Government Employees: ಹಳೆ ಪಿಂಚಣಿ ಯೋಜನೆ: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್
ಧಾರವಾಡ, ಏಪ್ರಿಲ್ 10: ರಾಜ್ಯದ ಸರಕಾರಿ ನೌಕರರು ರಾಜ್ಯ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನ ಇಟ್ಟಿದ್ದು, ಸರ್ಕಾರ ಹಂತ ಹಂತವಾಗಿ ನೌಕರರ ಬೇಡಿಕೆಗೆ ಸ್ಪಂದಿಸುತ್ತಿದೆ. ಸರ್ಕಾಋಇ ನೌಕರರ ಬಹುದಿನದ ಬೇಡಿಕೆಯಾದ ಒಪಿಎಸ್(ಹಳೆ ಪಿಂಚಣಿ ಯೋಜನೆ) ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಡೇರಿಸಲು ಸರ್ಕಾರ ಮುಂದಾಗಿದೆ. ಈ ವರ್ಷದೊಳಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರು ಹಲವು ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಜಯ ಸಿಗುವ ನಿರೀಕ್ಷೆ ಇದೆ.
ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಕುರಿತು ಕಾಂಗ್ರೆಸ್ ಶಾಸಕ ಎನ್.ಎಚ್.ಕೋನರೆಡ್ಡಿ ಅವರು ಮಾತನಾಡಿ, ರಾಜ್ಯ ಸರ್ಕಾರಿ ನೌಕರರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರದ ಸಮಾಜಮುಖಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುತ್ತಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಆಗಿರುವ ಎನ್‍ಪಿಎಸ್ ರದ್ದುಪಡಿಸಿ, ಓಪಿಎಸ್ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದ್ದು, ಈ ವರ್ಷದೊಳಗೆ ಎಲ್ಲ ರಾಜ್ಯ ಸರ್ಕಾರಿ ನೌಕರರಿಗೆ ಓಪಿಎಸ್ ಅನ್ವಯಿಸಲು ಪ್ರಯತ್ನಿಸಲಾಗುತ್ತದೆ ಎಂದು ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಧಾರವಾಡ ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾ ಶಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಸಿ ಮಾತನಾಡಿದ ಎನ್.ಎಚ್.ಕೋನರೆಡ್ಡಿ ಅವರು, ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಹಿತಾಸಕ್ತಿ ಕಾಪಾಡಲು ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಎನ್‍ಪಿಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ. ಅಧ್ಯಯನ ಸಮಿತಿಯು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ತಕ್ಷಣ ಸರಕಾರ, ಅಧ್ಯಯನ ಮಾಡಿ ನಿರ್ಧಾರ ಪ್ರಕಟಿಸಲಿದೆ ಎಂದು ಹೇಳಿದರು.
ನೌಕರರು ಕೆಲಸದ ಒತ್ತಡದಲ್ಲಿ ತಮ್ಮ ಕೌಟುಂಬಿಕ ಜೀವನ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಪ್ರತಿದಿನ ವ್ಯಾಯಾಮ, ನಡಿಗೆ, ಯೋಗ ಮಾಡಿ, ಪಿಟನೆಸ್ ಹೊಂದಬೇಕು. ಪ್ರತಿಯೊಬ್ಬರು ದೈಹಿಕ ಮತ್ತು ಮಾನಸಿಕ ಸದೃಡತೆಗೆ ಆರೋಗ್ಯ ಮುಖ್ಯವಾಗಿದೆ. ಉತ್ತಮವಾದ ಓದು, ವ್ಯಾಯಾಮಗಳು ಮನಸ್ಸಿಗೆ ಉಲ್ಲಾಸ, ವಿಶ್ರಾಂತಿ ನೀಡುತ್ತವೆ. ಖುಷಿಯಿಂದ ಕೆಲಸ ಮಾಡಲು ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳ ಅಗತ್ಯವಿದೆ ಎಂದು ಕಾಂಗ್ರೆಸ್ ಶಾಸಕರಾದ ಕೋನರೆಡ್ಡಿ ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ನಿರಂತರ ಯೋಗ, ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸುಸ್ಥಿತಿ ಕಾಪಾಡಲು ಸಹಾಯ ಮಾಡುತ್ತವೆ. ಪ್ರತಿ ದಿನ ಯೋಗ, ವಾಕಿಂಗ್ ಮಾಡಬೇಕು. ಕ್ರೀಡಾಕೂಟದಲ್ಲಿ ಸೋಲು ಗೆಲವು ಎಂಬುದು ಇಲ್ಲ. ಗೆಲವು ಸಿಗುತ್ತದೆ. ಅಥವಾ ಆ ಕ್ರೀಡೆಯಿಂದ ಹೊಸದನ್ನು ಕಲಿಯುತ್ತೇವೆ. ಆದ್ದರಿಂದ ಗೆಲವು ಅಥವಾ ಕಲಿಕೆ ಮಾತ್ರ ಕ್ರೀಡೆಯಿಂದ ಸಿಗುತ್ತದೆ. ಕ್ರೀಡೆಗಳು ಪರಸ್ಪರ ವಯಕ್ತಿಕ ಸಂಬಂಧ, ಸೌರ್ಹಾದತೆ, ಸಹೋದರತ್ವ ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.












Click it and Unblock the Notifications