Good News: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಸರ್ಕಾರ ಗುಡ್ ನ್ಯೂಸ್
Good News For School Teachers: ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಋುತುಚಕ್ರ ರಜೆ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋುತುಚಕ್ರ ರಜೆ ಮಂಜೂರು ಮಾಡಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಕಿಯರಿಗೆ ವೇತನ ಸಹಿತ ಋುತುಚಕ್ರ ರಜೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಉಲ್ಲೇಖಿಸಿರುವ ಇಲಾಖೆ, ಸರ್ಕಾರದ ಸೂಚನೆಯಂತೆ ವೇತನ ಸಹಿತ ರಜೆ ಮಂಜೂರು ಮಾಡಲಾಗಿದೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಕಿಯರಿಗೆ ವೇತನ ಸಹಿತ ಋುತುಚಕ್ರ ರಜೆ ನೀಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು. ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಉಲ್ಲೇಖಿಸಿರುವ ಇಲಾಖೆ, ಸರ್ಕಾರಿ ಶಾಲೆ ಶಿಕ್ಷಕಿಯರಿಗೆ ಋತುಚಕ್ರದ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೆಎಸ್ಆರ್ಟಿಸಿ ಮಹಿಳಾ ಸಿಬ್ಬಂದಿಗೆ ರಜೆ: ಕೆಎಸ್ಆರ್ಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ಋುತುಚಕ್ರ ರಜೆಗೆ ಅನುಮತಿ ನೀಡಿ ನಿಗಮ ಆದೇಶ ಹೊರಡಿಸಿದೆ. 18ರಿಂದ 52 ವರ್ಷ ವಯಸ್ಸಿನ ಮಹಿಳಾ ಸಿಬ್ಬಂದಿ ಋುತುಚಕ್ರ ರಜೆ ಪಡೆಯಬಹುದು ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂಪಾಷಾ ಆದೇಶ ಹೊರಡಿಸಿದ್ದಾರೆ.
ಮಹಿಳೆಯರು ಗಮನಿಸಬೇಕಾದ ಪ್ರಮುಖ ಅಂಶಗಳು: ಸಾಂದರ್ಭಿಕ ರಜೆ ನೀಡಲು ಸಕ್ಷಮದ ಪ್ರಾಧಿಕಾರಿಯೂ ಋುತುಚಕ್ರ ರಜೆ ಮಂಜೂರು ಮಾಡಬಹುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಈ ರಜೆಯನ್ನು ಪಡೆಯಲು ಯಾವುದೇ ವೈದೈಕೀಯ ಪ್ರಮಾಣಪತ್ರದ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.
ರಜೆಯನ್ನು ಪ್ರತ್ಯೇಕವಾಗಿ ಹಾಜರಾತಿ ಪುಸ್ತಕದಲ್ಲಿ ನಮೂದಿಸಬೇಕು ಎಂದು ಸೂಚನೆ ನೀಡಲಾಗಿದೆ. ಋುತುಚಕ್ರದ ರಜೆಯನ್ನು ಆಯಾ ತಿಂಗಳಿನಲ್ಲೇ ಬಳಕೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದ್ದು, ಮುಂದಿನ ತಿಂಗಳಿಗೆ ವಿಸ್ತರಣೆ ಮಾಡಲು ಅವಕಾಶ ಇಲ್ಲ ಎಂದು ನಿಗಮ ಸ್ಪಷ್ಟಪಡಿಸಲಾಗಿದೆ.ಹೀಗೆ ಸರ್ಕಾರ ಮಹಿಳೆಯರಿಗೆ ಅನುಕೂಲ ಆಗುವಂತೆ ಗುಡ್ ನ್ಯೂಸ್ ನೀಡುತ್ತಲಿರುತ್ತದೆ.
ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ: ಮಧ್ಯಾಹ್ನದ ಬಿಸಿಯೂಟವನ್ನು ಇಷ್ಟು ದಿನ ಬರೀ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತಿತ್ತು. ಆದರೆ, ಇದೀಗ ಇದನ್ನು ವಿಸ್ತರಣೆ ಮಾಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ, ಅದೇನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಎಲ್ಕೆಜಿ, ಪಿಯುಸಿ ವಿದ್ಯಾರ್ಥಿಗಳಿಗೆ ವಿಸ್ತರಿಸಲು ರಾಜ್ಯ ಸರ್ಕಾರ ಗಟ್ಟಿ ನಿರ್ಧಾರ ಮಾಡಿದೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಈ ಘೋಷಣೆ ಮಾಡಿದ್ದಾರೆ.
ಈ ಮಹತ್ವದ ನಿರ್ಧಾರದಿಂದ ಅದೆಷ್ಟೋ ವಿದ್ಯಾರ್ಥಿಗಳ ಹಸಿವು ನೀಗಿಸಲು ಸಾಧ್ಯ ಆಗಲಿದೆ. ಹಳ್ಳಿಗಳಿಂದ ಕಾನ್ವೆಂಟ್ ಹಾಗೂ ಕಾಲೇಜುಗಳಿಗೆ ಪ್ರತಿನಿತ್ಯ ಏನೆಲ್ಲಾ ಅಂದರೂ ಲಕ್ಷಾಂತರ ವಿದ್ಯಾರ್ಥಿಗಳು ಬರುತ್ತಾರೆ. ಇದರಲ್ಲಿ ಬಹುತೇಕ ಮಂದಿ ಮಧ್ಯಾಹ್ನದ ಬಿಸಿಯೂಟ ಇಲ್ಲದೆ, ಹಸಿವಿನಿಂದ ಇರುತ್ತಾರೆ. ಇದೀಗ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಮಹತ್ವದ ನಿರ್ಧಾರದಿಂದ ಈ ಸಮಸ್ಯೆ ಬರೆಹರಿದಂತಾಗಲಿದೆ.
ಸಚಿವರು ಕೊಟ್ಟಿರುವ ಮಾಹಿತಿ ಪ್ರಕಾರ, ಈ ಮಹತ್ವದ ಯೋಜನೆಯು ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗುತ್ತಿದೆ. ಆದರೆ, ಗ್ರಾಮೀಣ ಭಾಗದ ಮತ್ತು ಬಡ ಕುಟುಂಬದ ಪಿಯುಸಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಇಲ್ಲದೆ ಹಸಿದುಕೊಂಡು ಪರದಾಡುವುದನ್ನ ಗಮನಿಸಿದ ಸರ್ಕಾರ ಇವರಿಗೂ ಇದನ್ನು ವಿಸ್ತರಿಸುವ ಮಹತ್ವದ ನಿರ್ಧಾರಕ್ಕೆ ಕೈಹಾಕಿದೆ ಎನ್ನಬಹುದು.
ಇದೀಗ ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಪೂರ್ವ ಪ್ರಾಥಮಿಕ ವಿಭಾಗಗಳಾಗಿರುವ ಎಲ್ಕೆಜಿ ಹಾಗೂ ಯುಕೆಜಿ ಮಕ್ಕಳಿಗೂ ಸಹ ಮಧ್ಯಾಹ್ನದ ಬಿಸಿಯೂಟ ನೀಡಲು ನಿರ್ಧರಿಸಿದೆ. ಅಪೌಷ್ಟಿಕತೆಯನ್ನು ಹೋಗಲಾಡಿಸಿ, ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎನ್ನಲಾಗಿದೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications