ಕರ್ನಾಟಕ ಪೊಲೀಸ್‌ - ಸಿಬ್ಬಂದಿ, ಕುಟುಂಬಸ್ಥರಿಗೆ ಗುಡ್‌ನ್ಯೂಸ್‌!

ರಾಜ್ಯ ಸರ್ಕಾರವು ಪೊಲೀಸರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಗುಡ್‌ನ್ಯೂಸ್‌ ಕೊಡಲಾಗಿದೆ. ಪೊಲೀಸ್‌ ಇಲಾಖೆಗೆ ಈಗಾಗಲೇ ಮೂರು ಕೋಟಿ ರೂ.‌ ಅನುದಾನ ನೀಡಲಾಗಿದೆ. ಬಜೆಟ್‌ನಲ್ಲಿ ಇನ್ನುಳಿದ ಅನುದಾನವನ್ನು ನೀಡಲಾಗುವುದು. ಸರ್ಕಾರವು ಮುಂದಿನ ದಿನಗಳಲ್ಲಿ ಪೊಲೀಸರಿಗೆ ಹೆಚ್ಚಿನ ಸವಲತ್ತುಗಳನ್ನು ಕಲ್ಪಿಸಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದ್ದಾರೆ. ಈ ಮೂಲಕ ರಾಜ್ಯದ ಪೊಲೀಸ್ ‌ಹಾಗೂ ಪೊಲೀಸ್‌ ಸಿಬ್ಬಂದಿಗೆ ಬಜೆಟ್ ಮಂಡನೆ ಮಾಡುವುದಕ್ಕೆ ಮುಂಚೆಯೇ ಭರ್ಜರಿ ಗುಡ್‌ನ್ಯೂಸ್‌ ಸಿಕ್ಕಿದೆ. ಇನ್ನೂ ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಪೊಲೀಸರಿಗೆ ಆರು ಕೋಟಿ ರೂ. ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ವಿವಿಧ ಕ್ರೀಡಾ ಸವಲತ್ತುಗಳನ್ನು ಕಲ್ಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಬೆಂಗಳೂರು ನಗರ ಪೊಲೀಸ್ ವತಿಯಿಂದ ಆಡುಗೋಡಿಯ ಸಿಎಆರ್ ಮೈದಾನದಲ್ಲಿ ನಡೆದ ಬೆಂಗಳೂರು ನಗರ ಪೊಲೀಸ್ "ವಾರ್ಷಿಕ ಕ್ರೀಡಾಕೂಟ 2024" ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೊಲೀಸ್ ಕ್ರೀಡಾಪಟುಗಳಿಗೆ ಹಾಗೂ ತಂಡಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

Good News for Karnataka Police and Their families

ಈಗಾಗಲೇ ಮೂರು ಕೋಟಿ ರೂ.‌ ಅನುದಾನ ನೀಡಲಾಗಿದೆ. ಬಜೆಟ್‌ನಲ್ಲಿ ಇನ್ನುಳಿದ ಅನುದಾನವನ್ನು ನೀಡಲಾಗುವುದು. ಸರ್ಕಾರವು ಮುಂದಿನ ದಿನಗಳಲ್ಲಿ ಪೊಲೀಸರಿಗೆ ಹೆಚ್ಚಿನ ಸವಲತ್ತುಗಳನ್ನು ಕಲ್ಪಿಸುತ್ತದೆ. ದೇಶದ ಬೇರೆ ಮಹಾನಗರ ಪೊಲೀಸರಿಗಿಂತ ಬೆಂಗಳೂರು ನಗರ ಪೊಲೀಸ್ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಕರ್ನಾಟಕ ಪೊಲೀಸರು ಇನ್ನು ಹೆಚ್ಚಿನ ರೀತಿಯಲ್ಲಿ ಸಮರ್ಥವಾಗಿ ಕೆಲಸ ಮಾಡಬೇಕಿದೆ ಎಂದು ನನಗೆ ಅನ್ನಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದಕ್ಷತೆ‌ ಮತ್ತು ಪ್ರಾಮಾಣಿಕತೆಯಲ್ಲಿ ಕರ್ನಾಟಕ‌ ಪೊಲೀಸ್ ಎರಡನೇ ಸ್ಥಾನದಲ್ಲಿದೆ‌ ಎಂಬುದನ್ನು ರಾಷ್ಟ್ರಮಟ್ಟದ ಜಾಗರಣಾ ಪತ್ರಿಕೆ ವರದಿ ಮಾಡಿದೆ. ಇದು ಸಂತೋಷ ತಂದಿದೆಯಾದರು. ಕರ್ನಾಟಕ ಪೊಲೀಸ್ ದೇಶದಲ್ಲಿ ಮೊದಲ ಸ್ಥಾನದಲ್ಲಿರಬೇಕು ಎಂದ ಅವರು, ಕರ್ತವ್ಯದ ವೇಳೆ ಪ್ರಾಣಾರ್ಪಣೆ ಮಾಡಿದ ಸಿಬ್ಬಂದಿಗಳನ್ನು ಸ್ಮರಿಸಿ, ಕೃತಜ್ಞತೆ ಸಲ್ಲಿಸಿದರು.

ಉತ್ತಮ ಆರೋಗ್ಯ ಮತ್ತು ದೈಹಿಕ ಸಾಮಾರ್ಥ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಮಾನಸಿಕವಾಗಿ ಏಕತೆಯ ಭಾವನೆ ಮೂಡಿಸುತ್ತದೆ. ಕರ್ತವ್ಯದಲ್ಲಿನ ಮಾನಸಿಕ ಒತ್ತಡಗಳನ್ನು ತಡೆಯುವ ಶಕ್ತಿ ಕ್ರೀಡೆಯಿಂದ ಬರುತ್ತದೆ. ಜೀವನದಲ್ಲಿ ಅನೇಕ‌ಸಲ ಸೋಲು, ಗೆಲುವುಗಳನ್ನು ಕಾಣುತ್ತೇವೆ. ಸೋಲನ್ನು ಸ್ವೀಕರಿಸುವ ಶಕ್ತಿ ಕ್ರೀಡೆಯಿಂದ ಬರುತ್ತದೆ. ಸ್ವತಃ ಕ್ರೀಡಾಪಟುವಾಗಿ ಇಂತಹ ಅನುಭವ ಕಂಡಿದ್ದೇನೆ ಎಂದರು.

ಬಜೆಟ್‌ನಲ್ಲಿ ಘೋಷಣೆ ಸಾಧ್ಯತೆ: ಇನ್ನು ಶನಿವಾರ (ಫೆಬ್ರವರಿ 1)ದಂದು ಕೇಂದ್ರ ಸರ್ಕಾರವು ಬಜೆಟ್ ಮಂಡನೆ ಮಾಡಿದೆ. ಇನ್ನು ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಬಜೆಟ್ ಮಂಡನೆ ಮಾಡಲಿದೆ. ಈ ಬಜೆಟ್‌ನಲ್ಲಿ ರಾಜ್ಯ ಪೊಲೀಸರಿಗೆ ವಿಶೇಷ ಅನುದಾನವನ್ನು ಮೀಸಲಿರಿಸುವ ಸಾಧ್ಯತೆ ಇದೆ. ಇದರ ಸುಳಿವನ್ನು ಗೃಹ ಸಚಿವ ಜಿ ಪರಮೇಶ್ವರ್‌ ಅವರು ಕೊಟ್ಟಿದ್ದಾರೆ.

ಇನ್ನು ಶನಿವಾರ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವರ ಪತ್ನಿ ಕನ್ನಿಕಾ ಪರಮೇಶ್ವರಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+