಿದೆ. ಅಲ್ಲದೆ, ಪ್ರಮುಖ ಜಲಾಶಯಗಳಿಗೂ ನೀರು ಹರಿದುಬರುತ್ತಿದ್ದು, ಅನ್ನದಾತನರ ಮುಖದಲ್ಲಿ ಮತ್ತಷ್ಟು ಮಂದಹಾಶ ಹೆಚ್ಚುವಂತೆ ಮಾಡಿದೆ.
ಇನ್ನು ಶಿವಮೊಗ್ಗ ಜಿಲ್ಲೆಯ ಗಾಜನೂರಿನ ತುಂಗಾ ಡ್ಯಾಂ ಭರ್ತಿಯಾಗಿದೆ. ಹಿನ್ನೀರು ಭಾಗದಲ್ಲಿ ಮಳೆರಾಯ ಅಬ್ಬರಿಸಿದ ಪರಿಣಾಮ, ಒಳಹರಿವಿನ ಪ್ರಮಾಣ ಏರಿಕೆ ಆಗಿದೆ. ಆದ್ದರಿಂದ ಯಾವುದೇ ಸಂದರ್ಭದಲ್ಲಾದರೂ ಕ್ರಸ್ಟ್ ಗೇಟ್‌ಗಳ ಮೂಲಕ ನೀರನ್ನು ಹೊರ ಹರಿಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ತುಂಗಾ ಜಲಾಶಯದಲ್ಲಿ ಗರಿಷ್ಠ ನೀರಿನ ಸಂಗ್ರಹ ಮಟ್ಟ 588.24 ಮೀಟರ್ ಆಗಿದೆ. ಈಗಾಗಲೇ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಿದ್ದು, ಹಿನ್ನೀರು ಭಾಗದಲ್ಲಿ ಸ್ವಲ್ಪ ಮಳೆಯಾದರೂ ಜಲಾಶಯ ಭರ್ತಿ ಆಗಲಿದೆ ಎಂದು ತಿಳಿದುಬಂದಿದೆ.
ಇನ್ನು ಮಲೆನಾಡಿನ ಹೆಬ್ಬಾಗಿಲು ಎನಿಸಿಕೊಂಡಿರುವ ಶಿವಮೊಗ್ಗಕ್ಕೆ ಕುಡಿಯುವ ನೀರಿಗೆ ತುಂಗಾ ಜಲಾಶಯವೇ ಆಧರಾವಾಗಿದೆ. ಅಲ್ಲದೆ, ಅಚ್ಚುಕಟ್ಟು ಭಾಗದ ಜಮೀನುಗಳಿಗೆ ಕೃಷಿ ಚಟುವಟಿಕೆಗೂ ಇದೇ ಜಲಾಶಯದಿಂದ ನೀರು ಬಿಡಲಾಗುತ್ತದೆ. ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಹರಿಸಲಾಗುತ್ತದೆ.












Click it and Unblock the Notifications