SSLC Good News: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ಆತಂಕ ಬೇಡ!
SSLC Good News: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗುವುದಕ್ಕೆ ಇನ್ನು ಎರಡು ವಾರಗಳು ಮಾತ್ರ ಉಳಿದಿವೆ. ಈಗಾಲೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಲ್ಲಿ ಸಣ್ಣ ಟೆಕ್ಷನ್ ಶುರುವಾಗಿದೆ. ಇದೀಗ ಈ ಟೆಕ್ಷನ್ ಕಡಿಮೆ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಪರೀಕ್ಷೆ ಸಮಯದಲ್ಲಿನ ಗೊಂದಲ ಹಾಗೂ ಭಯವನ್ನು ಕಡಿಮೆ ಮಾಡುವ ಪ್ಲ್ಯಾನ್ ಇಲ್ಲಿದೆ. ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬಿಗ್‌ಗುಡ್‌ನ್ಯೂಸ್ ಕೊಟ್ಟಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಬಹುಮುಖ್ಯ ಘಟ್ಟವಾಗಿದೆ. ಈ ಹಂತದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತುಸು ಟೆಕ್ಷನ್ ಆಗುವುದು ಇದೆ. ಇದರಿಂದ ಅವರ ಪರೀಕ್ಷೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು ಇದನ್ನು ತಪ್ಪಿಸುವ ಗುಡ್‌ನ್ಯೂಸ್ ಇಲ್ಲಿದೆ. ಇನ್ನು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಈ ಬಾರಿ ಕಳೆದ ಬಾರಿಯಂತೆ ಗ್ರೇಸ್ ಮಾರ್ಕ್ಸ್ ಸಿಗಲ್ಲ. ನಿಯಮಗಳನ್ನು ಬದಲಾಯಿಸಿ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಏನು ?
SSLC ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಡಲಾಗಿದೆ. ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಉದ್ದೇಶದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ವಾರ್ಷಿಕ ಪರೀಕ್ಷೆ-1 ಇದೇ 21ರಿಂದ ಆರಂಭವಾಗುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ಯಾವುದೇ ಗೊಂದಲ ಮತ್ತು ಆತಂಕಕ್ಕೆ ಒಳಗಾಗಬಾರದು ಎನ್ನುವ ಉದ್ದೇಶದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಪರೀಕ್ಷೆ ಮಂಡಳಿ ಸಹಾಯವಾಣಿಯನ್ನು ಶುರು ಮಾಡಿದೆ.
080-23310075 ಹಾಗೂ 080- 23310076 ಉಚಿತ ದೂರವಾಣಿ ಸಂಖ್ಯೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ ಷೋಷಕರು ಕರೆ ಮಾಡಿ ಅವರ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಪರೀಕ್ಷೆ ವಿಧಾನ ಹಾಗೂ ಯಾವ ರೀತಿ ಪರೀಕ್ಷೆಗೆ ಸಿದ್ಧರಾಗಬೇಕು ಎನ್ನುವ ಪ್ರಾರಂಭಿಕ ಅಥವಾ ಪ್ರಾಥಮಿಕ ಸಲಹೆಗಳನ್ನು ಇದರಲ್ಲಿ ನೀಡಲಾಗುತ್ತದೆ.

ಹೆಚ್ಚು ಅಂಕ ಗಳಿಸಿ ಎನ್ನುವ ಒತ್ತಡ: ಮೊದಲೆಲ್ಲಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕದೊಂದಿಗೆ ಪಾಸ್ ಆದರೆ ಸಾಕು ಎನ್ನುವ ವಾತಾವರವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಅಂಕ ಗಳಿಸಬೇಕು ಎಂದು ವಿದ್ಯಾರ್ಥಿಗಳ ಮೇಲೆ ಅವರ ಪೋಷಕರು ಒತ್ತಡವನ್ನು ಹಾಕುತ್ತಿರುವುದು ಸಮಸ್ಯೆಗೆ ಕಾರಣವಾಗುತ್ತಿದೆ. ವಿದ್ಯಾರ್ಥಿಗಳು ಮಾನಸಿಕ ಸಮಸ್ಯೆಗೆ ಕಾರಣವಾಗುತ್ತಿದೆ. ವಿದ್ಯಾರ್ಥಿಗಳ ಪರಿಶ್ರಮವನ್ನು ಗಮನಿಸದೆ ಒತ್ತಡ ಹೆಚ್ಚು ಹಾಕಲಾಗುತ್ತಿದೆ.
ಸಹಾಯವಾಣಿಗೆ ಯಾವಾಗ ಕರೆ ಮಾಡಬಹುದು: ಮಾರ್ಚ್ 10ರಿಂದ 19ರ ವರೆಗೆ ಮಧ್ಯಾಹ್ನ 2.30ರಿಂದ ಸಂಜೆ 6.30ರ ವರೆಗೆ ಇರಲಿದೆ. ಇನ್ನು ಮಾರ್ಚ್ 16ಕ್ಕೆ ಬೆಳಿಗ್ಗೆ 11ರಿಂದ ಸಂಜೆ 5 ಗಂಟೆ ವರೆಗೆ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಿಯಂತ್ರಣ ಕೊಠಡಿಯಾಗಿ ಕಾರ್ಯ ನಿರ್ವಹಿಸಲಿದೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಇರಲಿದೆ. ಒಟ್ಟಾರೆ ಮಾರ್ಚ್ 10ರಿಂದ ಏಪ್ರಿಲ್ 4ರ ವರೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕರೆ ಮಾಡಿ ಮಾತನಾಡಬಹುದಾಗಿದೆ.
ವಿದ್ಯಾರ್ಥಿಗಳಲ್ಲಿ ಗೊಂದಲವನ್ನು ಕಡಿಮೆ ಮಾಡುವುದು ಹಾಗೂ ಅವರಿಗೆ ಆತ್ಮಸ್ಥೈರ್ಯವನ್ನು ತುಂಬುವ ಉದ್ದೇಶದಿಂದ ಸಹಾಯವಾಣಿಯನ್ನು ಪ್ರಾರಂಭಿಸಿರುವುದಾಗಿ ಮಂಡಳಿ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ.












Click it and Unblock the Notifications