Get Updates
Get notified of breaking news, exclusive insights, and must-see stories!

7th Pay Commission: ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್; 7ನೇ ವೇತನ ಆಯೋಗ ಜಾರಿ ಯಾವಾಗ?

ಬೆಂಗಳೂರು, ಮೇ 19: ರಾಜ್ಯದಲ್ಲಿ ಸರ್ಕಾರಿ ನೌಕರರು ತಮ್ಮ ಬೇಡಿಕೆಗಾಗಿ ಸರ್ಕಾರದ ಮುಂದೆ ಹಲವು ಹೋರಾಟವನ್ನ ನಡೆಸಿದ್ದಾರೆ. ಸರ್ಕಾರಿ ನೌಕಕರು ಲೋಕಸಭಾ ಚುನಾವಣೆಗೂ ಮೊದಲೇ 7 ನೇ ವೇತನ ಆಯೋಗದ ಜಾರಿ ಕುರಿತು ಸರ್ಕಾರಕ್ಕೆ ಅನೇಕ ಬಾರಿ ಮನವಿ ಮಾಡಿದ್ದು, ಇದೀಗ ಸರ್ಕಾರಿ ನೌಕರರಿಗೆ ಲೋಕಸಭೆ ಚುನಾವಣೆ ಬಳಿಕ ಶುಭ ಸುದ್ದಿ ಸಿಗಲಿದೆ.

ಹೌದು, ಲೋಕಸಭಾ ಚುನಾವಣೆಯ ನೀತಿ ಸಂಹಿತೆಗೆ ತೆರೆ ಬೀಳುತ್ತಿದ್ದಂತೆ 7 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ, ಭತ್ಯೆ ಹಾಗೂ ಸೌಲಭ್ಯಗಳ ಪರಿಷ್ಕರಣೆಯಾಗುವುದು ಖಚಿತ ಎಂಬ ಮಾಹಿತಿ ತಿಳಿದು ಬಂದಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆ ಈಗಾಗಲೇ ಎರಡು ಹಂತದಲ್ಲಿ ಮುಗಿದಿದ್ದು, ಜೂನ್‌ 4 ರಂದು ಫಲಿತಾಂಶ ಬರಲಿದೆ. ಇನ್ನೂ ಜೂನ್‌ 2 ರಂದು ಚುಣಾವಣಾ ನೀತಿ ಸಂಹಿತೆ ಮುಕ್ತಾಯಗೊಳಲಿದ್ದು, 7 ನೇ ವೇತನ ಆಯೋಗದ ಶಿಫಾರಸ್ಸಿನಂತೆಯೇ 8 % ರಿಂದ 8.5 % ವೇತನ ಹೆಚ್ಚಳವನ್ನ ನಿರೀಕ್ಷಿಸಲಿಯಲಾಗಿದೆ.

Good News For Government Employees After Completion Of Code Of Conduct

ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿಯನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದ್ದು, ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇದೀಗ ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಳಲು 15 ದಿನ ಕಾಲಾವಕಾಶವಿದ್ದು, ನೀತಿ ಸಂಹಿತೆ ಮುಕ್ತಾಯದ ನಂತರ 7 ನೇ ವೇತನ ಆಯೋಗದ ಶಿಫಾರಸ್ಸಿಗೆ ಅಧಿಕೃತ ಮುದ್ರೆ ಒತ್ತುವ ಸಾಧ್ಯತೆ ಇದೆ. ನೀತಿ ಸಂಹಿತೆ ಮುಕ್ತಾಯದ ಬಳಿಕ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಈ ಬಗ್ಗೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ‌ ಅವರು ಮಾತನಾಡಿದ್ದು, 7 ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಹಣಕಾಸು ಇಲಾಖೆ ತಯಾರಿ ನಡೆಸಿದೆ. ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಯಾಗಲಿದ್ದು, 7 ನೇ ವೇತನ ಆಯೋಗದ ಎಲ್ಲಾ ಶಿಫಾರಸ್ಸುಗಳನ್ನ ಸರ್ಕಾರ ಅನುಷ್ಠಾನ ಮಾಡುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

7ನೇ ವೇತನ ಆಯೋಗದ ಪ್ರಮುಖ ಶಿಫಾರಸುಗಳು ಇಲ್ಲಿವೆ

1. 7ನೇ ರಾಜ್ಯ ವೇತನ ಆಯೋಗವು ಶೇ.31 ತುಟ್ಟಿಭತ್ಯೆಯನ್ನು ವಿಲೀನಗೊಳಿಸುವ ಮೂಲಕ ಮತ್ತು ಶೇ.27.50 ರಷ್ಟು ಫಿಟ್‌ಮೆಂಟ್‌ ಪ್ರಯೋಜನವನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನವನ್ನು ತಿಂಗಳಿಗೆ ಅಸ್ತಿತ್ವದಲ್ಲಿರುವ ರೂ.17,000 ರಿ೦ದ ರೂ.27,000 ಕ್ಕೆ ಪರಿಷ್ಕರಿಸಲು ಶಿಫಾರಸ್ಸು ಮಾಡುತ್ತದೆ.

2. ವೇತನ ರಚನೆಯಲ್ಲಿ ಕನಿಷ್ಠ ಮತ್ತು ಗರಿಷ್ಠ ವೇತನದ ನಡುವೆ ಅಸ್ತಿತ್ವದಲ್ಲಿರುವ 1:8.86 ರ ಅನುಪಾತವನ್ನು ಹೆಚ್ಚು-ಕಡಿಮೆ ಹಾಗೇ ಉಳಿಸಿಕೊಳ್ಳುವುದು ಮತ್ತು ಗರಿಷ್ಠ ವೇತನವನ್ನು ರೂ.2,41,200ಕ್ಕೆ ನಿಗದಿಪಡಿಸಲು ಆಯೋಗವು ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 5.37).

Good News For Government Employees After Completion Of Code Of Conduct

3.ಹೊಸ ವೇತನ ಶ್ರೇಣಿಗಳನ್ನು ದಿನಾ೦ಕ: 01.07.2022 ರಿ೦ದ ಕಾಲ್ಪನಿಕವಾಗಿ ಅನ್ವಯಿಸುತ್ತದೆ. ಅನುಷ್ಠಾನಗೊಳಿಸುವ ನೈಜ್ಯ ದಿನಾ೦ಕವನ್ನು ರಾಜ್ಯ ಸರ್ಕಾರವು ನಿರ್ಧರಿಸುವುದೆ೦ದು ಆಯೋಗವು ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 5.57).

4.ನೌಕರರ ಕುಟುಂಬದ ಕನಿಷ್ಠ ಬಳಕೆ ವೆಚ್ಚದ ಲೆಕ್ಕಾಚಾರಕ್ಕಾಗಿ ಬಳಸಲಾಗುವ ಅಕ್ರೋಯ್ದ್ನಾ ಸೂತ್ರವನ್ನು ಚಾಲ್ತಿಯಲ್ಲಿರುವ '1' ಮತ್ತು '0.8, ರ ಪ್ರಮಾಣದ ಬದಲಿಗೆ ಪ್ರಾತಿನಿಧಿಕ ಕುಟು೦ಬದ ವಯಸ್ಕ ಪುರುಷ ಮತ್ತು ಮಹಿಳಾ ಸದಸ್ಯರಿಗೆ '1' ಸಮಾನ ಪ್ರಮಾಣವನ್ನು ನೀಡುವ ಮೂಲಕ, ಎರಡೂ ಲಿ೦ಗಗಳನ್ನು ಸಮಾನವಾಗಿ ಪರಿಗಣಿಸಿ, ಸ್ವಲ್ಪ ಮಟ್ಟಿಗೆ ಮಾರ್ಪಡಿಸಲಾಗಿದೆ (ಅಧ್ಯಾಯ 5.33).

5. ಪರಿಷ್ಕೃತ ಪ್ರತ್ಯೇಕ 1761/1602) ವೇತನ ಶ್ರೇಣಿಗಳೊ೦ದಿಗೆ, ಪರಿಷ್ಕತ ಮುಖ್ಯ ಶ್ರೇಣಿಯನ್ನು ರೂಪಿಸಲಾಗಿದೆ. ಚಾಲ್ತಿಯಲ್ಲಿರುವ ರೂ.400 ರಿ೦ದ ರೂ.3,100 ರ ಬದಲಿಗೆ ವಾರ್ಷಿಕ ಬಡ್ತಿ ದರಗಳು ಮುಖ್ಯ ಶ್ರೇಣಿಯಾದ್ಯ೦ತ ರೂ.650 ರಿ೦ದ ರೂ.5,000 ರದವರೆಗೆ ಆಗಿರುತ್ತದೆ (ಅಧ್ಯಾಯ 5.43).

6.ಪ್ರಸ್ತುತ ಜಾರಿಯಲ್ಲಿರುವಂತೆ, ಒ೦ದು ಕ್ಯಾಲೆ೦ಡರ್‌ ವರ್ಷದಲ್ಲಿ 1ನೇ ಜನವರಿ ಅಥವಾ 1ನೇ ಜುಲೈನಲ್ಲಿ ವಾರ್ಷಿಕ ಬಡ್ತಿ ದರಗಳನ್ನು ಮ೦ಜುರೂ ಮಾಡುವುದನ್ನು ಮುಂದುವರೆಸಲು ಆಯೋಗವು ಶಿಫಾರಸ್ಸು ಮಾಡಿರುತ್ತದೆ (ಅಧ್ಯಾಯ 5.44).

7.ಕೇಂದ್ರದ ತುಟ್ಟಿಭತ್ಯೆ ಸೂತ್ರ ಮತ್ತು ಮಾದರಿಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರಿಸಲಾಗುತ್ತದೆ. ದಿನಾ೦ಕ: 01.07.2022 ರ೦ತೆ. 361704 ಸೂಚ್ಯಂಕ ಮಟ್ಟದಲ್ಲಿ ಸಂಪೂರ್ಣವಾಗಿ ತಟಸ್ಮಗೊ೦ಡಿರುವ ತುಟ್ಟಿಭತ್ಯೆಯೊಂದಿಗೆ, ದಿನಾ೦ಕ: 01.07.2022 ರಿ೦ದ, ಭಾರತ ಸರ್ಕಾರವು ಮ೦ಜೂರು ಮಾಡಿದ ಪ್ರತಿ ಶೇ.1 ರಷ್ಟು ತುಟ್ಟಿಭತ್ಯೆಗೆ, ರಾಜ್ಯ ಸರ್ಕಾರಿ ನೌಕರರಿಗೆ ಮ೦ಜೂರು ಮಾಡಬೇಕಾದ ತುಟ್ಟಿಭತ್ಯೆಯು ಪರಿಷ್ಕೃತ ಮೂಲ ವೇತನದ ಶೇ.0.722 ರಷ್ಟು ಆಗಿರುತ್ತದೆ (ಅಧ್ಯಾಯ 5.65).

8.ಅನುದಾನಿತ ಶಿಕ್ಷಣ ಸ೦ಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳ ವೇತನ ಶ್ರೇಣಿಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕರಿಸಿದ ರೀತಿಯಲ್ಲಿಯೇ ಪರಿಷ್ಕರಿಸಬೇಕು (ಅಧ್ಯಾಯ 5.54).

9.ರಾಜ್ಯ ಸರ್ಕಾರವು, ಕೇಂದ್ರದ ವೇತನ ರಚನೆಯನ್ನು ಅಳವಡಿಸಿಕೊಳ್ಳಲು ಒಂದು ವಿಧಾನವನ್ನು ಆಯೋಗವು ರೂಪಿಸಿದೆ. ಆದಾಗ್ಯೂ ಪ್ರಸ್ತುತ, ರಾಜ್ಯ ಸರ್ಕಾರವು ಮುಖ್ಯ ಶ್ರೇಣಿ ಮತ್ತು ವಿಭಜಿತ ಪ್ರತ್ಯೇಕ ವೇತನ ಶ್ರೇಣಿಗಳನ್ನು ಒಳಗೊ೦ಡಿರುವ ಅಸ್ತಿತ್ವದಲ್ಲಿರುವ ವೇತನದ ಮಾದರಿಯನ್ನು ರಾಜ್ಯ ಸರ್ಕಾರವು ಉಳಿಸಿಕೂಳ್ಳುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದೆ. ಭಾರತ ಸರ್ಕಾರವು ತನ್ನ ನೌಕರರಿಗೆ ಮುಂದಿನ ವೇತನವನ್ನು ಪರಿಷ್ಕರಿಸಿದಾಗ ರಾಜ್ಯ ಸರ್ಕಾರವು ಕೇಂದ್ರೀಯ ವೇತನ ರಚನೆಯ ಆಧಾರದ ಮೇಲೆ ಪರ್ಯಾಯ ರಚನೆಯನ್ನು ಅಳವಡಿಸಿಕೊಳ್ಳಲು ಸೂಕ್ತ ಸಮಯವಾಗಿರುತ್ತದೆ (ಅಧ್ಯಾಯ 6.14).

10.ಮಾಸಿಕ ಪಿಂಚಣಿ ಪ್ರಮಾಣವು ಅಂತಿಮವಾಗಿ ಪಡೆದ ಮೂಲ ವೇತನದ ಶೇ.50 ರಷ್ಟರಲ್ಲಿಯೇ ಮುಂದುವರೆಯುತ್ತದೆ ಮತ್ತು ಕುಟುಂಬ ಪಿ೦ಚಣಿಯು ಅಂತಿಮವಾಗಿ ಪಡೆದ ಮೂಲ ವೇತನದ ಶೇ.30 ರಷ್ಟರಲ್ಲಿ ಮುಂದುವರಿಯುತ್ತದೆ. ಅದರಂತೆ, ಕನಿಷ್ಠ ಪಿಂಚಣಿಯನ್ನು ರೂ.13,500 (ಕವಿಷ್ಠ ವೇತನ ರೂ. 27,000 ರ ಶೇ.50 ರಷ್ಟು) ಮತ್ತು ಗರಿಷ್ಠ ಪಿ೦ಚಣಿಯನ್ನು ರೂ.1,20,600 (ಗರಿಷ್ಠ ರೂ.2,41,200 ವೇತನದ ಶೇ.50 ರಷ್ಟು) ಪರಿಷ್ಕರಿಸುವುದು (ಅಧ್ಯಾಯ 8.18).

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+