SSLC and PUC: ಎಸ್‌ಎಸ್‌ಎಲ್‌ಸಿ & ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್, ಪಾಸಿಂಗ್ ಮಾರ್ಕ್ಸ್ ಕಡಿಮೆ!
SSLC and PUC: ಕರ್ನಾಟಕದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ನ್ಯೂಸ್ ನೀಡಲಾಗಿದೆ. ಹೌದು ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಭಾರೀ ದೊಡ್ಡ ಮಟ್ಟದ ಗುಡ್‌ನ್ಯೂಸ್ ನೀಡುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಕಳೆದ ಕೆಲವು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಬರುತ್ತಿರುವುದು ಹಾಗೂ ಫೇಲ್ ಆಗುತ್ತಿರುವುದು ಸಹ ಇದಕ್ಕೆ ಕಾರಣವಾಗಿದೆ. ಕರ್ನಾಟಕ ಸರ್ಕಾರವು ರಾಜ್ಯದ ವಿದ್ಯಾರ್ಥಿಗಳಿಗೆ ಅದರಲ್ಲೂ ಮುಖ್ಯವಾಗಿ ಎಸ್‌ಎಸ್‌ಎಲ್‌ಸಿ & ಪಿಯುಸಿ ವಿದ್ಯಾರ್ಥಿಗಳಿಗೆ ಅಂಕದ ವಿಷಯದಲ್ಲಿ ಕೊಟ್ಟಿರುವ ಗುಡ್‌ನ್ಯೂಸ್ ಏನು ಎನ್ನುವುದು ಇಲ್ಲಿದೆ.
ಎಸ್‌ಎಸ್‌ಎಲ್‌ಸಿ & ಪಿಯುಸಿ ಪರೀಕ್ಷೆ ಹಾಗೂ ಪರೀಕ್ಷೆ ವಿಚಾರದಲ್ಲಿ ರಾಜ್ಯ ಸರ್ಕಾರವು ಮಹತ್ವದ ಬದಲಾವಣೆ ತರುವುದಕ್ಕೆ ಮುಂದಾಗಿದೆ. ಸಾಮಾನ್ಯವಾಗಿ ಪ್ರಮುಖ ಪರೀಕ್ಷೆಗಳ ಪಾಸಿಂಗ್ ಮಾರ್ಕ್ಸ್ 35 ಇತ್ತು. ಆದರೆ ಇನ್ಮುಂದಿನ ದಿನಗಳಲ್ಲಿ ಪಾಸಿಂಗ್ ಮಾರ್ಕ್ಸ್ 33 ಆಗಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ವಿಷಯದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡುವುದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ.

ನಿರ್ದಿಷ್ಟವಾಗಿ ಸಿಬಿಎಸ್‌ಇ ಮಾದರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗಿದ್ದು. SSLC ಪರೀಕ್ಷೆಯ ಪಾಸಿಂಗ್ ಮಾರ್ಕ್ಸ್ ಭರ್ಜರಿ ಕಡಿಮೆ ಮಾಡಲಾಗಿದೆ. ಇದು ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಂತೋಷವನ್ನುಂಟು ಮಾಡಿದೆ. ಇನ್ಮುಂದಿನ ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಲಿಖಿತ ಪರೀಕ್ಷೆ ಮತ್ತು ಆಂತರಿಕ ಅಂಕಗಳನ್ನು ಸೇರಿದಂತೆ ಒಟ್ಟು 100ಕ್ಕೆ ಕನಿಷ್ಠ ಶೇ. 33 ಅಂಕಗಳನ್ನು ಪಡೆದರೂ ಸಹ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ ಎಂದು ಹೇಳಲಾಗಿದ್ದು. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.
ಇದಕ್ಕೂ ಮೊದಲು ಕರ್ನಾಟಕದಲ್ಲಿ ಪಾಸಿಂಗ್ ಮಾರ್ಕ್ಸ್ 35 ಇತ್ತು. ವಿದ್ಯಾರ್ಥಿಗಳು ಆರು ವಿಷಯಗಳಲ್ಲೂ ಪಾಸ್ ಆಗುವುದಕ್ಕೆ 35 ಅಂಕಗಳನ್ನು ಪಡೆಯಬೇಕಾಗಿತ್ತು. ಇದೀಗ ಪ್ರತಿ ವಿಷಯದಲ್ಲೂ 30 ಅಂಕ ಪಡೆದರೆ ಪಾಸ್ ಆಗಲಿದ್ದಾರೆ. ಆದರೆ, ಪಾಸಿಂಗ್ ಅಗ್ರಿಗೇಟ್ ಶೇ 33% ಬರಬೇಕು ಎಂದು ಹೇಳಲಾಗಿದೆ. ಇನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಇದೇ ರೀತಿಯ ವಿನಾಯಿತಿಯನ್ನು ನೀಡಲಾಗಿದೆ. ಈ ವಿದ್ಯಾರ್ಥಿಗಳಿಗೂ ಬಹುತೇಕ ಎಸ್‌ಎಸ್‌ಎಲ್‌ಸಿ ಮಾದರಿಯ ಪಾಸಿಂಗ್ ಮಾರ್ಕ್ಸ್ ಅನ್ನೇ ನೀಡುವ ಸಾಧ್ಯತೆ ಇದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಾಸಿಂಗ್ ಮಾರ್ಕ್ಸ್ ಸಹ ಕಡಿಮೆ ಆಗಲಿದೆ.
ಆಕ್ಷೇಪಣಗೆ ಅವಕಾಶ: ಇನ್ನು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳ ಮಾರ್ಕ್ಸ್‌ನಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳನ್ನು ತರಲಾಗಿದ್ದು. ಈ ವಿಚಾರದ ಬಗ್ಗೆ ಆಕ್ಷೇಪಣೆ ಸಲ್ಲಿಸುವುದಕ್ಕೆ ಇನ್ನೂ 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.












Click it and Unblock the Notifications