Good News: ಈ ಭಾಗದ ಜನರಿಗೆ ಗುಡ್‌ನ್ಯೂಸ್; 94ಸಿ ಅರ್ಜಿಗಳ ವಿಲೇವಾರಿಗೆ ಡೆಡ್‌ಲೈನ್, ಹಕ್ಕುಪತ್ರ ವಿತರಣೆಗೆ ಸಿದ್ಧತೆ

ಸಕಲೇಶಪುರ: 94 ಸಿ ಅರ್ಜಿದಾರರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ಅದಾಲತ್ ನಡೆಸಿ ಒಂದೂವರೆ ತಿಂಗಳಲ್ಲಿ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಸೂಚನೆ ನೀಡಿದರು.

ಸಕಲೇಶಪುರ ತಾಲ್ಲೂಕು ಮಟ್ಟದ ಪ್ರಜಾಸೇನಾ ಆಂದೋಲನದ ಸಭೆ ನಡೆಸಿದ ಕೆ. ಎಂ. ಶಿವಲಿಂಗೇಗೌಡ ಅವರು ತಾಲ್ಲೂಕಿನ ಜನರ ಸಮಸ್ಯೆಗಳನ್ನು ಆಲಿಸಿದರು. ಸಚಿವರ ಸೂಚನೆ ಮೇರೆಗೆ 94 ಸಿ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿ ಅರ್ಜಿದಾರರು ಒದಗಿಸುವ ಸೂಕ್ತ ದಾಖಲೆಗಳನ್ನು ಪರಿಶೀಲಿಸಿ ನಿಗದಿತ ವೇಳೆಯಲ್ಲಿ ಬಗೆಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಅವರು ತಕ್ಷಣ ಭರವಸೆ ನೀಡಿದರು.

Good News for People This Region 94C Applications Be Cleared Soon Land Rights Distribution Set

ಬಗರ್ ಹುಕುಂ ಸಾಗುವಳಿ ಅರ್ಜಿ (ನಮೂನೆ 53), ಹಕ್ಕು ಪತ್ರ ವಿತರಣೆ, ಖಾತೆ ದುರಸ್ತಿ, ರುದ್ರಭೂಮಿಗೆ ಜಾಗ ಮಂಜೂರಾತಿ, ಆದಾಯ ಪ್ರಮಾಣಪತ್ರ ವಿತರಣೆ, ಬಸ್ ವ್ಯವಸ್ಥೆ ಸೇರಿದಂತೆ ಹಲವು ಕುಂದುಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸ್ಥಳದಲ್ಲೇ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸತತವಾಗಿ 7 ಗಂಟೆಗಳ ಕಾಲ ಬಿಡುವಿಲ್ಲದೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಚಿವರು, ಜನರ ಸಮಸ್ಯೆಗಳಿಗೆ ನಿರ್ದಿಷ್ಟ ಅವಧಿಯಲ್ಲೇ ಪರಿಹಾರ ಒದಗಿಸಬೇಕು. ಪ್ರಜಾಸೇವಾ ಆಂದೋಲನ ನಡೆದ ದಿನದಲ್ಲೇ ಕಾಲಮಿತಿ ನಿರ್ಧಾರವಾಗಬೇಕು. ಅದರಂತೆ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಇಲ್ಲದಿದ್ದರೆ ಪ್ರಜಾಸೇವಾ ಕಾನೂನಡಿ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗಳ್ಳಲಾಗುವುದು ಎಂದರು.

ಪ್ರಜಾಸೇವಾ ಇಲಾಖೆಯಡಿ ಸಲ್ಲಿಕೆಯಾಗುವ ಕುಂದುಕೊರತೆಗಳ ಅರ್ಜಿಗಳು ಡಿಜಿಟಲ್ ದಾಖಲೆಗಳಾಗಿ ಸೇರ್ಪಡೆಗೊಳ್ಳಲಿವೆ. ಇದರಿಂದ ಅವುಗಳಿಗೆ ಸಂಬಂಧಿಸಿ ಪರಿಹಾರ ಪ್ರಕ್ರಿಯೆ ಯಾವ ಹಂತದಲ್ಲಿದೆ ಎಂಬುದನ್ನು ಅರ್ಜಿದಾರರಿಗೆ ತಿಳಿದುಕೊಳ್ಳಬಹುದಾಗಿದೆ. ಒಂದು ವೇಳೆ ನಿಗದಿತ ಸಮಯದಲ್ಲಿ ಪರಿಹಾರ ಒದಗಿಸದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಕಟ್ಟೆಚ್ಚರಿಕೆ ನೀಡಿದರು. ದಿನದಾಂತ್ಯಕ್ಕೆ ಸುಮಾರು 300ಕ್ಕೂ ಹೆಚ್ಚು ಅರ್ಜಿದಾರರ ಸಮಸ್ಯೆಗಳನ್ನು ಆಲಿಸಿ, ನಿರ್ದಿಷ್ಟ ಅಧಿಕಾರಿಗಳಿಗೆ ಕಾಲಮಿತಿಯಲ್ಲಿ ಪರಿಹರಿಸುವಂತೆ ನಿರ್ದೇಶನ ನೀಡಿದರು.

ಸಕಲೇಶಪುರದಲ್ಲೇ ಮಳೆ ಕೊರತೆ

ಬರದ ನಾಡಿನವರು ಮಳೆ ವೀಕ್ಷಣೆಗೆ ಸಕಲೇಶಪುರಕ್ಕೆ ಬರುತ್ತಿದ್ದರು. ಆದರೆ ಈ ಬಾರಿ ಸಕಲೇಶಪುರದಲ್ಲೇ ಮಳೆ ಕೊರತೆ ಉಂಟಾಗಿದೆ. ಬೆಳೆ ನಷ್ಟವಾಗಿದೆ. ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಸಕಲೇಶಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಬೇಕು, ಶೀಘ್ರದಲ್ಲೇ ಬರ ಪರಿಹಾರ ಒದಗಿಸಬೇಕು ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಭರವಸೆ ನೀಡಿದರು.

ಸಕಲೇಶಪುರ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನದ ಸಭೆಯಲ್ಲಿ ಮಾತನಾಡಿದ ಕೆ. ಎಂ. ಶಿವಲಿಂಗೇಗೌಡ ಅವರು ಪಕ್ಷಾತೀತವಾಗಿ ಎಲ್ಲರೂ ಒಗ್ಗೂಡುವ ಮೂಲಕ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ತಾಲ್ಲೂಕಿನ ರೈತರ ಹಿತಕಾಪಾಡಬೇಕು ಎಂದರು.

ಪ್ರಜಾಸೇವಾ ಆಂದೋಲನ ದೇಶದಲ್ಲೇ ಮೊದಲು

ಸ್ವಕ್ಷೇತ್ರ ಅರಸೀಕೆರೆಯಲ್ಲಿ ಜನರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೆ. ಇದಕ್ಕೆ ಪೂರಕ ಎಂಬಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಪ್ರಜಾಸೇವಾ ಆಂದೋಲನವನ್ನು ಘೋಷಿಸಿದಾಗ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಅಭಿನಂದನೆ ಸಲ್ಲಿಸಿದ್ದೆ ಎಂದರು.

ಪ್ರಜೆಗಳ ಸಂಕಷ್ಟಗಳನ್ನು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ನೇರವಾಗಿ ಜನರ ಅಹವಾಲುಗಳನ್ನು ಸ್ವೀಕರಿಸಿ, ನಿಗದಿತ ಸಮಯಲ್ಲಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಕಾನೂನನ್ನು ಜಾರಿಗೊಳಿಸಿರುವುದು ಸ್ವತಂತ್ರ ಭಾರತದಲ್ಲೇ ಮೊದಲಾಗಿದೆ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು. ಈ ನಿಟ್ಟಿನಲ್ಲಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹರಿಸುವುದು ನಮ್ಮ ಉದ್ದೇಶವಾಗಿದೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಂದಾಗಿ ಪ್ರಜೆಗಳ ಹಿತವನ್ನು ಕಾಪಾಡುವ ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ಹಾಸನ ಸಂಸದರಾದ ಶ್ರೇಯಸ್ ಎಂ. ಪಟೇಲ್, ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್. ಮಂಜುನಾಥ್, ಜಿಲ್ಲಾಧಿಕಾರಿ ಲತಾಕುಮಾರಿ, ತಹಸೀಲ್ದಾರರು ಸೇರಿದಂತೆ ಹಿರಿಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಸೇರಿದಂತೆ ಹಲವರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+