ಬಡವರಿಗೆ ಗುಡ್‌ನ್ಯೂಸ್: ನಿವೇಶನ ಹಂಚಿಕೆಗೆ ವೇಗ; ತಿಂಗಳಾಂತ್ಯದೊಳಗೆ ಈ ಪ್ರದೇಶದಲ್ಲಿ ಭೂಮಿ ಗುರುತಿಸಲು ಜಿ. ಪರಮೇಶ್ವರ್ ಸೂಚನೆ

ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮ ಘೋಷಣೆಯಾದ ಬಳಿಕ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಸೆಪ್ಟೆಂಬರ್‌ 16ರ ಬುಧವಾರ ವಿಧಾನಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಭಾರತ್ ಜೋಡೋ ಯುವ ಸಂಘದ ನೋಂದಣಿ ಕಾರ್ಯ ತ್ವರಿತಗೊಳಿಸಿ: ಭಾರತ್ ಜೋಡೋ ಯುವ ಸಂಘ ಮುಖ್ಯಮಂತ್ರಿಯವರ ಕನಸಿನ ಯೋಜನೆಯಾಗಿದೆ. ಸಂಘಗಳ ನೋಂದಣಿ, ಮೆಂಟರ್ಸ್‌ಗಳ ನೇಮಕ ಸೇರಿದಂತೆ ಸಂಘ ಪ್ರಾರಂಭಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು. ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಕೂಡಲೇ ಅರ್ಜಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿಸಬೇಕು. ಭಾರತ್ ಜೋಡೋ ಯುವಕ ಸಂಘ ಇಡೀ ದೇಶದಲ್ಲಿ ಮೊದಲ ಬಾರಿಗೆ ಜಾರಿಗೊಳಿಸುತ್ತಿರುವ ಕಾರ್ಯಕ್ರಮ. ಇದರಿಂದ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಒಳ್ಳೆ ಹೆಸರು ಬರಲಿದೆ ಎಂದು ತಿಳಿಸಿದರು.

Good News for Poor G Parameshwar Orders Speedy Site Allocation Land Identification by Month-End

ಪ್ರಜಾಸೇವಾ ಅಭಿಯಾನದಲ್ಲಿ ಬರುವ ಅರ್ಜಿಗಳ ತ್ವರಿತ ವಿಲೇವಾರಿ ಮಾಡಿ : ಪ್ರಜಾಸೇವಾ ಅಭಿಯಾನದಲ್ಲಿ ಹೆಚ್ಚಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಬರುತ್ತಿವೆ‌. ಪಹಣಿ ತಿದ್ದುಪಡಿ, ಪೋಡಿ, ಪಿಂಚಣಿ ಸಮಸ್ಯೆ ಸೇರಿದಂತೆ ಮುಂತಾದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಆರ್‌ಟಿಸಿ, ಪೋಡಿ ಪ್ರಕರಣಗಳನ್ನು ಸರಳೀಕರಣಗೊಳಿಸಲಾಗಿದೆ. ಆದಾಗ್ಯೂ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳಿಂದ ಅಗತ್ಯ ಸಲಹೆ ಪಡೆದು, ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಬಡವರಿಗೆ ನಿವೇಶನ - ನಿರ್ಲಕ್ಷ್ಯ ಬೇಡ: ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮ ಘೋಷಣೆಯಾದ ಬಳಿಕ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಯೋಜನೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕೆಲ ಜಿಲ್ಲೆಗಳಲ್ಲಿ ಭೂಮಿ ಗುರುತಿಸುವ ಕೆಲಸ ಆಗಿಲ್ಲ. ನಿವೇಶನ ಸಿದ್ಧಪಡಿಸಲು ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಿಂಗಳಾಂತ್ಯದ ವೇಳೆಗೆ ಪೂರ್ಣಗೊಳಿಸಬೇಕು. ಈ ಬಗ್ಗೆ ನಿರ್ಲಕ್ಷಿಸುವುದು ಬೇಡ. ಹಿರಿಯ ಅಧಿಕಾರಿಗಳು ಟೆಕ್ನಿಕಲ್‌ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಜೇಂದರ್‌ ಕುಮಾರ್ ಕಟಾರಿಯಾ, ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿಗಳಾದ ಮನೋಜ್ ಕುಮಾರ್ ಮೀನಾ, ಕಂದಾಯ ಆಯುಕ್ತರಾದ ಮೀನಾ ನಾಗರಾಜ್, ಭೂ ಮಾಪನ ಮತ್ತು ಭೂ ದಾಖಲೆ‌ ಇಲಾಖೆಯ ಆಯುಕ್ತರಾದ ವೆಂಕಟರಾಜ್ ಸೇರಿದಂತೆ ಹಲವರು ಹಾಜರಿದ್ದರು.

ಗೋವಾದಿಂದ ಬರುತ್ತಿರುವ ಅಕ್ರಮ ಮದ್ಯಕ್ಕೆ ಕಟ್ಟುನಿಟ್ಟಿನ ಕಡಿವಾಣ: ಕೆ. ಎಂ. ಶಿವಲಿಂಗೇಗೌಡ

ಸಿಎಸ್‌ಆರ್‌ ನಿಧಿಯನ್ನು ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಶಾಲಾ-ಕಾಲೇಜು, ಆಸ್ಪತ್ರೆ, ವೈದ್ಯಕೀಯ ಉಪಕರಣ ಖರೀದಿಗೆ ಬಳಕೆ ಮಾಡಬೇಕು. ಇದರಿಂದ ಸಿಎಸ್‌ಆರ್‌ ನಿಧಿ ಸಮರ್ಪಕವಾಗಿ ಬಳಕೆಯಾಗಲು ಸಾಧ್ಯ ಎಂದು ಅಬಕಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಸಲಹೆ ನೀಡಿದ್ದಾರೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಿವಲಿಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಸಿಎಸ್‌ಆರ್‌ ನಿಧಿಯಡಿ ಕೈಗೊಳ್ಳಬಹುದಾದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಡಿಸ್ಟಿಲರಿ ಮಾಲೀಕರು ಹಾಗೂ ಅಧಿಕಾರಿಗಳ ವರ್ಗದ ಜೊತೆಗೆ ಮಹತ್ವದ ಸಭೆ ನಡೆಯಿತು. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮದ್ಯ ವಿತರಣೆಯಾಗಬೇಕು.

ಅಕ್ರಮ ಮದ್ಯ ಉತ್ಪಾದನೆ ಮತ್ತು ಪೂರೈಕೆ ನಿಯಂತ್ರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮವಹಿಸಬೇಕು. ತೆರಿಗೆ ವಂಚಿಸುತ್ತಿರುವವರನ್ನು ಪತ್ತೆ ಹಚ್ಚಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಗೋವಾದಿಂದ ಎ ಕ್ಲಾಸ್‌ ಮದ್ಯ ತಂದು ಕರ್ನಾಟಕದಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+