Ration Card: ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್‌; ಇಲ್ಲಿದೆ ಮಾಹಿತಿ

Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದ್ದು, ಇದರಿಂದ ಸರ್ಕಾರದ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಪಡಿತರ ಚೀಟಿದಾರರಿಗೆ ಇದೀಗ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಗುಡ್‌ ನ್ಯೂಸ್‌ವೊಂದನ್ನು ನೀಡಿದೆ. ಹಾಗಾದರೆ ಆ ಶುಭ ಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಆಹಾರಧಾನ್ಯವನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಪಡಿತರ ವಿತರಣೆ ಕಾರ್ಯವನ್ನು ಈ ಹಿಂದೆ ಎನ್‍ಐಸಿ ತಂತ್ರಾಂಶದಿಂದ ನಿರ್ವಹಿಸಲಾಗುತ್ತಿತ್ತು. ಆದರೆ, ರಾಜ್ಯಾದ್ಯಂತ ಅಕ್ಟೋಬರ್ ತಿಂಗಳಿನಿಂದ ಎನ್‍ಐಸಿ ತಂತ್ರಾಂಶದಿಂದ ಬೇರ್ಪಡಿಸಿ ಕರ್ನಾಟಕ ಸ್ಟೇಟ್ ಡೆಟಾ ಸೆಂಟರ್(ಕೆಎಸ್‍ಡಿಸಿ)ನಿಂದ ಪಡಿತರ ವಿತರಣೆ ಕಾರ್ಯವನ್ನು ನಿರ್ವಹಿಸುತ್ತಿರುವುದರಿಂದ ಸರ್ವರ್ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

Good news for ration card holders by Food Civil Supplies and Consumer Affairs Department

ಇನ್ನು ಸರ್ವರ್ ತೀವ್ರಗತಿಯಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ಈಗಾಗಲೇ ಕೇಂದ್ರ ಕಚೇರಿಯ ಗಮನಕ್ಕೆ ತರಲಾಗಿದ್ದು, ಪಡಿತರ ಚೀಟಿದಾರರು ಆಂತಕಪಡುವ ಅಗತ್ಯ ಇಲ್ಲ. ಇದೇ ಅಕ್ಟೋಬರ್‌ ತಿಂಗಳ ಪಡಿತರ ವಿತರಣೆಯನ್ನು ನಿಗದಿತ ಅವಧಿಯೊಳಗಾಗಿ ಕಾರ್ಡುದಾರರಿಗೆ ವಿತರಣೆ ಮಾಡಲಾಗುವುದು. ಆದ್ದರಿಂದ ಕಾರ್ಡುದಾರರು ಆತಂಕಕ್ಕೆ ಒಳಗಾಗಬಾರದು ಎಂದು ಧಾರವಾಡ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮನೆ ನಿರ್ಮಾಣಕ್ಕೆ ಅನುದಾನ: ಸಾಮಾನ್ಯವಾಗಿ ರೇಷನ್‌ ಕಾರ್ಡ್‌ ಹೊಂದಿರುವವರು ಹಲವು ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಹಾಗೆಯೇ ಇದೀಗ ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲಗೊಂಡಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ವಾಜಪೇಯಿ ವಸತಿ ಯೋಜನೆಯಡಿ 177 ಮನೆಗಳು ಲಭ್ಯವಿದ್ದು, ಸಹಾಯಧನವಾಗಿ 2.70 ಲಕ್ಷ ರೂಪಾಯಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಪಂಗಡದ 18 ಮನೆಗಳು ಲಭ್ಯವಿದ್ದು, ಈ ಯೋಜನೆಯಡಿ 3.50 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ.

ಆಸಕ್ತರು ಗಂಡ, ಹೆಂಡತಿ ಇಬ್ಬರ ಆಧಾರ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪತ್ರ, ಬ್ಯಾಂಕ್ ಪಾಸ್ ಬುಕ್, ಚಾಲ್ತಿ ಇ-ಸ್ವತ್ತು, ಇಸಿ ನಕಲು, 2 ಭಾವಚಿತ್ರ ಪ್ರತಿಯೊಂದಿಗೆ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಲು ಆಯುಕ್ತರು ತಿಳಿಸಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ, ಪಡಿತರ ಚೀಟಿ ಹೊಂದಿರುವವರು ಸರ್ಕಾರದಿಂದ ತುಂಬಾ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+