Good News: ಮದುವೆಯಾಗುವವರಿಗೆ ಶುಭಸುದ್ಧಿ-ಏನದು ಹಾಗೂ ಯಾರಿಗೆಲ್ಲ ಈ ಸೌಲಭ್ಯ?
Good News: ಸರ್ಕಾರ ಆಗಾಗ ಕಾರ್ಮಿಕರಿಗೆ ಗುಡ್ ನ್ಯೂಸ್ ಅನ್ನು ನೀಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೊಂದಾಯಿತ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಮಂಡಳಿಯು ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ ಸಹಾಯಧನವನ್ನು ನೀಡಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನೋಂದಾಯಿತ ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮಂಡಳಿಯು ಸಹಾಯಧನವನ್ನು ನೀಡುತ್ತದೆ.ಫಲಾನುಭವಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದ್ದು, ನೋ೦ದಾಯಿತ ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮ೦ಡಳಿಯು ಸಹಾಯಧನವನ್ನು ನೀಡಲಿದೆ.

ಯಾವೆಲ್ಲಾ ದಾಖಲೆ ಹಾಗೂ ಅರ್ಹತೆಗಳಿರಬೇಕು?
* ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ
* ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
* ಬ್ಯಾಂಕ್ ಪಾಸ್‌ಬುಕ್ ಪ್ರತಿ
* ವಿವಾಹ ನೋಂದಣಾಧಿಕಾರಿಗಳಿಂದ ಪಡೆದ ವಿವಾಹ ನೋಂದಣಿ ಪತ್ರ
* ಮದುವೆ ಕರ್ನಾಟಕ ರಾಜ್ಯದ ಹೊರಗೆ ಜರುಗಿದ್ದಲ್ಲಿ ಅಫಿಡವಿಟ್ ಸಲ್ಲಿಸಬೇಕಾಗುತ್ತದೆ.
* ಪಡಿತರ ಚೀಟಿ ಪ್ರತಿ
* ವರ ಮತ್ತು ವಧುವಿನ ಆಧಾರ್ ಕಾರ್ಡ್ ಪ್ರತಿ
* ಅರ್ಹತೆ ಮತ್ತು ಮಾನದಂಡಗಳು
* ಮ೦ಡಳಿಯಲ್ಲಿ ನೋ೦ದಾಯಿತ ಸದಸ್ಯರಾಗಿರಬೇಕು
* ನೋ೦ದಣಿ ದಿನಾ೦ಕದಿ೦ದ ಮದುವೆ ದಿನಾ೦ಕದವರೆಗೆ ಮ೦ಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.
* ಒ೦ದು ಕುಟು೦ಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶ ಇರುತ್ತದೆ.
* ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು
* ಮದುವೆಯ ದಿನಾ೦ಕದಿಂದ 6 ತಿಂಗಳೊಳಗೆ ಅರ್ಜಿ ಸಲ್ಲಿಸಬೇಕು.
ಕಾರ್ಮಿಕರ ಮಕ್ಕಳಿಗೆ ಶುಭಸುದ್ದಿ: ಕರ್ನಾಟಕ ಸರ್ಕಾರ ಕಾರ್ಮಿಕರಿಗೆ ಉತ್ತಮ ಯೋಜನೆಗಳನ್ನು ಜಾರಿ ಮಾಡುತ್ತಲೇ ಬರುತ್ತಿದೆ. ಇದೀಗ ಕರ್ಮಿಕರ ಮಕ್ಕಳಿಗೆ ಶುಭಸುದ್ದಿಯೊಂದನ್ನು ನೀಡಿದೆ. ಹಾಗಾದರೆ ಮಾಹಿತಿ ಇಲ್ಲಿದೆ ತಿಳಿಯಿಸಿ.
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಕರ್ನಾಟಕ ಕಾರ್ಮಿಕ ಮಂಡಳಿಯ ವೆಬ್‍ಸೈಟ್ WWW.klwbapps.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇಕಡ 50, ಪ.ಜಾ, ಪ.ಪಂ.ಶೇಕಡ 45ರಷ್ಟು ಅಂಕ ಪಡೆದು ತೇರ್ಗಡೆ ಆಗಿರಬೇಕು. ಹಾಗೂ ಕಾರ್ಮಿಕರ ಮಾಸಿಕ ವೇತನ 35,000 ರೂಪಾಯಿಗಿಂತ ಮೀರಿರಬಾರದು. ಅರ್ಜಿ ಸಲ್ಲಿಸಲು 2025ರ ಜನವರಿ 31 ಕೊನೆಯ ದಿನಾಂಸ ಆಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು ಇಲ್ಲಿಗೆ ಭೇಟಿ ನೀಡಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ 080-23475188, 8277291175, 8277120505, 9141585402, 9141602562ಗೆ ಕರೆ ಮಾಡಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.












Click it and Unblock the Notifications