Ration Card: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌

ಬೆಂಗಳೂರು, ಜುಲೈ, 06: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದುಯನ್ನು ನೀಡುತ್ತಲೇ ಬಂದಿದೆ. ಇದೀಗ ಮತ್ತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪಡಿತರ ಚೀಟಿದಾರರಿಗೆ ಭರ್ಜರಿ ಶುಭಸುದ್ದಿಯೊಂದನ್ನು ನೀಡಿದೆ. ಮಾಹಿತಿ ಇಲ್ಲಿದೆ ಗಮನಿಸಿ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ.

Good news for ration card holders from state government

ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್‌ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲ ಆದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ. ಆದ್ದರಿಂದ ತಮ್ಮ ಪಡಿತರ ಚೀಟಿ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ಮಾಡದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸರ್ಕಾರ ದಿನಾಂಕ ವಿಸ್ತರಣೆ ಮಾಡಿದ್ದು, ಇದನ್ನು ಮೊದಲು ಜೂನ್‌ 30ಕ್ಕೆ ನಿಗದಿ ಮಾಡಲಾಗಿತ್ತು.

ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರವು ದಿನಾಂಕವನ್ನು ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ ಮಾಡಿದೆ. ಹಾಗಾಗಿ ಯಾರೆಲ್ಲ ಇದುವರೆಗೆ ಪಡಿತರ ಚೀಟಿಗೆ ಜೊತೆ ಆಧಾರ್‌ ಕಾರ್ಡ್‌ ಜೋಡಣೆ ಮಾಡಿಲ್ಲವೋ ಕೂಡಲೇ ಲಿಂಕ್‌ ಮಾಡಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ತಿಳಿಸಿದೆ.

ಅಂಗನವಾಡಿ ಮಕ್ಕಳಿಗೆ ಶುಭಸುದ್ದಿ: ರಾಜ್ಯ ಸರ್ಕಾರವು ಅಂಗನವಾಡಿ ಮಕ್ಕಳಿಗೆ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ಹಾಗಾದರೆ ಆ ಶುಭಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯ ಸರ್ಕಾರದಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ ಎನ್ನುವ ಮಾಹಿತಿಯೊಂದು ಲಭ್ಯವಾಗಿತ್ತು. ಇದರ ಬೆನ್ನಲ್ಲೇ ಇದೀಗ ಅಂಗನವಾಡಿ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಬ್ಯಾಗ್, ಯೂನಿಫಾರ್ಮ್ ವಿತರಣೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಿದೆ ಎಂದರು.

ಕರ್ನಾಟಕ ಪಬ್ಲಿಕ್ ಶಾಲೆ (ಕೆ ಪಿಎಸ್) ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ನಿಮ್ಮ ಹಾಗೂ ಮಕ್ಕಳ ಇಬ್ಬರ ಹಿತದೃಷ್ಟಿಯಿಂದ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+