ಸೇವಾ ಸಂಸ್ಥೆಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದ ಅರ್ಜಿ ಆಹ್ವಾನ, ಏನದು ?
ರಾಜ್ಯ ಕಾಂಗ್ರೆಸ್ ಸರ್ಕಾರವು ಸೇವಾ ಸಂಸ್ಥೆಗಳಿಗೆ ಗುಡ್‌ನ್ಯೂಸ್ ನೀಡಿದೆ. ಅಲ್ಲದೇ ಸೇವಾ ಸಂಸ್ಥೆಗಳು ಹಾಗೂ 60 ವರ್ಷದವರಿಗೆ (ನಿರ್ದಿಷ್ಟ ಮಾನದಂಡದ ಆಧಾರದ ಮೇಲೆ) ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅರ್ಜಿಗಳನ್ನು ಸಹ ಆಹ್ವಾನಿಸಲಾಗಿದ್ದು, ಸೆಪ್ಟೆಂಬರ್ 19ರ ಒಳಗಾಗಿ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಯಾರೆಲ್ಲ ಇದಕ್ಕೆ ಅರ್ಹರು ಹಾಗೂ ಏನಿದು ಪ್ರಶಸ್ತಿ ಎನ್ನುವ ವಿವರ ಇಲ್ಲಿದೆ.
ಮಹಾತ್ಮಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ 2024ಕ್ಕೆ ರಾಜ್ಯ ಸರ್ಕಾರವು ಅರ್ಜಿ ಆಹ್ವಾನಿಸಿದೆ. ರಾಜ್ಯ ಸರ್ಕಾರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಈ ಯೋಜನೆಯು ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡಿದೆ. ಮಹಾತ್ಮಗಾಂಧಿ ಸೇವಾ ಪ್ರಶಸ್ತಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡಿರುವವರು. ಆದರ್ಶಗಳನ್ನು ಅಳವಡಿಸಿಕೊಂಡಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಇಲ್ಲವೇ 25 ವರ್ಷ ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತಿದೆ. ಇನ್ನು ಈ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡುವ ಉದ್ದೇಶದಿಂದ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ. 2024ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ತಿಳಿಸಿದೆ.
ಮಹಾತ್ಮ ಗಾಂಧೀಜಿಯವರು ಅವರ ಜೀವಾನದಲ್ಲಿ ಪ್ರಚಾರ ಮಾಡಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ,ಮದ್ಯಪಾನ ವಿರೋಧಿ ನೀತಿ, ಗ್ರಾಮೀಣ ನೈರ್ಮಲ್ಯ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರದ ಅಂಶಗಳ ಆಧಾರದ ಮೇಲೆ ಈ ಆಯ್ಕೆ ಪ್ರಕ್ರಿಯೆಯು ನಡೆಯಲಿದೆ. ಅಲ್ಲದೇ ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವವರು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಸಹ ನಾಮನಿರ್ದೇಶನ ಮಾಡಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ ?
ಮಹಾತ್ಮಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ 2024ರ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19 ಕೊನೆಯ ದಿನವಾಗಿದೆ. ಈ ದಿನ ಅಂದರೆ ಸೆಪ್ಟೆಂಬರ್ 19ರ ಸಂಜೆ 5.30ರ ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : [email protected] ವಿಳಾಸಕ್ಕೆ ಕಳುಹಿಸಬಹುದು.












Click it and Unblock the Notifications