ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

50 ವರ್ಷ ದಾಟಿದ ಶಿಕ್ಷಕಿಯರಿಗೆ ಸರ್ಕಾರದಿಂದ ಸಿಹಿಸುದ್ದಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 5: ಐವತ್ತು ವರ್ಷ ದಾಟಿ ಶಿಕ್ಷಕಿಯರಿಗೆ ಕಡ್ಡಾಯ ವರ್ಗಾವಣೆ ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ.

ತೀವ್ರ ಅಸಮಾಧಾನಕ್ಕೆ ಕಾರಣವಾಗಿದ್ದ ಶಿಕ್ಷಕರ ಕಡ್ಡಾಯ ವರ್ಗಾವಣೆ ನಿಯಮಗಳಿಗೆ ಸರ್ಕಾರ ಕೊನೆಗೂ ತಿದ್ದುಪಡಿ ತರಲು ಮುಂದಾಗಿದ್ದು, ಐವತ್ತು ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ಶಿಕ್ಷಕರ ವರ್ಗಾವಣೆಯಲ್ಲಿನ ಗೊಂದಲಗಳ ನಿವಾರಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.

suresh kumar

ಈ ನಿಟ್ಟಿನಲ್ಲಿ ವರ್ಗಾವಣೆ ಪ್ರಕ್ರಿಯೆಯನ್ನು ಶಿಕ್ಷಕ ಸ್ನೇಹಿಯಾಗಿಸಲಾಗುವುದು. ಆ ನಿಟ್ಟಿನಲ್ಲಿ ಇನ್ನುಮುಂದೆ ಕಡ್ಡಾಯ ವರ್ಗಾವಣೆ ಎನ್ನುವ ಮಾನವೀಯ ನೆಲೆಯಲ್ಲಿ ವಲಯ ವರ್ಗಾವಣೆ ಎಂದು ಮರು ನಾಮಕರಣ ಮಾಡಲಾಗುವುದು ಎಂದರು.

ಸೆಪ್ಟೆಂಬರ್ 30 ರಿಂದ ಶಿಕ್ಷಕರ ವರ್ಗಾವಣೆ ಪುನರಾರಂಭಸೆಪ್ಟೆಂಬರ್ 30 ರಿಂದ ಶಿಕ್ಷಕರ ವರ್ಗಾವಣೆ ಪುನರಾರಂಭ

ಪ್ರಸ್ತುತ ವರ್ಗಾವಣೆ ನಿಯಮಗಳಲ್ಲಿನ ಶಿಕ್ಷಕ ವಿರೋಧಿ ಅಂಶಗಳಿಗೆ ತಿದ್ದುಪಡಿ ತಂದು 50 ವರ್ಷ ವಯೋಮಾನ ಮೀರಿದ ಶಿಕ್ಷಕಿಯರು ಮತ್ತು 55 ವರ್ಷ ಮೇಲ್ಪಟ್ಟ ಶಿಕ್ಷಕರುಗಳಿಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದರು.

ನಿವೃತ್ತಿಗೆ ಕೆಲ ವರ್ಷಗಳಷ್ಟೇ ಬಾಕಿ ಇರುವ ವಯಸ್ಸಿನಲ್ಲಿ ಅವರು ಬೇರೆಡೆ ಹೋಗಿ ನೆಲೆಯೂರುವುದು ಬಹಳ ಕಷ್ಟ ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ. ಬುದ್ಧಿಮಾಂದ್ಯ, ಅಂಗವಿಕಲ ಮಕ್ಕಳನ್ನು ಹೊಂದಿರುವ ಶಿಕ್ಷಕರೂ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡುವ ಚಿಂತನೆ ನಡೆದಿದೆ.

English summary
Good News For Government Teachers Who are in the Age of Above 50 years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X