Good news: ರಾಜ್ಯ ಸರ್ಕಾರದಿಂದ ರೈತರಿಗೆ ಶುಭ ಸುದ್ದಿ, ಏನದು?-ಇಲ್ಲಿದೆ ಮಾಹಿತಿ

ಬೆಂಗಳೂರು, ಫೆಬ್ರವರಿ, 02: ರಾಜ್ಯದ ಸರ್ಕಾರ ರೈತರಿಗೆ ಆಗಾಗ ಶುಭಸುದ್ದಿಯನ್ನು ನೀಡುತ್ತಾ ಬಂದಿದ್ದು, ಇದೀಗ ಮತ್ತೊಂದು ಗುಡ್‌ ನ್ಯೂಸ್‌ ನೀಡಿದೆ. ರಾಜ್ಯದ ಸಹಕಾರ ಸಂಸ್ಥೆ ಮೂಲಕ ಸಾಲ ಪಡೆದು ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಘೋಷಣೆ ಮಾಡಿದ್ದು, ಇದಕ್ಕೆ ಇದೀಗ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ರಾಜ್ಯದ ರೈತರು ಸಹಕಾರ ಸಂಘಗಳಲ್ಲಿ ಮಾಡಿರುವಂತಹ ಸಾಲದ ಅಸಲು ಪಾವತಿ ಮಾಡಿದರೆ, ಅದರ ಬಡ್ಡಿ ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಅದರಂತೆಯೇ ಇದೀಗ ಈ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಡತ ಮಂಡಿಸಿ ಅನುಮೋದನೆಯನ್ನು ಪಡೆಯಲಾಗಿದೆ.

Good news for farmers from state government, know details

ಸಹಕಾರಿ ಸಮೃದ್ಧ ಸೌಧ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಸಹಕಾರ ಸಂಘಗಳ ಮೂಲಕ ಸಾಲ ಸೌಲಭ್ಯ, ಸಾಲ ಪಡೆದ ರೈತರ ಬಡ್ಡಿಐರ್ಣಣೂ ಮನ್ನಾ ಮಾಡಲಾಗುತ್ತದೆ. ಮಧ್ಯಮಾವಧಿ, ಧೀರ್ಘಾವದಿ ಸುಸ್ತಿ ಬಡ್ಡಿ ಮನ್ನಾ ಮಾಡಲಾಗುತ್ತದೆ. ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಅನುಮೋದನೆ ನೀಡಲಾಗುತ್ತದೆ. 440 ಕೋಟಿ 20 ಲಕ್ಷ ಸುಸ್ತಿ ಬಡ್ಡಿ ಮನ್ನಾ ಮಾಡಲಾಗುತ್ತದೆ. ಸಹಕಾರಿ ಸಂಘಗಳಿಂದ ಪಡೆದಿದ್ದ ಸಾಲದ ಮೇಲಿನ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ ಮಾಡಲಾಗುತ್ತಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+