ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಶಿಕ್ಷಣ ಇಲಾಖೆ

|
Google Oneindia Kannada News

ಬೆಂಗಳೂರು, ಮಾರ್ಚ್ 06: ಕೊರೋನಾ ಸಂಕಷ್ಟದಿಂದ ಪಾಠ ಇಲ್ಲದ ಕಾರಣ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ ! ಈಗಗಲೇ ಪಠ್ಯದಲ್ಲಿ ಶೇ. 30 ರಷ್ಟು ಕಡಿತಗೊಳಿಸಿದ್ದ ಶಿಕ್ಷಣ ಇಲಾಖೆ, ಜೂನ್‌ನಲ್ಲಿ ಮುಖ್ಯ ಪರೀಕ್ಷೆ ನಡೆಸುವ ವೇಳಾಪಟ್ಟಿ ಕೂಡ ಪ್ರಕಟಿಸಿದೆ. ಇದೀಗ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ವಿದ್ಯಾರ್ಥಿಗಳು ಸುಲಭವಾಗಿ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಈ ಬಾರಿ SSLC ಮುಖ್ಯ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬದಲಾವಣೆ ತಂದಿದೆ.

SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್!SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್!

ಈ ಬಾರಿ ಬಹು ಆಯ್ಕೆ ಪ್ರಶ್ನೆಗಳನ್ನು 30ಕ್ಕೆ ಏರಿಸಲಾಗಿದೆ. ಪ್ರತಿಭಾರಿಯೂ ಕೇವಲ 20 ಅಂಕಕ್ಕೆ ಬಹು ಆಯ್ಕೆ ( ಮಲ್ಟಿಪಲ್ ಚಾಯ್ಸ್ ) ಪ್ರಶ್ನೆಗಳು ಇರುತ್ತಿದ್ದವು. ಈ ಬಾರಿ ಹತ್ತು ಅಂಕಕ್ಕೆ ಹೆಚ್ಚುವರಿ ಬಹು ಆಯ್ಕೆ ಪ್ರಶ್ನೆಗಳನ್ನು ನೀಡಲಾಗಿದೆ. ಈ ಮೂಲಕ ಸುಲಭವಾಗಿ ತೇರ್ಗಡೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ಒಟ್ಟು ಒಂದು ವಿಷಯಕ್ಕೆ ನೂರು ಅಂಕವಿದ್ದು, 20 ಅಂಕ ಶಾಲೆ ನೀಡರುವ ಇಂಟರಲ್ ಮಾರ್ಕ್ಸ್, ಉಳಿದ 80 ಅಂಕಕ್ಕೆ ಪ್ರಶ್ನೆ ಪತ್ರಿಕೆ ಇರಲಿದೆ. ಅದರಲ್ಲಿ ಈ ಬಾರಿ 30 ಅಂಕ ಬಹು ಆಯ್ಕೆ ಪ್ರಶ್ನೆಗಳಿರಲಿವೆ. ಉಳಿದ 50 ಅಂಕಗಳಿಗೆ ಅಷ್ಟೇ ವಿದ್ಯಾರ್ಥಿಗಳು ಉತ್ತರ ಬರೆಯಬೇಕಾಗಿದೆ. ಈ ಮೊದಲು ಕೇವಲ 20 ಅಂಕಗಳಿಗೆ ಅಷ್ಟೇ ಬಹು ಆಯ್ಕೆ ಪ್ರಶ್ನೆಗಳು ಸೀಮಿತವಾಗಿತ್ತು.

Good news for SSLC students : Multiple choice questions increased Main exam-2021

Recommended Video

ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕೋಳ್ತಿದ್ದಾರಾ ನಮ್ಮ ಸಚಿವರು? | Oneindia Kannada

ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಓದಲಿಕ್ಕೆ ಅವಕಾಶ ಸಿಕ್ಕಿಲ್ಲ. ಶಾಲೆಗಳು ಮುಚ್ಚಿದ್ದರಿಂದ ಕಡ್ಡಾಯ ತರಗತಿಗಳು ನಡೆದಿಲ್ಲ. ಇದು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿತ್ತು. ಇದನ್ನು ಅರಿತ ಶಿಕ್ಷಣ ಇಲಾಖೆ ಮೊದಲ ಹಂತದಲ್ಲಿ ಶೇ. 30 ರಷ್ಟು ಪಠ್ಯ ಕಡಿತ ಮಾಡಿತ್ತು. ಇದೀಗ ಪ್ರಶ್ನೆ ಪತ್ರಿಕೆ ಮಾದರಿಯನ್ನೂ ಬದಲಿಸಿ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಇನ್ನಷ್ಟು ಅವಕಾಶ ಕಲ್ಪಿಸಿದೆ. ಇನ್ನು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಎಲ್ಲಾ ಶಾಲಾ ಮುಖ್ಯೋಪಾಧ್ಯಾಯರಿಗೆ ಕಳುಹಿಸಲಾಗಿದೆ. ಉಳಿದಂತೆ ಅಂಕಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರತಿವರ್ಷದಂತೆ ಗುಣಮಟ್ಟದ ಪರೀಕ್ಷೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ತಿಳಿಸಿದ್ದಾರೆ.

English summary
The Department of Education has increasedmultiple choice question in 2020-21 Karnataka SSLC Main Examination Question Paper.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X