ರಾಜ್ಯದಲ್ಲಿ ಬೆಳೆ ಸಮೀಕ್ಷೆ ವ್ಯತ್ಯಾಸವಾಗಿದ್ದ ರೈತರಿಗೆ ಗುಡ್ ನ್ಯೂಸ್: ಸಂಪೂರ್ಣ ವಿವರ ತಿಳಿಯಿರಿ
ಬೆಳಗಾವಿ: ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ ಬೆಳೆ ಸಮೀಕ್ಷೆ ರೈತರ ಆ್ಯಪ್ ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು. ರಾಜ್ಯದ ಎಲ್ಲ ರೈತರ ತಾಕುಗಳ ಬೆಳೆ ಮಾಹಿತಿ ದಾಖಲಿಸುವ ಸಲುವಾಗಿ ಆದ್ಯತೆ ಮೇರೆಗೆ ಪ್ರಥಮವಾಗಿ ಸ್ವತಃ ರೈತರೇ "ಬೆಳೆ ಸಮೀಕ್ಷೆ ರೈತರ ಆ್ಯಪ್" ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ.

ಸಕಾಲದಲ್ಲಿ ರೈತರು ಬೆಳೆ ಸಮೀಕ್ಷೆ ಮಾಡದೇ ಇದ್ದಲ್ಲಿ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಖಾಸಗಿ ನಿವಾಸಿಗಳ ಬದಲಿಗೆ ಸಂಘ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆ ಮಾಡಿಸಲು ಅವಕಾಶ ಕಲ್ಪಿಸಿಲ್ಲ. ಬೆಳೆ ಮಾಹಿತಿ ಕುರಿತಂತೆ ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 4.40 ಕೋಟಿ ತಾಕುಗಳ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಸುಮಾರು 2 ಲಕ್ಷ ಆಕ್ಷೇಪಣೆಗಳೂ ಕೂಡ ಸಲ್ಲಿಕೆಯಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಮರು ಸಮೀಕ್ಷೆ ಮಾಡಿಸಿದ್ದೇವೆ. ಅಧಿಕಾರಿ, ಸಿಬ್ಬಂದಿಗಳು ಎಲ್ಲಿಯೋ ಕುಳಿತು ಬೆಳೆ ಸಮೀಕ್ಷೆ ಮಾಡಲು ಅವಕಾಶ ಇರುವುದಿಲ್ಲ ಎಂದರು.
ದಟ್ಟ ಅರಣ್ಯ ಹಾಗೂ ಅಭಯಾರಣ್ಯ ಪ್ರದೇಶಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿಲ್ಲ. ಅಭಯಾರಣ್ಯ ಪ್ರದೇಶಗಳ ಅಂಚಿನ ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಲು ತೊಂದರೆಯಾಗುತ್ತಿರುವ ಕುರಿತಂತೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ. ರೈತರೇ ಸ್ವತಃ ಬೆಳೆ ಸಮೀಕ್ಷೆಗೆ ಅವಕಾಶ ಕಲ್ಪಿಸಿರುವುದರಿಂದ ಈ ಸಮಸ್ಯೆ ಉದ್ಭವಿಸಿಲ್ಲ. ಮಲೆನಾಡು ಪ್ರದೇಶದ ಕೆಲವೆಡೆ ನೆಟ್ ವರ್ಕ್ ಸಮಸ್ಯೆಯಿಂದಾಗಿ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಕಷ್ಟಕರವಾಗಿದೆ, ಹೀಗಾಗಿ ಮ್ಯಾನುವಲ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಿ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸಲಹೆ ನೀಡಿದರು. ಇದೀಗ ಮಲೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿಯೂ ನೆಟ್ ವರ್ಕ್ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಉತ್ತರಿಸಿದರು.
1,250 ಕೋಟಿ ರೂ. ವೆಚ್ಚದ ಕೃಷಿ ಸಲಕರಣೆಗಳ ವಿತರಣೆ
ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದ 3.20 ಲಕ್ಷ ರೈತರಿಗೆ ಅಂದಾಜು 1,250 ಕೋಟಿ ರೂ. ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ನೀಲಪ್ಪ ಶಿವಣ್ಣನವರ್ ಅವರ ಪ್ರಶ್ನೆಗೆ ಉತ್ತರಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಇತ್ತೀಚೆಗೆ ಕೃಷಿ ಕೂಲಿ ಕಾರ್ಮಿಕರ ಕೊರತೆ ಕಂಡುಬರುತ್ತಿದೆ. ಹೀಗಾಗಿ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಯಂತ್ರೋಪಕರಣಗಳನ್ನು ಬಳಸುವ ಕಡೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಸರ್ಕಾರವೂ ರೈತರ ಬೇಡಿಕೆಗಳಿಗೆ ಅನುಗುಣವಾಗಿ ಕೃಷಿ ಯಂತ್ರೋಪಕರಣಗಳನ್ನು ವಿತರಿಸುವ ಕೆಲಸಕ್ಕೆ ಆದ್ಯತೆ ನೀಡಿದೆ. ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದ 3.20 ಲಕ್ಷ ರೈತರಿಗೆ ಅಂದಾಜು 1,250 ಕೋಟಿ ರೂ. ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಅಲ್ಲದೆ ಹೈಟೆಕ್ ಹಾರ್ವೆಸ್ಟ್ ಹಬ್ ಕಾರ್ಯಕ್ರಮದಡಿ 127 ಕೋಟಿ ರೂ. ವೆಚ್ಚದಲ್ಲಿ 348 ರೈತರಿಗೆ ಉಪಯುಕ್ತ ಕೃಷಿ ಯಂತ್ರೋಪಕರಣ ವಿತರಿಸಲಾಗಿದೆ ಎಂದರು.
ಪ್ರಸಕ್ತ ವರ್ಷ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ಒದಗಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಸೇರಿ ಒಟ್ಟು 428.82 ಕೋಟಿ ರೂ. ಗಳ ಅನುದಾನ ಮೀಸಲಿಟ್ಟಿದ್ದು, ಈಗಾಗಲೆ 319.57 ಕೋಟಿ ರೂ. ಅನುದಾನ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದೆ. ಈವರೆಗೆ 69722 ರೈತರಿಗೆ 271.71 ಕೋಟಿ ರೂ. ಗಳ ಸಹಾಯಧನ ಒದಗಿಸಲಾಗಿದೆ. ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಕೇಂದ್ರ ಸರ್ಕಾರಕ್ಕೂ ಹೆಚ್ಚಿನ ಅನುದಾನ ಒದಗಿಸಲು ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
-
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications