Panchamasali, Vokkaliga Reservation: ಗುಡ್ ನ್ಯೂಸ್ ಕೊಟ್ಟ ಸರ್ಕಾರ

ಬೆಳಗಾವಿ,ಡಿಸೆಂಬರ್ 29: ರಾಜ್ಯ ಸರ್ಕಾರವು 2023 ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ, ಮೀಸಲಾತಿ ನೀಡುವ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.

ಈ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯದ ಮೀಸಲಾತಿ ಬೇಡಿಕೆ ಹಿನ್ನೆಲೆಯಲ್ಲಿ 2 ಎ ಹಾಗೂ 2 ಬಿ ಜೊತೆಗೆ 2 ಸಿ ಹಾಗೂ 2 ಡಿ ಪ್ರವರ್ಗ ಸೃಷ್ಟಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, 3 ಎ ನಲ್ಲಿ ಇರುವ ಒಕ್ಕಲಿಗರನ್ನು 2 ಸಿ ಗೆ ಸೇರ್ಪಡೆ ಹಾಗೂ 3 ಬಿ ಯಲ್ಲಿ ಇದ್ದ ಲಿಂಗಾಯತರನ್ನು 2 ಡಿ ಗೆ ಸೇರ್ಪಡೆ ಮಾಡಲು ತೀರ್ಮಾನ ಮಾಡಲಾಗಿದೆ. ಆದರೆ ಎಷ್ಟು ಪ್ರಮಾಣದಲ್ಲಿ ಮೀಸಲಾತಿ ನೀಡಬೇಕು ಎಂಬುದನ್ನು ಹಿಂದುಳಿದ ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ನಿರ್ಧಾರ ಮಾಡಲು ಸಂಪುಟ ಸಭೆ ತೀರ್ಮಾನ ಮಾಡಿದೆ ಎಂದು ಮಾಧುಸ್ವಾಮಿ ಹೇಳಿದರು.

Good News For Panchmasali And Okkaliga Community

ಇನ್ನೂ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. 2 ಎ ನಲ್ಲಿ 15% ಜನಸಂಖ್ಯೆ ಇದ್ದು, ಅವರಿಗೆ ನೀಡಲಾಗಿರುವ ಮೀಸಲಾತಿಯನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡದಿರಲು ತೀರ್ಮಾನ ಮಾಡಲಾಗಿದೆ. ಅದೇ ರೀತಿ 2 ಬಿ ಪ್ರವರ್ಗದಲ್ಲಿಯೂ ಯಾವುದೇ ಬದಲಾವಣೆ ಮಾಡದೆ ಇರಲು ನಿರ್ಧಾರ ಮಾಡಲಾಗಿದೆ. 3 ಎ ನಲ್ಲಿ ಇದ್ದ ಒಕ್ಕಲಿಗರನ್ನು‌ 2 ಸಿ ಗೆ ತರಲು ಹಾಗೂ 3 ಬಿ ನಲ್ಲಿ ಇದ್ದ ಲಿಂಗಾಯತರನ್ನು 2 ಡಿ ಪ್ರವರ್ಗಕ್ಕೆ ಸೇರ್ಪಡೆ ಮಾಡಲಾಗುವುದು. 2 ಸಿ ಹಾಗೂ 2 ಡಿ ನಲ್ಲಿ 3 ಎ ಹಾಗೂ 3 ಬಿ ನಲ್ಲಿ ಇದ್ದ ಸವಲತ್ತುಗಳನ್ನು ಈವರೆಗೆ ಅನುಭವಿಸುತ್ತಿದ್ದರು ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದರು.

Good News For Panchmasali And Okkaliga Community

ಇನ್ನು, Ews 10% ಮೀಸಲಾತಿಯ ಹೆಚ್ಚಳ ಮಾಡಲು ಅವಕಾಶ ಇದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 10% ಮೀಸಲಾತಿ ನೀಡಲು ನಿರ್ಧಾರ ಮಾಡಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರುವ ಜನರ ಸಂಖ್ಯೆಯಲ್ಲಿ ಎಷ್ಟು ಶೇಕಡಾ ಅವರಿಗೆ ನೀಡಬಹುದು ಎಂದು ನಿರ್ಧಾರ ಮಾಡಿ ಉಳಿದದ್ದನ್ನು 2 ಸಿ ಹಾಗೂ‌ 2 ಡಿ‌ಗೆ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+