Good News: ಬೆಳೆಹಾನಿ ಪರಿಹಾರ ಕುರಿತು ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್
Good News: ಸರ್ಕಾರವು ರೈತರಿಗೆ ಶುಭ ಸುದ್ದಿಯನ್ನು ನೀಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ಬೆಳೆಹಾನಿ ಪರಿಹಾರ ಸಂಬಂಧಿಸಿದಂತೆ ಗುಡ್ ನ್ಯೂಸ್‌ವೊಂದನ್ನು ನೀಡಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ಪರಿಹಾರ ಪಾವತಿಸಲು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ನಿರ್ದೇಶಕರು, ಕೆಎಸ್‌ಎನ್‌ಡಿಸಿ ಅವರಿಗೆ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಮೂಲಕ ನೆರೆಹಾನಿಯಿಂದ ಬೆಳೆಹಾನಿಗೊಳಗಾದ ರೈತರಿಗೆ ಶುಭ ಸುದ್ದಿ ನೀಡಿದೆ.

ಈ ಸಂಬಂಧ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಿಂದ ಸ್ಥಳೀಯವಾಗಿ ಉಂಟಾಗುವ ಬೆಳೆ ಹಾನಿಗೆ ಕೇಂದ್ರ ಸರ್ಕಾರದ ಗೃಹ ಸಚಿವಾಯಲವು ದಿನಾಂಕ: 11.07.2023 ರಂದು ಹೊರಡಿಸಿರುವ Revised Items of Expenditure and Norms of assistance from the SDRFರ ಮಾರ್ಗಸೂಚಿಗಳನ್ವಯ ನಿಯಮಾನುಸಾರ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಪಾವತಿಸಬಹುದಾದ ಪರಿಹಾರ ಮೊತ್ತವನ್ನು ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಪರಿಹಾರ ನೀಡಲು ಆದೇಶಿಸಲಾಗಿದೆ.
ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಪರಿಹಾರ ತಂತ್ರಾಂಶದ ಮುಖಾಂತರ ಮಾತ್ರ ನಿಯಮಾನುಸಾರ ಅರ್ಹ ರೈತ ಫಲಾನುಭವಿಗಳಿಗೆ ಅರ್ಹತೆಗನುಗುಣವಾಗಿ ಪಾವತಿಸಲು ಆದೇಶದಲ್ಲಿ ತಿಳಿಸಲಾಗಿದೆ. ಮುಂಬರುವ ದಿನಗಳಲ್ಲಿ ನೈಸರ್ಗಿಕ ವಿಕೋಪಗಳಿಂದಾಗಿ ಉಂಟಾಗುವ ಮೂಲಭೂತ ಸೌಕರ್ಯಗಳ ಹಾನಿ ಹಾಗೂ ಬೆಳೆ ಹಾನಿಗಳಿಗೆ ನಿಯಮಾನುಸಾರ ಪರಿಹಾರ ಪಾವತಿಸಲು ಅನುದಾನ ಬಿಡುಗಡೆಗೊಳಿಸುವಂತೆ ತಿಳಿಸಲಾಗಿದೆ.
ಹಾಸನ, ಬೀದರ್, ಶಿವಮೊಗ್ಗ, ಧಾರವಾಡ, ಮೈಸೂರು ಹಾಗೂ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಕೋರಿರುತ್ತಾರೆ. ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2ನೇ ಕಂತಿನ ಅನುದಾನ 366 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ. ಆರ್ಥಿಕ ಇಲಾಖೆಯು 2ನೇ ಕಂತಿನ ರಾಜ್ಯದ ಪಾಲು 122 ರೂಪಾಯಿ ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ ಎಂದು ತಿಳಿಸಲಾಗಿದೆ.
ವಿವತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ವಿಪತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಇವರಿಗೆ ಹಾಗೂ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ತಕ್ಷಣ ನಿಭಾಯಿಸಲು ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡುವುದು ಅವಶ್ಯಕವಾಗಿರುತ್ತದೆ.
ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ದೇಶಕರು, ಕೆಎಸ್‌ಎನ್‌ಡಿಎಂಸಿ ರವರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯ ಲೆಕ್ಕ ಶೀರ್ಷಿಕೆ 2245-80-102-0-01-051 ರಲ್ಲಿ 25.00 ಕೋಟಿಗಳ ಅನುದಾನ ಬಿಡುಗಡೆಗೊಳಿಸಲು ಹಾಗೂ ಮುಂದಿನ ದಿನಗಳಲ್ಲಿ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ನಿಯಮಾನುಸಾರ ತಕ್ಷಣ ಸ್ಪಂದಿಸಲು ಹಾಗೂ ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ಪರಿಹಾರವನ್ನು ಪಾವತಿಸಲು ಆದೇಶಸಿದೆ.
ಅಲ್ಲದೆ ತುರ್ತು ಕ್ರಮಗಳನ್ನು ಕೈಗೊಳ್ಳಲು ಅನುಕೂಲ ಆಗುವಂತೆ ರಾಜ್ಯ ವಿಪತ್ತು ಪರಿಹಾರ ನಿಧಿಯ ಲೆಕ್ಕ ಶೀರ್ಷಿಕೆ 2245-80-102-0-01- 059ರಲ್ಲಿ ಹಾಗೂ ಲೆಕ್ಕ ಶೀರ್ಷಿಕೆ 2245-80-102-0-01-140ರಲ್ಲಿ ಲಭ್ಯವಿರುವ ಅನುದಾನದಿಂದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆ ಮಾಡಲು ಸರ್ಕಾರ ತೀರ್ಮಾನಿಸಿ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ಭಾರತ ಸರ್ಕಾರದ ಗೃಹ ಸಚಿವಾಲಯವು ಹೊರಡಿಸಿರುವ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಮಾರ್ಗಸೂಚಿಯನ್ವಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು 25 ಕೋಟಿಗಳನ್ನು ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ರವರಿಗೆ ಲೆಕ್ಕ ಶೀರ್ಷಿಕೆ 2245-80-102-0-01-051 ರಲ್ಲಿ ಹಾಗೂ ಮುಂದಿನ ದಿನಗಳಲ್ಲಿ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ನಿಯಮಾನುಸಾರ ತಕ್ಷಣ ಸ್ಪಂದಿಸಲು ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ಪರಿಹಾರವನ್ನು ಪಾವತಿಸಲು ಹಾಗೂ ತುರ್ತು ಕ್ರಮಗಳನ್ನು ಕೈಗೊಳ್ಳಲು ಅನುವಾಗುವಂತೆ ಲೆಕ್ಕ ಶೀರ್ಷಿಕೆ 2245-80-102-0-01-059ರಲ್ಲಿ ಹಾಗೂ ಲೆಕ್ಕ ಶೀರ್ಷಿಕೆ 2245-80-102-0-01-140ರಲ್ಲಿ ಲಭ್ಯವಿರುವ ಅನುದಾನದಿಂದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕೆಳಗಿನ ಷರತ್ತುಗಳ ಪಾಲನೆಗೊಳಪಟ್ಟು ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ.












Click it and Unblock the Notifications